Home
ಸುದ್ದಿಜಾಲ

ಲಾವಾ ಬ್ಲೇಜ್‌ 5G ಫೋನ್‌ಗೆ ಬಿಗ್‌ ಡಿಸ್ಕೌಂಟ್‌!..ಬೆಲೆ ಅಗ್ಗ, 6GB RAM ಇದೆ!

ಲಾವಾ ಮೊಬೈಲ್‌ ಸಂಸ್ಥೆಯ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಇತ್ತೀಚಿನ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್‌ ಈಗ ಜನಪ್ರಿಯ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದ್ದು, ಬಜೆಟ್‌ ಬೆಲೆಯ ಮೊಬೈಲ್‌ ವಿಭಾಗದಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆದಿದೆ.

ಹೌದು, ಲಾವಾ ಕಂಪೆನಿಯ ಲಾವಾ ಬ್ಲೇಜ್‌ 5G ಫೋನ್ ಅಮೆಜಾನ್‌ನಲ್ಲಿ 27% ರಿಯಾಯಿತಿ ಪಡೆದಿದೆ. 6 GB RAM + 128 GB ವೇರಿಯಂಟ್‌ ಫೋನ್ 16,349 ರೂ. ದರ ಹೊಂದಿದ್ದು, ಆದ್ರೆ, ಕೊಡುಗೆಯಲ್ಲಿ ಗ್ರಾಹಕರು 11,999 ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್‌ ಸಹ ದೊರೆಯುತ್ತದೆ. ಈ ಫೋನಿನ ಇತರೆ ಫೀಚರ್ಸ್‌ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಬ್ಲೇಜ್‌ 5G ಫೋನ್‌ಗೆ ಬಿಗ್‌ ಡಿಸ್ಕೌಂಟ್‌!..ಬೆಲೆ ಅಗ್ಗ, 6GB RAM ಇದೆ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 269ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಡಿಸ್‌ಪ್ಲೇ ವೈಡ್‌ವೈನ್‌ L1 ಬೆಂಬಲವನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ.

ಪ್ರೊಸೆಸರ್‌ ಪವರ್ ಯಾವುದು : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128 GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 3 GB ವರಗೆಎ ವಿಸ್ತರಿಸಬಹುದಾಗಿದ್ದು, ಒಟ್ಟು 7 GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 256 GB ವರೆಗೆ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಲಾವಾ ಬ್ಲೇಜ್‌ 5G ಫೋನ್‌ಗೆ ಬಿಗ್‌ ಡಿಸ್ಕೌಂಟ್‌!..ಬೆಲೆ ಅಗ್ಗ, 6GB RAM ಇದೆ!

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ಮತ್ತು UHD ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ.

ಮೆಮೊರಿ ಮತ್ತು ಕಲರ್ ಲಭ್ಯತೆ : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಇನ್ನು ಈ ಫೋನ್ ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Lava Blaze 5G available at Huge discount price on amazon: Offer price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+