ಬಿಡುಗಡೆಗೂ ಮುನ್ನವೇ ಅಬ್ಬರಿಸಿದ ಲಾವಾ ಅಗ್ನಿ 2 5G!..ಬೆಂಕಿ ಫೀಚರ್ಸ್!
ದೇಶಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಲಾವಾ ಕಂಪೆನಿ ಮತ್ತೊಮ್ಮೆ ಸುದ್ದಿಯಲ್ಲಿದೆ. 5G ಫೋನ್‌ಗಳ ಮೂಲಕ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವುದಕ್ಕೆ ಪ್ರಯತ್ನಿಸುತ್ತಿದೆ. ಈಗಾಗಲೇ ಲಾವಾ ಅಗ್ನಿ 5G ಮೂಲಕ ಅಬ್ಬರಿಸಿದ್ದ ಲಾವಾ ಕಂಪೆನಿ ಇದೀಗ ಲಾವಾ ಅಗ್ನಿ 2 5G ಮೂಲಕ ಬಿರುಗಾಳಿಯನ್ನೇ ಎಬ್ಬಿಸುವ ಸೂಚನೆ ನೀಡಿದೆ. ಸದ್ಯ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದವಾಗಿದ್ದು, ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡುವ ಸಾದ್ಯತೆಯಿದೆ.

ಹೌದು, ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಎಂಟ್ರಿ ನೀಡುವ ಸೂಚನೆ ಸಿಕ್ಕಿದೆ. ಈ ಸ್ಮಾರ್ಟ್‌ಫೋನ್ ಫೀಚರ್ಸ್ ಹಾಗೂ ಡಿಸೈನ್ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಲಾವಾ ಅಗ್ನಿ 2 5G ಡಿಸ್‌ಪ್ಲೇ ನಿರೀಕ್ಷೆ ಏನು?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 511 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್ ಯಾವುದು?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಿದೆ ಎಂದು ಅಂದಾಜಿಸಲಾಗಿದೆ.
ಲಾವಾ ಅಗ್ನಿ 2 5G ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಲಾವಾ ಅಗ್ನಿ 2 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿರಬಹುದು?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತದೆ.
ಲಾವಾ ಅಗ್ನಿ 2 5G ಬೆಲೆ ನಿರೀಕ್ಷೆ ಏನು?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಮಾರ್ಚ್ ಮಧ್ಯದಲ್ಲಿ ಅಥವಾ ಏಪ್ರಿಲ್‌ನಲ್ಲಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 20,000ರೂ. ಮತ್ತು 25,000ರೂ. ಬೆಲೆಗಳ ನಡುವೆ ಲಭ್ಯವಾಗುವ ಸಾಧ್ಯತೆಯಿದೆ.


Click it and Unblock the Notifications








