Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ 8GB RAM ಸ್ಮಾರ್ಟ್‌ಫೋನ್‌ ಖರೀದಿಗೆ ಇದು ಸಕಾಲ!

ಲಾವಾ ಬ್ರ್ಯಾಂಡ್‌ ಕೆಲವು ಅಗ್ಗದ ಸ್ಮಾರ್ಟ್‌ಫೋನ್‌ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಲಾವಾ ಸಂಸ್ಥೆಯು 5G ಸ್ಮಾರ್ಟ್‌ಫೋನ್‌ಗಳನ್ನು ಸಹ ಮಾರುಕಟ್ಟೆಗೆ ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಒಂದಾಗಿದ್ದು, ಈ ಸ್ಮಾರ್ಟ್‌ಫೋನ್‌ ಇದೀಗ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಇದನ್ನು ಅಗ್ಗದ ಬೆಲೆಗೆ ಖರೀದಿ ಮಾಡಬಹುದು.

ಹೌದು, ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್‌ ನಲ್ಲಿ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 24% ರಷ್ಟು ಸಖತ್ ರಿಯಾಯಿತಿ ಹೊಂದಿದೆ. ಈ ಮೊಬೈಲ್‌ 8GB RAM + 128GB ವೇರಿಯಂಟ್‌ ಡಿವೈಸ್‌ ಬೆಲೆಯು 16,499ರೂ. ಆಗಿದ್ದು, ಗ್ರಾಹಕರು ಅಮೆಜಾನ್‌ ತಾಣದಲ್ಲಿ ಇದನ್ನು 12,499ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ. ಇದರೊಂದಿಗೆ ಇತರೆ ಬ್ಯಾಂಕ್‌ ಡಿಸ್ಕೌಂಟ್‌ ಸಹ ಲಭ್ಯವಾಗಲಿವೆ.

ಅಗ್ಗದ ಬೆಲೆಯಲ್ಲಿ 8GB RAM ಸ್ಮಾರ್ಟ್‌ಫೋನ್‌ ಖರೀದಿಗೆ ಇದು ಸಕಾಲ!

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸಲು ಅವಕಾಶ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಬ್ಲೇಜ್‌ 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ : ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 6.51 ಇಂಚಿನ HD+ IPS ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 269ppi ಪಿಕ್ಸೆಲ್ ಸಾಂದ್ರತೆಯನ್ನು ಸಪೋರ್ಟ್‌ ಮಾಡಲಿದೆ. ಜೊತೆಗೆ ಈ ಡಿಸ್‌ಪ್ಲೇ ವೈಡ್‌ವೈನ್‌ L1 ಬೆಂಬಲವನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್‌ ರೇಟ್‌ ಸಪೋರ್ಟ್ ಮಾಡುತ್ತದೆ.

ಲಾವಾ ಬ್ಲೇಜ್‌ 5G ಪ್ರೊಸೆಸರ್‌ ಕಾರ್ಯವೈಖರಿ : ಲಾವಾ ಬ್ಲೇಜ್‌ 5G ಮೊಬೈಲ್‌ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಪವರ್‌ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 12 ಓಎಸ್‌ ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4 GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಪಡೆದಿದ್ದು, ಜೊತೆಗೆ RAM ಅನ್ನು ವಾಸ್ತವಿಕವಾಗಿ 3GB ವರೆಗೂ ವಿಸ್ತರಿಸಬಹುದಾಗಿದೆ. ಇದರ ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸುವುದಕ್ಕೆ ಅವಕಾಶ ಇದೆ.

ಲಾವಾ ಬ್ಲೇಜ್‌ 5G ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ : ಲಾವಾ ಬ್ಲೇಜ್‌ 5G ಮೊಬೈಲ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ. ಅಲ್ಲದೇ ಇದರ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ಮತ್ತು UHD ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಇವೆ.

ಲಾವಾ ಬ್ಲೇಜ್‌ 5G ಬ್ಯಾಟರಿ ಬ್ಯಾಕ್‌ಅಪ್‌ ಮತ್ತು ಇತರೆ ಸೌಲಭ್ಯ : ಲಾವಾ ಬ್ಲೇಜ್‌ 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಒದಗಿಸಲಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಸೌಲಭ್ಯ ಸೇರಿವೆ.

ಲಾವಾ ಬ್ಲೇಜ್‌ 5G ಕಲರ್ ಮತ್ತು ಮೆಮೊರಿ : ಲಾವಾ ಬ್ಲೇಜ್‌ 5G ಮೊಬೈಲ್‌ 4GB RAM, 6GB RAM ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳು ಇವೆ. ಇನ್ನು ಈ ಫೋನ್ ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ.

Best Mobiles in India

English summary
Lava Blaze 5G mobile price drop on amazon. check offer price and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+