Home
ಸುದ್ದಿಜಾಲ

ಈ ಕರ್ವ್ಡ್‌ ಡಿಸ್‌ಪ್ಲೇ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಖರೀದಿ ಮಾಡ್ತೀರಾ?

ಸ್ವದೇಶಿ ಮೊಬೈಲ್‌ ಬ್ರ್ಯಾಂಡ್‌ ಆಗಿರುವ ಲಾವಾ ಸಂಸ್ಥೆಯು ಸದ್ಯ ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನ ಇತ್ತೀಚಿನ ಅಗ್ನಿ ಫೋನ್ ಸರಣಿಯಿಂದ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಮುಖ್ಯವಾಗಿ ಲಾವಾ ಅಗ್ನಿ 2 ಸ್ಮಾರ್ಟ್‌ಫೋನ್‌ ಡಿಸೈನ್‌ ಹಾಗೂ ಫೀಚರ್ಸ್‌ಗಳಿಂದ ಹೆಚ್ಚಿನ ಗಮನ ಸೆಳೆದಿದೆ. ಆದರೆ ಈ ಫೋನ್‌ ಈಗ ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಅಗ್ನಿ 2 5G ಮೊಬೈಲ್‌ ಸಖತ್‌ ರಿಯಾಯಿತಿ ಪಡೆದಿದೆ. ಈ ಫೋನ್‌ ಬೆಲೆಯು 24,999ರೂ. ಆಗಿದ್ದು, ಆದರೆ ಅಮೆಜಾನ್‌ ಸ್ಮಾರ್ಟ್‌ಫೊನ್‌ ಸೂಪರ್‌ ಹೀರೋ ಆಫರ್‌ನಲ್ಲಿ 20,999ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದಾಗಿದೆ. ಹಾಗೆಯೇ ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ದೊರೆಲಿದೆ.

ಈ ಕರ್ವ್ಡ್‌ ಡಿಸ್‌ಪ್ಲೇ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!..ಖರೀದಿ ಮಾಡ್ತೀರಾ?

ಲಾವಾ ಅಗ್ನಿ 2 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೇ ಈ ಮೊಬೈಲ್‌ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಅನ್ನು ಪಡೆದುಕೊಂಡಿದೆ. ಹಾಗಾದರೇ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ ಹೇಗಿದೆ : ಲಾವಾ ಅಗ್ನಿ 2 5G ಮೊಬೈಲ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2220 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ಬೆಂಬಲದೊಂದಿಗೆ ಲಭ್ಯ ಇದೆ. ಅಲ್ಲದೇ HDR, HDR 10 ಮತ್ತು HDR 10+ ಅನ್ನು ಸಪೋರ್ಟ್‌ ಮಾಡಲಿದ್ದು, ಫೋನ್ ಮ್ಯಾಟ್ ಫಿನಿಶ್ ಮತ್ತು ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್‌ ಒಳಗೊಂಡಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್‌ ಕಾರ್ಯವೈಖರಿ ಏನು : ಲಾವಾ ಅಗ್ನಿ 2 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸ್ಲೀಡ್‌ ನಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದರ ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಬೆಂಬಲ ಲಭ್ಯ.

ಲಾವಾ ಅಗ್ನಿ 2 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ಲಾವಾ ಅಗ್ನಿ 2 5G ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್‌ ಪಡೆದುಕೊಂಡಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸೆನ್ಸಾರ್ ಆಗಿದೆ. ಅಲ್ಲದೇ ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸಲ್‌ ಸೆನ್ಸಾರ್‌ ನಲ್ಲಿದೆ.

ಲಾವಾ ಅಗ್ನಿ 2 5G ಫೋನ್ ಬ್ಯಾಟರಿ ಬ್ಯಾಕ್‌ಅಪ್‌ ಮಾಹಿತಿ : ಲಾವಾ ಅಗ್ನಿ 2 5G ಮೊಬೈಲ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಪಡೆದಿದೆ. ಇದರಿಂದ ಈ ಫೋನ್‌ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್‌ ಆಗಲಿದೆ. ಜೊತೆಗೆ ಈ ಮೊಬೈಲ್‌ 5G ಯ 13 ಬ್ಯಾಂಡ್‌ಗಳನ್ನು ಸಹ ಸಪೋರ್ಟ್‌ ಮಾಡುತ್ತದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಸೌಲಭ್ಯ ಹೊಂದಿದೆ.

ಲಾವಾ ಅಗ್ನಿ 2 5G ಮೆಮೊರಿ ಹಾಗೂ ಕಲರ್ ಆಯ್ಕೆ : ಲಾವಾ ಅಗ್ನಿ 2 5G ಮೊಬೈಲ್ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಅನ್ನು ಹೊಂದಿದೆ. ಇನ್ನು ಈ ಮೊಬೈಲ್‌ ವಿರಿಡಿಯನ್ ಕಲರ್‌ ಆಯ್ಕೆಯಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ. ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ರಿಯಾಯಿತಿ ದರದಲ್ಲಿ ಖರೀದಿ ಮಾಡಬಹುದಾಗಿದೆ.

Best Mobiles in India

English summary
Lava Agni 2 5G available at huge discount price on amazon. offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+