Home
ಸುದ್ದಿಜಾಲ

ಸದ್ಯದಲ್ಲೇ ದೇಶಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ರೆಡಿಯಾಗಿದೆ ಲಾವಾ ಅಗ್ನಿ 2S! ಲಾಂಚ್‌ ಯಾವಾಗ?

ದೇಶಿ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಲಾವಾ ಕಂಪೆನಿ ಶೀಘ್ರದಲ್ಲೇ ಮತ್ತೊಂದು ಹೊಸ ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ಲಾವಾ ಅಗ್ನಿ 2S ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಲಾವಾ ಅಗ್ನಿ 2 5G ಮಾದರಿಯಲ್ಲಿಯೇ ಇರಲಿದೆ ಎನ್ನಲಾಗಿದ್ದು, ವಿಭಿನ್ನ ಡಿಸೈನ್‌ನಲ್ಲಿ ಕಾಣಿಸಿಕೊಳ್ಳಲಿದೆ.

ಹೌದು, ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ ಕೆಲವೇ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7050 MT6877 ಪ್ರೊಸೆಸರ್‌ನಲ್ಲಿ ಬರಲಿದೆ. ಇದು ಆಂಡ್ರಾಯ್ಡ್‌ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗಾದ್ರೆ ಲಾವಾ ಅಗ್ನಿ 2S ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ದೇಶಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ರೆಡಿಯಾಗಿದೆ ಲಾವಾ ಅಗ್ನಿ 2S! ಲಾಂಚ್‌ ಯಾವಾಗ

ಲಾವಾ ಅಗ್ನಿ 2S ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ನಿರೀಕ್ಷೆ?
ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆಯುವ ನಿರೀಕ್ಷೆಯಿದ್ದು, 388 ಪಿಪಿಐ ಪಿಕ್ಸೆಲ್ ಸಾಂದ್ರತೆ ಹೊಂದಿರಲಿದೆ.

ಲಾವಾ ಅಗ್ನಿ 2S ಪ್ರೊಸೆಸರ್‌ ಯಾವುದು?
ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ನಲ್ಲಿ ಮೀಡಿಯಾಟೆಕ್‌ ಡೈಮೆನ್ಸಿಟಿ 7050 MT6877 ಪ್ರೊಸೆಸರ್‌ ಅನ್ನು ನಿರೀಕ್ಷಿಸಲಾಗಿದೆ. ಇದು ಮಾಲಿ-G68 MC4 ಸಪೊರ್ಟ್‌ ಪಡೆದಿದ್ದು, ಆಂಡ್ರಾಯ್ಡ್‌ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ವರದಿಯಾಗಿದೆ.

ದೇಶಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ರೆಡಿಯಾಗಿದೆ ಲಾವಾ ಅಗ್ನಿ 2S! ಲಾಂಚ್‌ ಯಾವಾಗ

ಲಾವಾ ಅಗ್ನಿ 2S ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ವೈಡ್ ಆಂಗಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಹೊಂದಿರಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆಯಿದೆ.

ಲಾವಾ ಅಗ್ನಿ 2S ಬ್ಯಾಟರಿ ಮತ್ತು ಇತರೆ ಸೌಲಭ್ಯ ನಿರೀಕ್ಷೆ?
ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 66W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ನೊಂದಿಗೆ ಬರಲಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ದೇಶಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ರೆಡಿಯಾಗಿದೆ ಲಾವಾ ಅಗ್ನಿ 2S! ಲಾಂಚ್‌ ಯಾವಾಗ

ಲಾವಾ ಅಗ್ನಿ 2S ಬೆಲೆ ಮತ್ತು ಲಭ್ಯತೆ
ಲಾವಾ ಅಗ್ನಿ 2S ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಕಲರ್‌ ಆಯ್ಕೆಗಳ ಬಗ್ಗೆ ಸಹ ಯಾವುದೇ ವಿಚಾರಗಳು ತಿಳಿದುಬಂದಿಲ್ಲ.

ಇನ್ನು ಲಾವಾ ಕಂಪೆನಿ ಇತ್ತೀಚಿಗೆ ಲಾವಾ ಬ್ಲೇಜ್‌ 2 5G ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ 4GB RAM ಮತ್ತು 64GB ಇಂಟರ್‌ ಸ್ಟೋರೇಜ್ ಹಾಗೂ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನ ಎರಡು ಆಯ್ಕೆಯಲ್ಲಿ ಲಭ್ಯ ಇವೆ.

Best Mobiles in India

English summary
Lava Agni 2S Smartphone is tipped to launch in India this month: Report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+