Home
ಸುದ್ದಿಜಾಲ

Lava: ಲಾವಾ ಬ್ರ್ಯಾಂಡ್‌ನ ಈ ಫೋನ್‌ಗೆ ಭರ್ಜರಿ ಡಿಸ್ಕೌಂಟ್‌! ಹಿಂಭಾಗದಲ್ಲಿ ನಾಲ್ಕು ಕ್ಯಾಮೆರಾ!

ಅಮೆಜಾನ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲಿನ ವಿಶೇಷ ಆಫರ್‌ ಮುಂದುವರೆದಿದೆ. ಇದೀಗ ಸ್ವದೇಶಿ ಬ್ರ್ಯಾಂಡ್‌ ಲಾವಾದ ಫೋನ್‌ ಮೇಲೆ ಬಿಗ್‌ ಡಿಸ್ಕೌಂಟ್‌ ನೀಡಿದೆ. ಇದೇ ವರ್ಷ ಬಿಡುಗಡೆ ಆಗಿ ಸದ್ದು ಮಾಡಿದ್ದ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಮೇಲೆ ಬರೋಬ್ಬರಿ 23% ಡಿಸ್ಕೌಂಟ್‌ ನೀಡುತ್ತಿದೆ. ಈ ಮೂಲಕ ಫೋನ್‌ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

ಹೌದು, ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ಆಫರ್‌ ನೀಡುತ್ತಿದೆ. ಈ ಮೂಲಕ ಲಾವಾ ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಉತ್ತಮ ಅವಕಾಶ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Lava: ಲಾವಾ ಬ್ರ್ಯಾಂಡ್‌ನ ಈ ಫೋನ್‌ಗೆ ಭರ್ಜರಿ ಡಿಸ್ಕೌಂಟ್‌! ನಾಲ್ಕು ಕ್ಯಾಮೆರಾ!

ಲಾವಾ ಅಗ್ನಿ 2 5G ಡಿಸ್ಕೌಂಟ್‌ ಏನಿದೆ?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಅನ್ನು ಅಮೆಜಾನ್‌ ತಾಣದಲ್ಲಿ 25,999ರೂ ಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಮೇಲೆ ಬರೋಬ್ಬರಿ 23% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಇದನ್ನು ಕೇವಲ 19,999ರೂ ಬೆಲೆಗೆ ಖರೀದಿಸಬಹುದಾಗಿದೆ. ಇದಲ್ಲದೆ ವಿವಿಧ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಸ್ಮಾರ್ಟ್‌ಫೋನ್‌ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡ ಲಭ್ಯವಾಗಲಿದೆ.

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ ಹೇಗಿದೆ?
ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 2220x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಪಡೆದಿದ್ದು, HDR, HDR 10 ಮತ್ತು HDR 10+ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಡಬಲ್-ರೀನ್‌ ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್‌ ಹಾಗೂ ಮ್ಯಾಟ್ ಫಿನಿಶ್ ಪಡೆದಿದೆ.

ಲಾವಾ ಅಗ್ನಿ 2 5G ಪ್ರೊಸೆಸರ್‌ ಯಾವುದು?

ಲಾವಾ ಅಗ್ನಿ 2 5G ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದ್ದು, 16GB ವರೆಗೆ ವರ್ಚುವಲ್ ವಿಸ್ತರಣೆಗೆ ಬೆಂಬಲದೊಂದಿಗೆ ಬರುತ್ತದೆ.

ಲಾವಾ ಅಗ್ನಿ 2 5G ಕ್ಯಾಮೆರಾ ಸೆಟಪ್‌ ಏನಿದೆ?
ಲಾವಾ ಅಗ್ನಿ 2 5G ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8MP ಅಲ್ಟ್ರಾವೈಡ್ ಲೆನ್ಸ್‌, ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಹಾಗೂ ಮತ್ತು ನಾಲ್ಕನೇ ಕ್ಯಾಮೆರಾ 2MP ಡೆಪ್ತ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

Lava: ಲಾವಾ ಬ್ರ್ಯಾಂಡ್‌ನ ಈ ಫೋನ್‌ಗೆ ಭರ್ಜರಿ ಡಿಸ್ಕೌಂಟ್‌! ನಾಲ್ಕು ಕ್ಯಾಮೆರಾ!

ಲಾವಾ ಅಗ್ನಿ 2 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಲಾವಾ ಅಗ್ನಿ 2 5G ಫೋನ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 66W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಅನ್ನು ಹೊಂದಿದೆ. ಇದರಿಂದ ಈ ಫೋನ್‌ ಕೇವಲ 16 ನಿಮಿಷಗಳಲ್ಲಿ ಶೂನ್ಯದಿಂದ 50% ತನಕ ಚಾರ್ಜ್‌ ಆಗಲಿದೆ. ಇದಲ್ಲದೆ ಈ ಫೋನ್ 5G ಯ 13 ಬ್ಯಾಂಡ್‌ಗಳನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬೆಂಬಲವನ್ನು ಹೊಂದಿದೆ.

Best Mobiles in India

English summary
Lava Agni 2 5G smartphone available on massive discount price at Amazon website
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+