Lava Blaze 2 5G: ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ ಲಾಂಚ್! 50 MP ಕ್ಯಾಮೆರಾ.. 128GB ಸ್ಟೋರೇಜ್
ಲಾವಾ ಕಂಪೆನಿ (Lava Company) ಭಾರತದ ಸ್ಮಾರ್ಟ್‌ಫೋನ್ ತಯಾರಿಕಾ ವಿಭಾಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಮಾಡುತ್ತಿದೆ. ಯಾಕೆಂದರೆ ಭಾರತೀಯರ ನಾಡಿ ಮಿಡಿತ ಅರ್ಥ ಮಾಡಿಕೊಂಡಿರುವ ಲಾವಾ ಅಗ್ಗದ ಬೆಲೆಗಳಲ್ಲಿ ವಿಶೇಷವಾದ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿಕೊಂಡು ಬರುತ್ತಿದ್ದು, ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ (Smartphone) ಅನ್ನು ಲಾಂಚ್ ಮಾಡಲಾಗಿದೆ.
ಹೌದು, ಭಾರತದಲ್ಲಿ ಲಾವಾ ಬ್ಲೇಜ್ 2 5G ಸ್ಮಾರ್ಟ್‌ಫೋನ್ (Lava Blaze 2 5G smartphone) ಅನ್ನು ಲಾಂಚ್ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ ಇದ್ದು, ರಿಂಗ್ ಲೈಟ್ ಆಯ್ಕೆ ಹಾಗೂ ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಅನ್ನು ಈ ಫೋನ್ ರನ್ ಮಾಡಲಿದೆ. ಹಾಗಿದ್ರೆ, ಇದರ ಪ್ರಮುಖ ಫೀಚರ್ಸ್ ಹಾಗೂ ಬೆಲೆ ವಿವರಗಳನ್ನು ತಿಳಿಯೋಣ ಬನ್ನಿ.

ಲಾವಾ ಬ್ಲೇಜ್ 2 5G ಡಿಸ್‌ಪ್ಲೇ ವಿವರ: ಈ ವಿಶೇಷ ಸ್ಮಾರ್ಟ್‌ಫೋನ್ 6.56 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಪಂಚ್ ಹೋಲ್ ಡಿಸ್‌ಪ್ಲೇ ಹೊಂದಿದ್ದು, ಅದೂ ಸಹ 2.5D ಕರ್ವ್ಡ್ ಡಿಸ್‌ಪ್ಲೇ ಮೂಲಕ ವಿಶೇಷ ಎನಿಸಿದೆ. ಇದರೊಂದಿಗೆ 90 Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ ಅತ್ಯುತ್ತಮ ಎನಿಸಿದೆ. ಅಲ್ಲದೆ ಹೆಚ್ಚುವರಿ ಭದ್ರತೆ ಮತ್ತು ಇತರೆ ಅನುಕೂಲಕ್ಕಾಗಿ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಇದರಲ್ಲಿದೆ.
ಲಾವಾ ಬ್ಲೇಜ್ 2 5G ಪ್ರೊಸೆಸರ್ ಮಾಹಿತಿ: ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್‌ನಲ್ಲಿ ರನ್ ಆಗಲಿದೆ. ಜೊತೆಗೆ ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಅಪ್‌ಗ್ರೇಡ್ ಸೌಲಭ್ಯವನ್ನೂ ಸಹ ನೀಡಲಾಗಿದೆ. ಅಂದರೆ ಎರಡು ವರ್ಷಗಳ ತ್ರೈಮಾಸಿಕ ಭದ್ರತಾ ನವೀಕರಣದ ಆಯ್ಕೆ ನೀಡಲಾಗಿದೆ. ಮುಖ್ಯವಾಗಿ ಈ ಫೋನ್ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಹಾಗೂ 6GB RAM ಮತ್ತು 128GB ಇಂಟರ್ ಸ್ಟೋರೇಜ್‌ನ ಎರಡು ಆಯ್ಕೆಯಲ್ಲಿ ಲಭ್ಯ ಇವೆ. ಅಷ್ಟೇ ಅಲ್ಲದೆ 1TB ವರೆಗೆ ವಿಸ್ತರಿಸಬಹುದಾದ ಸ್ಟೋರೇಜ್ ಆಯ್ಕೆಯನ್ನೂ ಸಹ ನೀಡಲಾಗಿದೆ.

ಲಾವಾ ಬ್ಲೇಜ್ 2 5G ಕ್ಯಾಮೆರಾ ರಚನೆ: ಈ ಫೋನ್ ಕ್ಯಾಮೆರಾ ವಿಚಾರಕ್ಕೆ ಬಂದರೆ 50 ಮೆಗಾಪಿಕ್ಸೆಲ್ ರಿಯಲ್ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಸ್ಕ್ರೀನ್ ಫ್ಲ್ಯಾಶ್ ಆಯ್ಕೆಯೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸರ್ ನೀಡಲಾಗಿದೆ. ಈ ಸೆನ್ಸರ್‌ಗಳು ಫಿಲ್ಮ್, ಸ್ಲೋ ಮೋಷನ್, ಟೈಮ್‌ಲ್ಯಾಪ್ಸ್, ಯುಹೆಚ್‌ಡಿ, ಜಿಫ್, ಬ್ಯೂಟಿ, ಎಚ್‌ಡಿಆರ್, ನೈಟ್, ಪೋರ್ಟ್ರೇಟ್, ಎಐ, ಪ್ರೊ, ಪನೋರಮಾ, ಫಿಲ್ಟರ್‌ಗಳು ಮತ್ತು ಇಂಟೆಲಿಜೆಂಟ್ ಸ್ಕ್ಯಾನಿಂಗ್‌ನಂತಹ ಮೋಡ್‌ಗಳನ್ನು ಹೊಂದಿದೆ.
ಲಾವಾ ಬ್ಲೇಜ್ 2 5G ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಟೈಪ್-ಸಿ ಚಾರ್ಜಿಂಗ್ ಮೂಲಕ 18W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡಲಾಗಿದೆ. ಇನ್ನು ಈ ಫೋನ್ ಖರೀದಿ ಮಾಡುವವರಿಗೆ ವಾರಂಟಿ ಅಡಿಯಲ್ಲಿ ಮನೆ ಬಾಗಿಲಿಗೆ ಸೇವೆಯನ್ನು ನೀಡಲಾಗುತ್ತದೆ. ಈ ಸೇವೆಯನ್ನು ಪಡೆಯಲು, ಬಳಕೆದಾರರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಲಾವಾ ಬ್ಲೇಜ್ 2 5G ಬೆಲೆ ಹಾಗೂ ಲಭ್ಯತೆ: ಈ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈ ಫೋನ್ ಬೆಲೆ 9,999 ರಿಂದ ಪ್ರಾರಂಭವಾಗುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಗ್ಲಾಸ್ ಬ್ಲ್ಯಾಕ್, ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಲ್ಯಾವೆಂಡರ್ ಸೇರಿದಂತೆ ಮೂರು ಆಕರ್ಷಕ ಬಣ್ಣಗಳಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಈ ಫೋನ್ ಅನ್ನು ನೀವು ನವೆಂಬರ್ 9 ರಿಂದ ಅಮೆಜಾನ್ ಹಾಗೂ ಲಾವಾದ ಅಧೀಕೃತ ಸೈಟ್ (Lavamobiles.com) ಮೂಲಕ ಖರೀದಿ ಮಾಡಬಹುದಾಗಿದೆ.


Click it and Unblock the Notifications








