Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಅಬ್ಬರಿಸಿದ್ದ ಈ ಫೋನ್‌ ಮೇಲೆ ಇದೀಗ ಭರ್ಜರಿ ಡಿಸ್ಕೌಂಟ್‌!

ದೇಶಿ ಬ್ರ್ಯಾಂಡ್‌ ಲಾವಾ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಟಾಪ್‌ ಮಾಡೆಲ್‌ಗಳಿಗೂ ಪೈಪೋಟಿ ನೀಡುವ ಮಟ್ಟಿಗಿನ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದರಲ್ಲಿ ಲಾವಾ ಬ್ಲೇಜ್ 5G ಕೂಡ ಒಂದಾಗಿದೆ. ಬಿಡುಗಡೆ ಆದಾಗ ಸಂಚಲನ ಸೃಷ್ಟಿಸಿದ್ದ ಈ ಫೋನ್‌ ಇದೀಗ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಲಾವಾ ಬ್ಲೇಜ್ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯ ಮೇಲೆ ಈ ರಿಯಾಯಿತಿಯನ್ನು ಘೋಷಿಸಲಾಗಿದೆ. ಇದರಿಂದ ಸ್ಮಾರ್ಟ್‌ಫೋನ್‌ನ ಬೆಲೆಯಲ್ಲಿ ಭಾರಿ ಬದಲಾವಣೆ ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ ಗ್ಲಾಸ್ ಬ್ಲೂ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಸ್ಮಾರ್ಟ್‌ಫೋನ್‌ ಪಡೆದುಕೊಂಡಿರುವ ಡಿಸ್ಕೌಂಟ್‌ ಎಷ್ಟು? ಇದರಿಂದ ಆಗಿರುವ ಬೆಲೆ ಬದಲಾವಣೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಯಲ್ಲಿ ಅಬ್ಬರಿಸಿದ್ದ ಈ ಫೋನ್‌ ಮೇಲೆ ಇದೀಗ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್‌ನಲ್ಲಿ ಡಿಸ್ಕೌಂಟ್‌ ಎಷ್ಟಿದೆ?
ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 16,349ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ ಅಮೆಜಾನ್‌ 39% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಇದನ್ನು ಕೇವಲ 9,999ರೂ ಬೆಲೆಗೆ ಖರೀದಿಸಬಹುದಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಅನ್ನು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವವರಿಗೆ 1,000 ವರೆಗೆ ತ್ವರಿತ ರಿಯಾಯಿತಿ ಲಭ್ಯವಾಗಲಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಂಐ ಆಯ್ಕೆಯು ಕೂಡ ದೊರೆಯಲಿದೆ.

ಲಾವಾ ಬ್ಲೇಜ್‌ 5G ಡಿಸ್‌ಪ್ಲೇ ರಚನೆ
ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 6.51 ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ ವೈಡ್‌ವೈನ್‌ L1 ಬೆಂಬಲವನ್ನು ಹೊಂದಿದ್ದು, 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ.

ಮಾರುಕಟ್ಟೆಯಲ್ಲಿ ಅಬ್ಬರಿಸಿದ್ದ ಈ ಫೋನ್‌ ಮೇಲೆ ಇದೀಗ ಭರ್ಜರಿ ಡಿಸ್ಕೌಂಟ್‌!

ಲಾವಾ ಬ್ಲೇಜ್‌ 5G ಪ್ರೊಸೆಸರ್‌ ಯಾವುದು?

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GBB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಲಾವಾ ಬ್ಲೇಜ್‌ 5G ಕ್ಯಾಮೆರಾ ಸೆಟ್‌ಅಪ್‌
ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್ ಆಯ್ಕೆಗಳನ್ನು ಒಳಗೊಂಡಿದೆ.

ಮಾರುಕಟ್ಟೆಯಲ್ಲಿ ಅಬ್ಬರಿಸಿದ್ದ ಈ ಫೋನ್‌ ಮೇಲೆ ಇದೀಗ ಭರ್ಜರಿ ಡಿಸ್ಕೌಂಟ್‌!

ಲಾವಾ ಬ್ಲೇಜ್‌ 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ.

Best Mobiles in India

English summary
Lava Blaze 5G Smartphone received Huge discount in amazon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+