ಜಿಯೋ, ಏರ್‌ಟೆಲ್, ವೊಡಾಫೋನ್: 300ರೂ.ಬೆಲೆಯಲ್ಲಿ ಯಾವ ಪ್ಲ್ಯಾನ್ ಬೆಸ್ಟ್?
ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸರ್ಕಾರ ದೇಶದಲ್ಲಿ 21 ದಿನಗಳ ಲಾಕ್‌ಡೌನ್ ಘೋಷಿಸಿತ್ತು. ಆದರೆ ಈ ಲಾಕ್‌ಡೌನ್ ಅನ್ನು ಇದೇ ಮೇ.3ರ ವರೆಗೂ ವಿಸ್ತರಿಸುವುದಾಗಿ ಹೇಳಿದೆ. ಈ ಸಂದರ್ಭದಲ್ಲಿ ಜನರು ಮನೆಯಲ್ಲಿಯೇ ಇರುವುದರಿಂದ ಇಂಟರ್ನೆಟ್ ಬಳಕೆ ಹೆಚ್ಚಾಗಿ ಅಗತ್ಯ ಇರುತ್ತದೆ. ಈ ನಿಟ್ಟಿನಲ್ಲಿ ಅಗ್ಗದ ಬೆಲೆಗೆ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒದಗಿಸುವ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚು ಉಪಯುಕ್ತ ಅನಿಸುತ್ತವೆ.

ಹೌದು, ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರಿಗೆ ಅನುಕೂಲವಾಗಲೆಂದು ಹಲವು ರೀಚಾರ್ಜ್ ಮಾಡುವ ಆಯ್ಕೆಗಳನ್ನು ಪರಿಚಯಿಸಿವೆ. ಹಾಗೆಯೇ ಕಡಿಮೆ ಬೆಲೆಯಲ್ಲಿ ಅಧಿಕ ಪ್ರಯೋಜನದ ಪ್ಲ್ಯಾನ್‌ಗಳ ಆಯ್ಕೆಗಳನ್ನು ಒಳಗೊಂಡಿವೆ. 300ರೂ. ಪ್ರೈಸ್‌ಟ್ಯಾಗ್‌ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒದಗಿಸುವ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್ ಸಂಸ್ಥೆಗಳ ಪ್ಲ್ಯಾನ್‌ಗಳು ಯಾವುವು ಮತ್ತು ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಜಿಯೋ 249ರೂ.ಪ್ಲ್ಯಾನ್
ಜಿಯೋ ಟೆಲಿಕಾಂನ 249ರೂ. ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಲಭ್ಯವಾಗುತ್ತದೆ. ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಇದರೊಂದಿಗೆ ಜಿಯೋ ಸಿನಿಮಾ, ಜಿಯೋ ಟಿವಿ ಸೇರಿದಂತೆ ಮೈ-ಜಿಯೋ ಆಪ್ಸ್ ಸೌಲಭ್ಯವು ದೊರೆಯುತ್ತದೆ.

ಏರ್‌ಟೆಲ್ 298ರೂ.ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಏರ್‌ಟೆಲ್ ಸ್ಟ್ರೀಮ್, ಉಚಿತ ಕಾಲರ್ ಟ್ಯೂನ್, Shaw ಅಕಾಡೆಮಿಯಿಂದ ಉಚಿತ ಆನ್‌ಲೈನ್ ಕೋರ್ಸ್, ಫಾಸ್ಟ್‌ಟ್ಯಾಗ್‌ನೊಂದಿಗೆ 150 ಕ್ಯಾಶ್‌ಬ್ಯಾಕ್ ಪ್ರಯೋಜನಗಳು ಲಭ್ಯವಾಗುತ್ತವೆ.

ವೊಡಾಫೋನ್ 299ರೂ. ಪ್ಲ್ಯಾನ್
ವೊಡಾಫೋನ್ 298ರೂ. ಪ್ರೀಪೇಡ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ವೊಡಾಫೋನ್ ಆಪ್‌ನ ಸೌಲಭ್ಯಗಳು ಸಹ ಲಭ್ಯವಾಗುತ್ತವೆ.

ವೊಡಾಫೋನಿನ 249ರೂ.ಪ್ಲ್ಯಾನ್
ವೊಡಾಫೋನ ಇತ್ತೀಚಿಗಷ್ಟೆ ತನ್ನ 249ರೂ.ಪ್ಲ್ಯಾನ್ ಪ್ರಯೋಜನಗಳಲ್ಲಿ ಡಬಲ್ ಕೊಡುಗೆ ಘೋಷಿಸಿದ್ದು, ಈ ಪ್ಲ್ಯಾನ್ ವೊಡಾಫೋನ್ 299ರೂ. ಪ್ಲ್ಯಾನ್‌ಗಿಂತ ಉತ್ತಮ ಆಯ್ಕೆ ಆಗಿದೆ. ವೊಡಾಫೋನ್ 249ರೂ.ಪ್ಲ್ಯಾನ್ ಸಹ 28 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಜೊತೆಗೆ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.


Click it and Unblock the Notifications








