Home
ಸುದ್ದಿಜಾಲ

ನಾಳೆಯಿಂದ ನಿಮ್ಮ ವಾಹನದಲ್ಲಿ ಈ ಸಾಧನ ಇರುವುದು ಕಡ್ಡಾಯ!

ಪ್ರಯಾಣಿಕರು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ಸುರಕ್ಷತೆಯನ್ನು ಅಧಿಕ ಮಾಡುವ ಗುರಿಯನ್ನು ಹೊಂದಿರುವ ಮಹತ್ವದ ಕ್ರಮದಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಶನ್‌ ಟ್ರ್ಯಾಕಿಂಗ್ (VLT) ಡಿವೈಸ್‌ಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಹೌದು, ಡಿಸೆಂಬರ್‌ 1 ರಿಂದ ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ. ಪ್ರಸ್ತುತ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ರೀತಿ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ದರೋಡೆ ಗಳಂತಹ ಕೆಲವು ಘಟನೆಗಳು ಮರುಕಳಿಸುತ್ತಲೇ ಇವೆ. ಈ ನಿಟ್ಟಿನಲ್ಲಿ ಸರ್ಕಾರ ಎಮರ್ಜೆನ್ಸಿ ಪ್ಯಾನಿಕ್ ಬಟನ್ (Emergency panic button) ಕಡ್ಡಾಯ ಮಾಡಿದೆ.

ನಾಳೆಯಿಂದ ನಿಮ್ಮ ವಾಹನದಲ್ಲಿ ಈ ಸಾಧನ ಇರುವುದು ಕಡ್ಡಾಯ!

ಈ ನಿಯಮ ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅನ್ವಯ ಆಗಲಿದೆ. ಯೆಲ್ಲೋ ಬೋರ್ಡ್​ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವೆಹಿಕಲ್‌ಗಳಿಗೂ ಈ ಆದೇಶ ಕಡ್ಡಾಯ ಎಂದು ಹೇಳಲಾಗಿದೆ. ಈ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (VLT) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯವಾಗಿ ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ನಾಳೆಯಿಂದ ನಿಮ್ಮ ವಾಹನದಲ್ಲಿ ಈ ಸಾಧನ ಇರುವುದು ಕಡ್ಡಾಯ!

ಸದ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಲ್ಲಿ ಈ ಡಿವೈಸ್ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆ ಜಾರಿಗೆ 2035.90 ಲಕ್ಷಗಳ ವೆಚ್ಚಕ್ಕೆ ಅನುಮೋದನೆ ಒದಗಿಸಲಾಗಿದ್ದು, ವಾಹನ ಮಾಲೀಕರು ಅರ್ಹ ಕಂಪನಿಗಳಿಂದ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ತಿಳಿಸಲಾಗಿದೆ.

ಡಿಸೆಂಬರ್ 1 ರಿಂದಲೇ ಈ ಯೋಜನೆ ಪ್ರಾರಂಭವಾಗಲಿದೆ. ಒಂದು ವರ್ಷದೊಳಗೆ (30/11/24 ) ಪರ್ಮಿಟ್ ವಾಹನಗಳು ಈ ಡಿವೈಸ್‌ಗಳನ್ನು ಅಳವಡಿಸಿರಬೇಕು. ಇಲ್ಲವಾದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಡಿವೈಸ್ ಅಳವಡಿಕೆ ಮಾಡದಿದ್ದರೆ ಎಫ್ ಸಿ ನವೀಕರಣವಾಗಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.

ನಾಳೆಯಿಂದ ನಿಮ್ಮ ವಾಹನದಲ್ಲಿ ಈ ಸಾಧನ ಇರುವುದು ಕಡ್ಡಾಯ!

ಪ್ರಮುಖವಾಗಿ ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು 7,599 ರೂ. ಗಳು ಎಂದು ನಿಗದಿ ಮಾಡಲಾಗಿದೆ. ಜಿಎಸ್‌ಟಿ ಹೊರತುಪಡಿಸಿ ಈ ಬೆಲೆಯನ್ನು ನಿಗದಿ ಮಾಡಲಾಗಿದೆ.

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಅಲರ್ಟ್‌ ಅನ್ನು ಕೂಡ ನೀಡಲಿದೆ.

ಅಲ್ಲದೇ ಪ್ರಯಾಣಿಕರ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ, ದರೋಡೆ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಅಲರ್ಟ್‌ ಮೆಸೆಜ್‌ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್‌ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯಗಳನ್ನು ತಡೆಯಬಹುದಾಗಿದೆ.

Best Mobiles in India

English summary
Karnataka govt mandates panic button and VLT for public service vehicles. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+