Home
ಸುದ್ದಿಜಾಲ

ಲಾವಾ ಅಗ್ನಿ 2 5G ಬಿಡುಗಡೆಗೆ ದಿನಗಣನೆ! ಹೇಗಿದೆ ಸ್ಮಾರ್ಟ್‌ಫೋನ್‌ ಡಿಸೈನ್‌!

ದೇಶಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಲಾವಾ ಕಂಪೆನಿ ಇತ್ತೀಚಿಗೆ ಲಾವಾ ಅಗ್ನಿ ಸ್ಮಾರ್ಟ್‌ಫೋನ್‌ ಸಿಕ್ಕಾಪಟ್ಟೆ ಸೌಂಡ್‌ ಮಾಡಿತ್ತು. ಇದೀಗ ತನ್ನ ಹೊಸ ಲಾವಾ ಅಗ್ನಿ 2 5G ಅನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 16 ರಂದು ಭಾರತದಲ್ಲಿ ಬಿಡುಗಡೆ ಆಗೋದು ಅಧಿಕೃತವಾಗಿ ಕನ್ಫರ್ಮ್‌ ಆಗಿದೆ.

ಹೌದು, ಲಾವಾ ಕಂಪನಿ ಭಾರತದಲ್ಲಿ ಲಾವಾ ಅಗ್ನಿ 2 5G ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಲ್ಯಾಂಡಿಂಗ್‌ ಪೇಜ್‌ ಈಗಾಗಲೇ ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಸೈಟ್‌ನಲ್ಲಿ ಲೈವ್‌ ಆಗಿದೆ. ಲಾವಾ ಅಗ್ನಿ 2 5G ಫೋನ್‌ನ ಫೀಚರ್ಸ್‌ನ ಸಂಪೂರ್ಣ ವಿವರಗಳು ಇನ್ನು ಬಹಿರಂಗವಾಗಿಲ್ಲವಾದರೂ ಆನ್‌ಲೈನ್‌ನಲ್ಲಿ ಫೋನ್‌ನ ಸಂಪೂರ್ಣ ವಿನ್ಯಾಸವು ಸೋರಿಕೆಯಾಗಿದೆ. ಹಾಗಾದ್ರೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ನಲ್ಲಿ ನೀವು ನಿರೀಕ್ಷಿಸಬಹುದಾದ ಫೀಚರ್ಸ್‌ಗಳು ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ ಅಗ್ನಿ 2 5G ಬಿಡುಗಡೆಗೆ ದಿನಗಣನೆ! ಹೇಗಿದೆ ಸ್ಮಾರ್ಟ್‌ಫೋನ್‌ ಡಿಸೈನ್‌!

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ ಏನಿರಲಿದೆ?

ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1600 x 900 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್‌ ಯಾವುದು?

ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ವರದಿಯಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಲಾವಾ ಅಗ್ನಿ 2 5G ಬಿಡುಗಡೆಗೆ ದಿನಗಣನೆ! ಹೇಗಿದೆ ಸ್ಮಾರ್ಟ್‌ಫೋನ್‌ ಡಿಸೈನ್‌!

ಲಾವಾ ಅಗ್ನಿ 2 5G ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸಾದ್ಯತೆಯಿದೆ. ಇನ್ನು ಸ್ಮಾರ್ಟ್‌ಫೋನ್‌ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಲಾವಾ ಅಗ್ನಿ 2 5G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಬಹುದು. ಇದು 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸುವ ಸಾದ್ಯತೆಯಿದೆ. ಇದಲ್ಲದೆ ಹೆಡ್‌ಫೋನ್‌ ಜ್ಯಾಕ್‌ ಹಾಗೂ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ.

ಲಾವಾ ಅಗ್ನಿ 2 5G ಬಿಡುಗಡೆಗೆ ದಿನಗಣನೆ! ಹೇಗಿದೆ ಸ್ಮಾರ್ಟ್‌ಫೋನ್‌ ಡಿಸೈನ್‌!

ಲಾವಾ ಅಗ್ನಿ 2 5G ಬೆಲೆ ಮತ್ತು ಲಭ್ಯತೆ ವಿವರ

ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಇದೇ ಮೇ 16 ರಂದು ಲಾಂಚ್‌ ಆಗಲಿದ್ದು, ಬೆಲೆ ಹಾಗೂ ಲಭ್ಯತೆ ವಿವರಗಳು ಬಹಿರಂಗವಾಗಲಿದೆ.

ಇನ್ನು ಈಗಾಗಲೇ ಭಾರತದಲ್ಲಿ ಲಭ್ಯವಿರುವ ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಸಾಕಷ್ಟು ಟ್ರೆಂಡ್‌ ಹುಟ್ಟುಹಾಕಿತ್ತು. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಸಹ ಪಡೆದಿದೆ.

Best Mobiles in India

English summary
Lava Agni 2 5G Design Leaked Ahead of Launch: Expected specs Details in kannda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+