Home
ಸುದ್ದಿಜಾಲ

ಇಂದು ಲಾವಾ ಅಗ್ನಿ 5G ಫೋನ್ ಸೇಲ್; ಬೆಲೆ ಎಷ್ಟು?..ಫೀಚರ್ಸ್‌ ಏನು?

ಲಾವಾ (LAVA) ಮೊಬೈಲ್ ಕಂಪೆನಿಯು ಹೊಸದಾಗಿ ಬಜೆಟ್‌ ಬೆಲೆಯಲ್ಲಿ ಲಾಂಚ್ ಮಾಡಿರುವ 'ಲಾವಾ ಅಗ್ನಿ 5G' (Lava Agni 5G) ಸ್ಮಾರ್ಟ್‌ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಚೀನಾ ಮೂಲಕದ ಕಂಪನಿಗಳಿಗೆ ಭೀತಿ ಮೂಡಿಸಿದೆ. ಈ ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇಂದು ಮಧ್ಯಾಹ್ನ 12:00 ಗಂಟೆಯ ನಂತರ ಸ್ಮಾರ್ಟ್‌ಫೋನನ್ನು ಖರೀದಿಸಬಹುದು ಎಂದು ಕಂಪೆನಿ ತಿಳಿಸಿದೆ.

ಲಾವಾ

ಹೌದು, ಲಾವಾ ಕಂಪೆನಿಯು ನೂತನ ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅನ್ನು ಇಂದು ಮಾರಾಟ ಶುರು ಮಾಡಲಿದೆ. ಆನ್‌ಲೈನ್ ಜೊತೆಗೆ ಆಫ್‌ಲೈನ್ ಸ್ಟೋರ್‌ಗಳಲ್ಲಿಯೂ ಗ್ರಾಹಕರಿಗೆ ಈ ಫೋನ್ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ದರದವು 19,999ರೂ. ಆಗಿದೆ. ಇದು ಟ್ರಿಪಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಇನ್ನುಳಿದಂತೆ ಲಾವಾ ಅಗ್ನಿ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ವಾಡ್‌ ಕ್ಯಾಮೆರಾ ರಚನೆ

ಕ್ವಾಡ್‌ ಕ್ಯಾಮೆರಾ ರಚನೆ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾ 5 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ನಾಲ್ಕನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಅದೇ ರೀತಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸಾರ್ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಇದು 90 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ದರವು 19,999ರೂ. ಆಗಿದೆ. ಇನ್ನು ಈ ಫೋನ್ (ಇಂದು) ನವೆಂಬರ್ 18 ರಿಂದ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ರೀಟೇಲ್ ಸ್ಟೋರ್‌ಗಳ ಮೂಲಕ ಫೋನ್ ದೇಶದಲ್ಲಿ ಮಾರಾಟವಾಗಲಿದೆ ಎಂದು ಕಂಪನಿ ತಿಳಿಸಿದೆ.

ಬಿಡುಗಡೆ

ಹಾಗೆಯೇ ಇತ್ತೀಚಿಗಷ್ಟೆ ಲಾವಾ ಬಿಡುಗಡೆ ಮಾಡಿದ್ದ ಲಾವಾ Z2s ಫೋನ್‌ ಸಹ ಗ್ರಾಹಕರ ಗಮನ ಸೆಳೆದಿತ್ತು. ಇದರ ಫೀಚರ್ಸ್‌ ನೋಡುವುದಾದರೇ ಲಾವಾ Z2s ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಇನ್ನು ಈ ಡಿಸ್‌ಪ್ಲೇ ಯೊಂದಿಗೆ ವಾಟರ್‌ಡ್ರಾಪ್ ಶೈಲಿಯ ನಾಚ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ. ಹಾಗೆಯೇ ಲಾವಾ Z2s ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದು.

Best Mobiles in India

English summary
LAVA Agni 5G To Go On Sale In India Today: Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+