ಮಾರುಕಟ್ಟೆಯಲ್ಲಿ ದೂಳೆಬ್ಬಿಸಲು ಗ್ರ್ಯಾಂಡ್ ಎಂಟ್ರಿ ಕೊಟ್ಟ ಲಾವಾ ಅಗ್ನಿ 2 5G!
ಸ್ವದೇಶಿ ಬ್ರ್ಯಾಂಡ್ ಲಾವಾ ಕಂಪೆನಿ ತನ್ನ ಬಹು ನಿರೀಕ್ಷಿತ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ತನ್ನ ಫೀಚರ್ಸ್ ಲೀಕ್ ಮೂಲಕ ಸಾಕಷ್ಟು ಸದ್ದು ಮಾಡಿದ್ದ ಲಾವಾ ಅಗ್ನಿ 2 5G ನಿರೀಕ್ಷೆಗೆ ತಕ್ಕಂತೆ ಭಾರಿ ಸಂಚಲನ ಮೂಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲಿಸುವ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 6.78-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2220x1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ಬೆಂಬಲದೊಂದಿಗೆ ಬರಲಿದೆ. ಇದು HDR, HDR 10 ಮತ್ತು HDR 10+ ಅನ್ನು ಬೆಂಬಲಿಸಲಿದ್ದು, ಫೋನ್ ಮ್ಯಾಟ್ ಫಿನಿಶ್ ಮತ್ತು ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್ ಪಡೆದಿದೆ.
ಲಾವಾ ಅಗ್ನಿ 2 5G ಪ್ರೊಸೆಸರ್ ಯಾವುದು?
ಲಾವಾ ಅಗ್ನಿ 2 5G ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಬೆಂಬಲದೊಂದಿಗೆ ಬರುತ್ತದೆ.

ಲಾವಾ ಅಗ್ನಿ 2 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಲಾವಾ ಅಗ್ನಿ 2 5G ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್ ಹೊಂದಿದೆ. ಇನ್ನುಳಿದ ಕ್ಯಾಮೆರಾಗಳ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ.
ಲಾವಾ ಅಗ್ನಿ 2 5G ಫೋನ್ ಬ್ಯಾಟರಿ ಸಾಮರ್ಥ್ಯ
ಲಾವಾ ಅಗ್ನಿ 2 5G ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಹೊಂದಿದೆ. ಇದರಿಂದ ಈ ಫೋನ್ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್ ಆಗಲಿದೆ. ಇದಲ್ಲದೆ ಈ ಫೋನ್ 5G ಯ 13 ಬ್ಯಾಂಡ್‌ಗಳನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬೆಂಬಲವನ್ನು ಹೊಂದಿದೆ.

ಭಾರತದಲ್ಲಿ ಲಾವಾ ಅಗ್ನಿ 2 5G ಫೋನ್ ಬೆಲೆ ಮತ್ತು ಲಭ್ಯತೆ
ಲಾವಾ ಅಗ್ನಿ 2 5G ಫೋನ್ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 21,999ರೂ.ಬೆಲೆಯನ್ನು ಹೊಂದಿದೆ. ಇದು ಮೇ 24 ರಿಂದ ಅಮೆಜಾನ್ ಮೂಲಕ ಸೇಲ್ ಆಗಲಿದೆ. ಇನ್ನು ಸ್ಮಾರ್ಟ್‌ಫೋನ್ ಅನ್ನು ನೀವು ವಿರಿಡಿಯನ್ ಬಣ್ಣದ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ. ನೀವು ಈ ಫೋನ್ ಅನ್ನು ಬ್ಯಾಂಕ್ ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಸಿದರೆ 2,000ರೂ.ಗಳ ಪ್ಲ್ಯಾಟ್ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








