ಭಾರತದಲ್ಲಿ 'ಲಾವಾ ಅಗ್ನಿ 5G' ಫೋನ್ ಬಿಡುಗಡೆ!..ಬೆಲೆ ಕೇಳಿದ್ರೆ, OMG ಅಂತೀರಾ!

|

ಅಗ್ಗದ ದರದ ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ಲಾವಾ (LAVA) ಮೊಬೈಲ್ ಕಂಪೆನಿಯು ಈಗ ಮತ್ತೊಂದು ಬಜೆಟ್‌ ಫೋನ್‌ ಅನ್ನು ಲಾಂಚ್ ಮಾಡಿದೆ. ಅದುವೇ 'ಲಾವಾ ಅಗ್ನಿ 5G' (Lava Agni 5G) ಸ್ಮಾರ್ಟ್‌ಫೋನ್. ಈ ಸ್ಮಾರ್ಟ್‌ಫೋನ್ ಸದ್ಯ ಚಾಲ್ತಿ ಇರುವ, ಉತ್ತಮ ಕ್ಯಾಮೆರಾ, ಬಿಗ್ ಬ್ಯಾಟರಿ, ವೇಗದ ಪ್ರೊಸೆಸರ್‌ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಗ್ರಾಹಕರನ್ನು ಆಕರ್ಷಿಸುವ ಲಕ್ಷಣಗಳನ್ನು ಹೊರಹಾಕಿದೆ.

ಬಿಡುಗಡೆ

ಹೌದು, ಲಾವಾ ಕಂಪೆನಿಯು ಭಾರತದಲ್ಲಿ ಹೊಸದಾಗಿ ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅನ್ನು ಇಂದು (ನ.9) ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಇನ್ನುಳಿದಂತೆ ಲಾವಾ ಅಗ್ನಿ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ನಾಲ್ಕನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಅದೇ ರೀತಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇದು 90 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ದರದವು 19,999ರೂ. ಆಗಿದೆ. ಇನ್ನು ಈ ಫೋನ್ ಇದೇ ನವೆಂಬರ್ 18 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರೀಟೇಲ್ ಸ್ಟೋರ್‌ಗಳ ಮೂಲಕ ಫೋನ್ ದೇಶದಲ್ಲಿ ಮಾರಾಟವಾಗಲಿದೆ. ಆದಾಗ್ಯೂ, ಅಮೆಜಾನ್ ಮತ್ತು ಲಾವಾ ಇ-ಸ್ಟೋರ್ ಮೂಲಕ ಮುಂಗಡ-ಬುಕಿಂಗ್‌ಗೆ ಲಭ್ಯವಿರುತ್ತದೆ.

ನೋಡುವುದಾದರೇ

ಹಾಗೆಯೇ ಇತ್ತೀಚಿಗಷ್ಟೆ ಲಾವಾ ಬಿಡುಗಡೆ ಮಾಡಿದ್ದ ಲಾವಾ Z2s ಫೋನ್‌ ಸಹ ಗ್ರಾಹಕರ ಗಮನ ಸೆಳೆದಿತ್ತು. ಇದರ ಫೀಚರ್ಸ್‌ ನೋಡುವುದಾದರೇ ಲಾವಾ Z2s ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಇನ್ನು ಈ ಡಿಸ್‌ಪ್ಲೇ ಯೊಂದಿಗೆ ವಾಟರ್‌ಡ್ರಾಪ್ ಶೈಲಿಯ ನಾಚ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ. ಹಾಗೆಯೇ ಲಾವಾ Z2s ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದು.

ಮೆಗಾಪಿಕ್ಸೆಲ್

ಇನ್ನು ಈ ಸ್ಮಾರ್ಟ್‌ಫೋನ್‌ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾವು ಬ್ಯೂಟಿ ಮೋಡ್, ಹೆಚ್‌ಡಿಆರ್ ಮೋಡ್, ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಲಾವಾ Z2s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ವಿ 5, ಮತ್ತು ಯುಎಸ್ಬಿ ಒಟಿಜಿ ಬೆಂಬಲದೊಂದಿಗೆ ಯುಎಸ್ಬಿ ಟೈಪ್-ಸಿ ಸೇರಿವೆ.

Best Mobiles in India

English summary
Lava Agni 5G With 8GB RAM + 128GB storage variant Launched In India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X