Home
ಸುದ್ದಿಜಾಲ

ಲಾವಾ ಅಗ್ನಿ 2 ಫೋನ್‌ಗೆ ಈಗ ಆಕರ್ಷಕ ರಿಯಾಯಿತಿ.. ಗ್ರಾಹಕರಿಗೆ ಬಿಗ್‌ ಸೇವಿಂಗ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಲಾವಾ ಸಂಸ್ಥೆಯು ಕೆಲವು ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಅವುಗಳಲ್ಲಿ ಲಾವಾ ಅಗ್ನಿ ಫೋನ್ ಸರಣಿಯ ಫೋನ್‌ಗಳು ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಅದರಲ್ಲಿಯೂ ಲಾವಾ ಅಗ್ನಿ 2 ಮೊಬೈಲ್‌ ಇದರ ಡಿಸೈನ್‌ ಹಾಗೂ ಫೀಚರ್ಸ್‌ಗಳಿಂದ ಅಧಿಕ ಗಮನ ಸೆಳೆದಿದೆ. ಆದರೆ ಈ ಫೋನ್‌ ಈಗ ಭಾರೀ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಅಗ್ನಿ 2 5G ಮೊಬೈಲ್‌ ಆಕರ್ಷಕ ರಿಯಾಯಿತಿ ಪಡೆದಿದೆ. 8GB RAM + 256GB ವೇರಿಯಂಟ್‌ನ ಈ ಫೋನ್‌ ದರವು 25,999ರೂ. ಆಗಿದ್ದು, ಆದರೆ ಈಗ ಆಫರ್‌ನಲ್ಲಿ 21,999ರೂ. ಖರೀದಿಗೆ ದೊರೆಯುತ್ತದೆ. ಇದರ ಜೊತೆಗೆ ಬ್ಯಾಂಕ್‌ ಆಫರ್‌ಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ. ಹಾಗಾದರೇ ಲಾವಾ ಅಗ್ನಿ 2 5G ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 2 ಫೋನ್‌ಗೆ ಈಗ ಆಕರ್ಷಕ ರಿಯಾಯಿತಿ.. ಗ್ರಾಹಕರಿಗೆ ಬಿಗ್‌ ಸೇವಿಂಗ್‌!

ಲಾವಾ ಅಗ್ನಿ 2 5G ಡಿಸ್‌ಪ್ಲೇ ಮಾಹಿತಿ :
ಲಾವಾ ಅಗ್ನಿ 2 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2220 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ಸಪೋರ್ಟ್‌ ನೊಂದಿಗೆ ಲಭ್ಯ ಇದೆ. ಅಲ್ಲದೇ HDR, HDR 10 ಮತ್ತು HDR 10+ ಅನ್ನು ಬೆಂಬಲಿಸಲಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್‌ ಮಾಹಿತಿ :
ಲಾವಾ ಅಗ್ನಿ 2 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಹೊಂದಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದರ ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಬೆಂಬಲ ಲಭ್ಯ.

ಲಾವಾ ಅಗ್ನಿ 2 5G ಕ್ಯಾಮೆರಾ ಮಾಹಿತಿ :
ಲಾವಾ ಅಗ್ನಿ 2 5G ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ 1.0 ಕ್ಯಾಮೆರಾ ಸೆನ್ಸಾರ್‌ ಪಡೆದುಕೊಂಡಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ.

ಲಾವಾ ಅಗ್ನಿ 2 5G ಫೋನ್ ಬ್ಯಾಟರಿ ಮಾಹಿತಿ :
ಲಾವಾ ಅಗ್ನಿ 2 5G ಮೊಬೈಲ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಪಡೆದಿದೆ. ಇದರಿಂದ ಈ ಫೋನ್‌ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್‌ ಆಗಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಸೌಲಭ್ಯ ಹೊಂದಿದೆ.

ಲಾವಾ ಅಗ್ನಿ 2 5G ಮೆಮೊರಿ ಆಯ್ಕೆ :
ಲಾವಾ ಅಗ್ನಿ 2 5G ಮೊಬೈಲ್ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಅನ್ನು ಹೊಂದಿದೆ. ಇನ್ನು ಈ ಮೊಬೈಲ್‌ ವಿರಿಡಿಯನ್ ಕಲರ್‌ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ. ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Lava Agni 2 5G attractive prices slashed on amazon. all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+