ಜಿಯೋ ಗ್ರಾಹಕರೇ ಇಂದೇ ಮೊಬೈಲ್ ರೀಚಾರ್ಜ್ ಮಾಡಿ, ಶೇ.20ರಷ್ಟು ಉಳಿಸಿ!
ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರಿಪೇಯ್ಡ್ ಪ್ಲ್ಯಾನ್‌ಗಳ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಆಘಾತ ನೀಡಿವೆ. ಗ್ರಾಹಕರು ತಮ್ಮ ಮೊಬೈಲ್ ರೀಚಾರ್ಜ್ ಮಾಡಿಸಲು ಈಗ ಹೆಚ್ಚಿನ ಹಣ ತೆರಬೇಕಿದೆ. ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ಹೊಸ ದರ ಈಗಾಗಲೇ ಜಾರಿಯಾಗಿವೆ. ಇನ್ನು ಜಿಯೋ ಟೆಲಿಕಾಂನ ಹೊಸ ಬೆಲೆಗಳು ಇದೇ ಡಿಸೆಂಬರ್ 1 ರಿಂದ (ನಾಳೆಯಿಂದ) ಜಾರಿ ಆಗಲಿವೆ. ಹೀಗಾಗಿ ಹಳೆಯ ದರದಲ್ಲಿ ಪ್ರಿಪೇಯ್ಡ್ ರೀಚಾರ್ಜ್ ಮಾಡಲು ಇಂದೇ ಕೊನೆಯ ದಿನ.

ಹೌದು, ಜಿಯೋ ಗ್ರಾಹಕರೇ ನಾಳೆಯಿಂದ (ಡಿ.1) ಪ್ರಿಪೇಯ್ಡ್ ಯೋಜನೆಗಳ ಹೊಸ ದರ ಜಾರಿ ಆಗಲಿದೆ. ನೀವೇನಾದರೂ ಇಂದೇ ರೀಚಾರ್ಜ್ ಮಾಡಿಸಿದರೇ ಶೇ.20% ಉಳಿಸಬಹುದು. ಅಲ್ಲದೇ ಕೆಲವೊಂದು ಪ್ರಿಪೇಯ್ಡ್ ಪ್ಲ್ಯಾನ್‌ಗಳಿಗೆ ಜಿಯೋ ಕ್ಯಾಶ್‌ಬ್ಯಾಕ್ ಕೊಡುಗೆ ನೀಡಿದೆ. ನಿಮ್ಮ ಪ್ರಿಪೇಯ್ಡ್ ಪ್ಲ್ಯಾನ್ ವ್ಯಾಲಿಡಿಟಿ ಮುಗಿಯೋಕೆ ಬಂದಿದ್ದರೇ ಅಥವಾ ಇನ್ನು ವ್ಯಾಲಿಡಿಟಿ ಚಾಲ್ತಿ ಇದ್ದರೂ ನೀವು ಮುಂಚಿತವಾಗಿ ರೀಚಾರ್ಜ್ ಮಾಡಿಸಬಹುದು. ಹಳೆಯ ಪ್ಲ್ಯಾನಿನ ಪ್ರಯೋಜನ ಯತಾಸ್ಥಿತಿ ಇರಲಿದೆ. ಆ ಯೋಜನೆ ಮುಗಿದ ಬಳಿಕವೇ, ನೀವು ಮುಂಗಡ ರೀಚಾರ್ಜ್ ಮಾಡಿದ ಯೋಜನೆ ಚಾಲ್ತಿ ಆಗಲಿದೆ. ಹಾಗಾದರೇ ಜಿಯೋ ಟೆಲಿಕಾಂನ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 199ರೂ. ಪ್ಲಾನ್ - ಹೊಸ ದರ 239ರೂ.
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋ 249ರೂ. ಪ್ಲಾನ್ - ಹೊಸ ದರ 299ರೂ.
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋ 329ರೂ. ಪ್ಲಾನ್ - ಹೊಸ ದರ 395ರೂ.
ಜಿಯೋದ ಈ ಪ್ಲ್ಯಾನಿನಲ್ಲಿ ಒಟ್ಟು 6GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 399ರೂ. ಪ್ಲಾನ್ - ಹೊಸ ದರ 479ರೂ.
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 444ರೂ. ಪ್ರೀಪೇಯ್ಡ್ ಪ್ಲಾನ್ - ಹೊಸ ದರ 533ರೂ.
ಜಿಯೋದ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 555ರೂ. ಪ್ರೀಪೇಯ್ಡ್ ಪ್ಲಾನ್ - ಹೊಸ ದರ 666ರೂ.
ಜಿಯೋ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 599ರೂ. ಪ್ರೀಪೇಯ್ಡ್ ಪ್ಲಾನ್ - ಹೊಸ ದರ 719ರೂ.
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 1299ರೂ. ಪ್ರೀಪೇಯ್ಡ್ ಪ್ಲಾನ್ - ಹೊಸ ದರ 1559ರೂ.
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 336 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಈ ಪ್ಲ್ಯಾನಿನಲ್ಲಿ ಪೂರ್ಣ ಅವಧಿಗೆ ಒಟ್ಟು 24 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಮ್ ಪ್ರಯೋಜನ ಸಿಗಲಿದೆ.

ಜಿಯೋ 2399ರೂ. ಪ್ರೀಪೇಯ್ಡ್ ಪ್ಲಾನ್ - ಹೊಸ ದರ 2879ರೂ.
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








