Home
ಸುದ್ದಿಜಾಲ

ಸೈಲೆಂಟ್‌ ಆಗಿಯೇ ಭಾರತಕ್ಕೆ ಎಂಟ್ರಿ ನೀಡಿದ ಲಾವಾ ಬ್ಲೇಜ್ 2 ಪ್ರೊ!..ಇದರ ಬೆಲೆ ಎಷ್ಟು?

ಸ್ವದೇಶಿ ಬ್ರ್ಯಾಂಡ್‌ ಲಾವಾ ಕಂಪೆನಿ ಇತ್ತೀಚಿಗೆ ಭಾರತದ ಮಾರುಕಟ್ಟೆಯಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ. ತನ್ನ ಬ್ಲೇಜ್‌ ಸರಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಎಲ್ಲರ ಗಮನಸೆಳೆಯುತ್ತಿದೆ. ಇದೀಗ ತನ್ನ ಹೊಸ ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್ ಸೈಲೆಂಟ್‌ ಆಗಿ ಭಾರತದಲ್ಲಿ ಅನಾವರಣಗೊಂಡಿದೆ.

ಹೌದು, ಲಾವಾ ಬ್ಲೇಜ್ 2 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ T616SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೈಲೆಂಟ್‌ ಆಗಿ ಭಾರತಕ್ಕೆ ಎಂಟ್ರಿ ನೀಡಿದ ಲಾವಾ ಬ್ಲೇಜ್ 2 ಪ್ರೊ!.ಇದರ ಬೆಲೆ ಎಷ್ಟು?

ಲಾವಾ ಬ್ಲೇಜ್‌ 2 ಪ್ರೊ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದಲ್ಲದೆ ಹೆಚ್ಚುವರಿ ಭದ್ರತೆಗಾಗಿ ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಒಳಗೊಂಡಿದೆ.

ಲಾವಾ ಬ್ಲೇಜ್‌ 2 ಪ್ರೊ ಪ್ರೊಸೆಸರ್‌ ಯಾವುದು?
ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್‌ ಯುನಿಸೋಕ್‌ T616SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಲಾವಾ ಬ್ಲೇಜ್‌ 2 ಪ್ರೊ ಕ್ಯಾಮೆರಾ ಸೆಟ್‌ಅಪ್‌
ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸೈಲೆಂಟ್‌ ಆಗಿ ಭಾರತಕ್ಕೆ ಎಂಟ್ರಿ ನೀಡಿದ ಲಾವಾ ಬ್ಲೇಜ್ 2 ಪ್ರೊ!.ಇದರ ಬೆಲೆ ಎಷ್ಟು?

ಲಾವಾ ಬ್ಲೇಜ್‌ 2 ಪ್ರೊ ಬ್ಯಾಟರಿ ಮತ್ತು ಇತರೆ
ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G VoLTE, Wi-Fi 5, ಬ್ಲೂಟೂತ್ 5.0, USB-C ಪೋರ್ಟ್ ಮತ್ತು 3.5mm ಆಡಿಯೊ ಜ್ಯಾಕ್‌ನಂತಹ ಅಗತ್ಯ ಸಂಪರ್ಕ ಆಯ್ಕೆಗಳನ್ನು ನೀಡುತ್ತದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಅಕ್ರಿಲಿಕ್ ಮುಕ್ತಾಯವನ್ನು ಹೊಂದಿದೆ.

ಲಾವಾ ಬ್ಲೇಜ್‌ 2 ಪ್ರೊ ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್‌ 2 ಪ್ರೊ ಸ್ಮಾರ್ಟ್‌ಫೋನ್‌ ಭಾರತದ ಆಫ್‌ಲೈನ್ ಮಾರುಕಟ್ಟೆಯಲ್ಲಿ 9,999ರೂ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಖರೀದಿದಾರರು ಥಂಡರ್ ಬ್ಲ್ಯಾಕ್, ಸ್ವಾಗ್ ಬ್ಲೂ ಮತ್ತು ಕೂಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

ಇನ್ನು ಇದೇ ಸಮಯದಲ್ಲಿ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಇದರ 8GB RAM + 256GB ವೇರಿಯಂಟ್‌ ಆಯ್ಕೆಯ ಬೆಲೆ 25,999ರೂ. ಆಗಿದ್ದು, ಆಫರ್‌ನಲ್ಲಿ 21,999ರೂ. ಖರೀದಿಗೆ ದೊರೆಯುತ್ತದೆ. ಇದರ ಜೊತೆಗೆ ಬ್ಯಾಂಕ್‌ ಆಫರ್‌ಗಳು ಕೂಡಾ ಗ್ರಾಹಕರಿಗೆ ದೊರೆಯುತ್ತವೆ.

Best Mobiles in India

English summary
Lava Blaze 2 Pro with 90Hz display launched in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+