ಲಾವಾ ಅಗ್ನಿ 2 5G ಮೊಬೈಲ್‌ಗೆ ಸಿಗ್ತಾ ಇದೆ 31% ಆಫರ್: ಇನ್ಯಾಕೆ ತಡ ಕೂಡಲೇ ಖರೀದಿಸಿ!
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಟೆಕ್ ವಲಯದಲ್ಲಿ ಸಾಕಷ್ಟು ಬೇಡಿಕೆ ಪಡೆದಿದೆ. ಬಿಡುಗಡೆ ಆದ ದಿನದಿಂದಲೂ ಸಾಕಷ್ಟು ಡಿಮ್ಯಾಂಡ್ ಹೊಂದಿರುವ ಈ ಫೋನ್ ಇದೀಗ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ. ಅಮೆಜಾನ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಬಿಗ್ ಡಿಸ್ಕೌಂಟ್ ಪಡೆದುಕೊಂಡಿರುವುದು ಗ್ರಾಹಕರ ಅಚ್ಚರಿಗೆ ಕಾರಣವಾಗಿದೆ.
ಹೌದು, ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 31% ಡಿಸ್ಕೌಂಟ್ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ ಅನ್ವಯವಾಗಲಿದೆ. ಹಾಗಾದ್ರೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಡಿಸ್ಕೌಂಟ್ ನಂತರದ ಬೆಲೆ ಎಷ್ಟು? ಇದರ ಫೀಚರ್ಸ್ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ ಅಗ್ನಿ 2 5G ಡಿಸ್ಕೌಂಟ್ ಎಷ್ಟು?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನಿನ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯು ಅಮೆಜಾನ್ ತಾಣದಲ್ಲಿ 25,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ 31% ಡಿಸ್ಕೌಂಟ್ ನೀಡಲಾಗ್ತಿದೆ, ಆದರಿಂದ ಸ್ಮಾರ್ಟ್‌ಫೋನ್ ಅನ್ನು ಕೇವಲ 17,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಅನ್ನು ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.
ಲಾವಾ ಅಗ್ನಿ 2 5G ಫೀಚರ್ಸ್ ಹೇಗಿದೆ?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 2220x1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ HDR, HDR 10 ಮತ್ತು HDR 10+ ಅನ್ನು ಹೊಂದಿದ್ದು, ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್ ಪಡೆದಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್
ಲಾವಾ ಅಗ್ನಿ 2 5G ಪ್ರೊಸೆಸರ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಯನ್ನು ಬೆಂಬಲಿಸಲಿದೆ.
ಲಾವಾ ಅಗ್ನಿ 2 5G ಕ್ಯಾಮೆರಾ ರಚನೆ ಹೇಗಿದೆ?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 MP ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 MP ಮ್ಯಾಕ್ರೋ ಲೆನ್ಸ್ ಹಾಗೂ ನಾಲ್ಕನೇ ಕ್ಯಾಮೆರಾ 2 MP ಡೆಪ್ತ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಲಾವಾ ಅಗ್ನಿ 2 5G ಬ್ಯಾಟರಿ ಮತ್ತು ಇತರೆ
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್ ಫೋನ್ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್ ಆಗಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬೆಂಬಲವನ್ನು ಹೊಂದಿದೆ.


Click it and Unblock the Notifications








