Home
ಸುದ್ದಿಜಾಲ

ಬಿಡುಗಡೆಗೆ ಸಜ್ಜಾದ ಲಾವಾ ಅಗ್ನಿ 2 5G!..ಮಾರುಕಟ್ಟೆಯಲ್ಲಿ ಅಬ್ಬರಿಸೋದು ಖಚಿತ!

ಲಾವಾ ಸಂಸ್ಥೆಯ ಇತ್ತೀಚಿನ ಲಾವಾ ಅಗ್ನಿ 5G ಫೋನ್ ಭಾರತದ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಅದರ ಮುಂದುವರಿದ ಭಾಗವಾಗಿ ಲಾವಾ ಸಂಸ್ಥೆಯ ಈಗ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಕಲ ಸಜ್ಜಾಗಿದೆ. ಈ ಫೋನ್‌ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಲಾವಾ ಅಗ್ನಿ 2 5G ಫೋನ್‌ ಇದೇ (ಮೇ) ತಿಂಗಳಿನಲ್ಲಿ ಬಿಡುಗಡೆ ಆಗುವುದು ಬಹುತೇಕ ಖಚಿತವಾಗಿದೆ. ಇನ್ನು ಈ ಫೋನಿನ ಬೆಲೆಯು ಸುಮಾರು 20,000ರೂ. ಒಳಗೆ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಒಳಗೊಂಡಿರಲಿದೆ.

ಬಿಡುಗಡೆಗೆ ಸಜ್ಜಾದ ಲಾವಾ ಅಗ್ನಿ 2 5G!..ಮಾರುಕಟ್ಟೆಯಲ್ಲಿ ಅಬ್ಬರಿಸೋದು ಖಚಿತ!

ಹಾಗೆಯೇ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ರಚನೆ ಇರಲಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಜೊತೆಗೆ ಈ ಫೋನ್‌ 8GB RAM ಸೇರಿದಂತೆ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿರಲಿದೆ. ಹಾಗಾದರೆ ಈ ಫೋನಿನ ಇನ್ನಿತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 2 5G ಡಿಸ್‌ಪ್ಲೇ ರಚನೆ : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 511 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ.

ಬಿಡುಗಡೆಗೆ ಸಜ್ಜಾದ ಲಾವಾ ಅಗ್ನಿ 2 5G!..ಮಾರುಕಟ್ಟೆಯಲ್ಲಿ ಅಬ್ಬರಿಸೋದು ಖಚಿತ!

ಲಾವಾ ಅಗ್ನಿ 2 5G ಪ್ರೊಸೆಸರ್‌ ಪವರ್ : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಲಾವಾ ಅಗ್ನಿ 2 5G ಕ್ಯಾಮೆರಾ ರಚನೆ : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಲಾವಾ ಅಗ್ನಿ 2 5G ಬ್ಯಾಟರಿ ಬ್ಯಾಕ್‌ಅಪ್‌ : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗುತ್ತದೆ.

ಲಾವಾ ಅಗ್ನಿ 2 5G ನಿರೀಕ್ಷಿತ ಬೆಲೆ ಎಷ್ಟು : ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಇದೇ ಮೇ ತಿಂಗಳಿನಲ್ಲಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 20,000ರೂ. ಮತ್ತು 25,000ರೂ. ಬೆಲೆಗಳ ನಡುವೆ ಲಭ್ಯವಾಗುವ ಸಾಧ್ಯತೆಯಿದೆ.

Best Mobiles in India

English summary
Lava Agni 2 5G India: Expected Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+