ನಾಳೆ Lava Agni 3 ಫಸ್ಟ್ ಸೇಲ್ ಪ್ರಾರಂಭ; ಎರಡು ಡಿಸ್‌ಪ್ಲೇ, 50MP ಕ್ಯಾಮೆರಾ!
ಲಾವಾ ಕಂಪನಿಯು ಇತ್ತೀಚಿಗೆ ಹೊಸದಾಗಿ ಭಾರತದಲ್ಲಿ ಬಿಡುಗಡೆ ಮಾಡಿರುವ ಲಾವಾ ಅಗ್ನಿ 3 (Lava Agni 3) ಫೋನ್ ಈಗಾಗಲೇ ಬೆಲೆ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್ ನಾಳೆ (ಜೂನ್ 26 ರಂದು) ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನ್ ಮೂರು ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಆಗಿದೆ.
ಹೌದು, ಲಾವಾ ಸಂಸ್ಥೆಯ ಇತ್ತೀಚಿನ ಲಾವಾ ಅಗ್ನಿ 3 ಫೋನಿನ ಮಾರಾಟ ನಾಳೆ (ಅಕ್ಟೋಬರ್ 9 ರಂದು) ಫ್ಲಿಪ್‌ಕಾರ್ಟ್‌ನಲ್ಲಿ ಪ್ರಾರಂಭ ಆಗಲಿದೆ. ಈ ಫೋನ್ 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದ್ದು, ಇದರೊಂದಿಗೆ 4700 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದುಕೊಂಡಿದೆ.

ಲಾವಾ ಅಗ್ನಿ 3 (Lava Agni 3) ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300X ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಹೀದರ್ ಗ್ಲಾಸ್ ಮತ್ತು ಪ್ರಿಸ್ಟಿನ್ ಗ್ಲಾಸ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಲಾವಾ ಅಗ್ನಿ 3 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ ಅಗ್ನಿ 3 ಫೋನ್ - ಫೀಚರ್ಸ್
ಲಾವಾ ಅಗ್ನಿ 3 ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ 6.78 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಇದ್ದು, ಇದು 1.5K ರೆಸಲ್ಯೂಶನ್ ಕರ್ವ್ಡ್ AMOLED ಡಿಸ್‌ಪ್ಲೇ ಆಗಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ ಇದರ ಎರಡನೇ ಡಿಸ್‌ಪ್ಲೇಯು 1.74 ಇಂಚಿನ AMOLED ಸ್ಕ್ರೀನ್ ಆಗಿದ್ದು ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ ಕ್ಯಾಮೆರಾ ಮಾಡ್ಯೂಲ್ ಜೊತೆಗೆ ನೀಡಲಾಗಿದೆ.
ಲಾವಾ ಅಗ್ನಿ 3 ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300X ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಇದೆ. ಹಾಗೆಯೇ ಈ ಮೊಬೈಲ್ 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ. ಅಲ್ಲದೇ ಲಾವಾ ಅಗ್ನಿ 3 ಫೋನ್ ಕಸ್ಟಮೈಸ್ ಮಾಡಬಹುದಾದ ಆಕ್ಷನ್ ಬಟನ್ (ಇತ್ತೀಚಿನ ಆಪಲ್ ಐಫೋನ್‌ನಲ್ಲಿ ಇರುವಂತೆ) ಅನ್ನು ಸಹ ಪಡೆದಿದೆ.
ಲಾವಾ ಅಗ್ನಿ 3 ಫೋನ್ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಇದು OIS ಸೌಲಭ್ಯ ಕೂಡಾ ಪಡೆದಿದೆ. ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಇನ್ನು ಈ ಫೋನ್ 4700 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 66W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.
ಬೆಲೆ ಹಾಗೂ ಲಭ್ಯತೆ ಮಾಹಿತಿ
8GB + 128GB (ಚಾರ್ಜರ್ ಇಲ್ಲದೇ) ವೇರಿಯಂಟ್ ದರವು 20,999ರೂ. ಗಳು ಆಗಿದೆ. ಹಾಗೆಯೇ 8GB + 128GB ವೇರಿಯಂಟ್ ಬೆಲೆ 22,999ರೂ. ಗಳು ಆಗಿದ್ದು, ಇನ್ನು 8GB + 256GB ವೇರಿಯಂಟ್ ದರವು 24,999ರೂ. ಗಳು ಆಗಿದೆ. ಈ ಫೋನ್ ಹೀದರ್ ಗ್ಲಾಸ್ ಮತ್ತು ಪ್ರಿಸ್ಟಿನ್ ಗ್ಲಾಸ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಆಸಕ್ತ ಖರೀದಿದಾರರು ಈ ಫೋನ್ ಅನ್ನು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿ ಮಾಡಬಹುದು.


Click it and Unblock the Notifications








