ಈ Amoled ಡಿಸ್‌ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್‌ಗೆ ನೀವು ಫಿದಾ ಆಗ್ತೀರಾ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ಮೊಬೈಲ್‌ಗಳು ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಅವುಗಳಲ್ಲಿ ಲಾವಾ ಬ್ರ್ಯಾಂಡ್ ಮೊಬೈಲ್‌ಗಳು ಸೇರಿದ್ದು, ಆ ಪೈಕಿ ಕರ್ವ್ಡ್ ಡಿಸ್‌ಪ್ಲೇ ರಚನೆ ಪಡೆದಿರುವ ಲಾವಾ ಅಗ್ನಿ 2 5G ಫೋನ್ ಕೂಡಾ ಸಖತ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಲಾವಾ ಮೊಬೈಲ್ ಸಂಸ್ಥೆಯ ಲಾವಾ ಅಗ್ನಿ 2 5G ಫೋನ್ ಬೆಲೆಯಲ್ಲಿ ಶೇ. 31% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್ ವೇರಿಯಂಟ್ 17,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಇನ್ನಷ್ಟು ರಿಯಾಯಿತಿ ಆಫರ್ ಸಹ ಪಡೆಯಬಹುದು.

ಇನ್ನು ಲಾವಾ ಸಂಸ್ಥೆಯ ಈ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದೆ. ಇನ್ನುಳಿದಂತೆ ಲಾವಾ ಅಗ್ನಿ 2 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ ಅಗ್ನಿ 2 5G ಫೋನ್ - ಫೀಚರ್ಸ್
ಲಾವಾದ ಈ ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2220 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ HDR, HDR 10 ಮತ್ತು HDR 10+ ಅನ್ನು ಸಪೋರ್ಟ್ ಮಾಡಲಿದ್ದು, ಫೋನ್ ಮ್ಯಾಟ್ ಫಿನಿಶ್ ಮತ್ತು ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್ ಹೊಂದಿದೆ.
ಲಾವಾ ಕಂಪನಿಯ ಲಾವಾ ಅಗ್ನಿ 2 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಅಲ್ಲದೇ ಈ ಫೋನ್ 8GB RAM ಮತ್ತು 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದ್ದು, ಇದರ ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಸಪೋರ್ಟ್ ಕೂಡಾ ಪಡೆದಿದೆ.
ಲಾವಾ ಅಗ್ನಿ 2 5G ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸಲ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಅಲ್ಲದೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಈ ಮೊಬೈಲ್ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಹೊಂದಿದ್ದು, ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ವ್ಯವಸ್ಥೆ ಒಳಗೊಂಡಿದೆ. ಈ ಆಯ್ಕೆ ಮೂಲಕ ಈ ಫೋನ್ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್ ಹೊಂದಲಿದೆ. ಹಾಗೆಯೇ ಇದು 5G ಯ 13 ಬ್ಯಾಂಡ್‌ಗಳನ್ನು ಸಹ ಸಪೋರ್ಟ್ ಮಾಡುತ್ತದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳನ್ನು ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಆಯ್ಕೆಗಳನ್ನು ಒಳಗೊಂಡಿದೆ.


Click it and Unblock the Notifications








