ಇಂದು ಮತ್ತೆ ಲಾವಾ ಅಗ್ನಿ 2 5G ಫೋನ್ ಸೇಲ್!..ಅಚ್ಚರಿಯ ಪ್ರೈಸ್‌ಟ್ಯಾಗ್!
ಲಾವಾ ಮೊಬೈಲ್ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಈಗಾಗಲೇ ಭಾರತದಲ್ಲಿ ಭಾರೀ ಸದ್ದು ಮಾಡಿದೆ. ಈ ಸ್ಮಾರ್ಟ್‌ಫೋನ್ ಇಂದು (ಜೂ 7) ಮತ್ತೆ ಇ ಕಾಮರ್ಸ್ ತಾಣ ಅಮೆಜಾನ್, ಲಾವಾ ಅಧಿಕೃತ ವೆಬ್‌ಸೈಟ್ ಮೂಲಕ ಮೊದಲ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.
ಹೌದು, ಲಾವಾ ಕಂಪೆನಿಯ ಹೊಸ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಇಂದು ಅಮೆಜಾನ್ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಫೋನ್ ಈಗಾಗಲೇ ಆನ್‌ಲೈನ್ ಮಾರಾಟ ಕಂಡಿದ್ದು, ಈಗ ಮತ್ತೆ ಮಾರಾಟ ಆರಂಭಿಸಿದೆ. ಇನ್ನು ಈ ಫೋನ್ ಆರಂಭಿಕ 8GB RAM ಮತ್ತು 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಈ ಫೋನಿನ ಬೆಲೆಯು 21,999ರೂ. ಆಗಿದೆ. ಇನ್ನುಳಿದಂತೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2220 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ಬೆಂಬಲದೊಂದಿಗೆ ಬರಲಿದೆ. ಇದು HDR, HDR 10 ಮತ್ತು HDR 10+ ಅನ್ನು ಬೆಂಬಲಿಸಲಿದ್ದು, ಫೋನ್ ಮ್ಯಾಟ್ ಫಿನಿಶ್ ಮತ್ತು ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್ ಪಡೆದಿದೆ.
ಲಾವಾ ಅಗ್ನಿ 2 5G ಪ್ರೊಸೆಸರ್ ಯಾವುದು : ಲಾವಾ ಅಗ್ನಿ 2 5G ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 16GB ವರೆಗೆ ವರ್ಚುವಲ್ ವಿಸ್ತರಣೆಗೆ ಬೆಂಬಲದೊಂದಿಗೆ ಬರುತ್ತದೆ.

ಲಾವಾ ಅಗ್ನಿ 2 5G ಕ್ಯಾಮೆರಾ ಸೆಟ್‌ಅಪ್ : ಲಾವಾ ಅಗ್ನಿ 2 5G ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್ ಹೊಂದಿದೆ. ಇನ್ನುಳಿದ ಕ್ಯಾಮೆರಾಗಳ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ.
ಲಾವಾ ಅಗ್ನಿ 2 5G ಫೋನ್ ಬ್ಯಾಟರಿ ಸಾಮರ್ಥ್ಯ : ಲಾವಾ ಅಗ್ನಿ 2 5G ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಹೊಂದಿದೆ. ಇದರಿಂದ ಈ ಫೋನ್ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್ ಆಗಲಿದೆ. ಇದಲ್ಲದೆ ಈ ಫೋನ್ 5G ಯ 13 ಬ್ಯಾಂಡ್‌ಗಳನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬೆಂಬಲವನ್ನು ಹೊಂದಿದೆ.
ಬೆಲೆ ಮತ್ತು ಲಭ್ಯತೆ : ಲಾವಾ ಅಗ್ನಿ 2 5G ಫೋನ್ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 21,999ರೂ.ಬೆಲೆಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ವಿರಿಡಿಯನ್ ಬಣ್ಣದ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








