ಈ 5G ಸ್ಮಾರ್ಟ್‌ಫೋನ್ ಬೆಲೆ 9,999ರೂ!..ಖರೀದಿಗೆ ಯಾವಾಗ ಲಭ್ಯ ಗೊತ್ತಾ?
ಲಾವಾ ಮೊಬೈಲ್ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ಲಾವಾ ಬ್ಲೆಂಜ್ 5G (Lava Blaze 5G) ಸ್ಮಾರ್ಟ್‌ಫೋನ್ ಅಗ್ಗದ ಬೆಲೆಯ 5G ಫೋನ್ ಆಗಿ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ನವೆಂಬರ್ 15 ರ ಮಧ್ಯಾಹ್ನ 12 ಗಂಟೆಗೆ ಇ ಕಾಮರ್ಸ್ ತಾಣ ಅಮೆಜಾನ್ ಮೂಲಕ ಮೊದಲ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ. ಅಂದಹಾಗೆ ಲಾವಾ ಬ್ಲೆಂಜ್ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ಲಾವಾ ಕಂಪೆನಿ ಹೊಸ ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ ಅಮೆಜಾನ್ ವೆಬ್‌ಸೈಟ್ ನಲ್ಲಿ ನವೆಂಬರ್ 15 ರಂದು ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ ಆರಂಭಿಕ 4GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಬೆಲೆಯು 10,999ರೂ. ಆಗಿದೆ. ಆದರೆ ಆರಂಭಿಕ ಕೊಡುಗೆಯಾಗಿ 9999ರೂ. ಬೆಲೆಗೆ ಲಭ್ಯವಾಗಲಿದೆ. ಈ ಫೋನ್ ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 269ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಡಿಸ್‌ಪ್ಲೇ ವೈಡ್‌ವೈನ್ L1 ಬೆಂಬಲವನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.

ಪ್ರೊಸೆಸರ್ ಪವರ್ ಯಾವುದು?
ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 3GB ವರಗೆಎ ವಿಸ್ತರಿಸಬಹುದಾಗಿದ್ದು, ಒಟ್ಟು 7 GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ?
ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ AI- ಬೆಂಬಲಿತ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ಮತ್ತು UHD ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ
ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 128GB ಸ್ಟೋರೇಜ್ ಮಾದರಿಗೆ ಆರಂಭಿಕ ಕೊಡುಗೆಯಾಗಿ 9,999ರೂ. ಬೆಲೆಯನ್ನು ಹೊಂದಿದೆ. ನವೆಂಬರ್ 15 ರಂದು ಅಮೆಜಾನ್‌ನಲ್ಲಿ ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








