Home
ಸುದ್ದಿಜಾಲ

ಸ್ವದೇಶಿ ಬ್ರ್ಯಾಂಡ್‌ನಿಂದ ಹೊಸ 5G ಫೋನ್‌ ಲಾಂಚ್‌! ಏನೆಲ್ಲಾ ಫೀಚರ್ಸ್‌ ಲಭ್ಯ!

ದೇಶಿ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಲಾವಾ ತನ್ನ ಬಜೆಟ್‌ ಸ್ನೇಹಿ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಸ್ಥಾನ ಉಳಿಸಿಕೊಂಡಿದೆ. ವಿದೇಶಿ ಸ್ಮಾರ್ಟ್‌ಫೋನ್‌ಗಳ ಪೈಪೋಟಿ ನಡುವೆಯೂ ಆಗಾಗ ಹೊಸ ಸ್ಮಾರ್ಟ್‌ಫೋನ್‌ಗಳ ಮೂಲಕ ಸದ್ದು ಮಾಡುತ್ತಾ ಬಂದಿದೆ. ಇದೀಗ ಹೊಸ ಬಜೆಟ್ ಸ್ನೇಹಿ 5G ಸ್ಮಾರ್ಟ್‌ಫೋನ್‌ ಲಾವಾ ಬ್ಲೇಜ್‌ 5G ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಮೂರು ಕ್ಯಾಮೆರಾಗಳನ್ನು ಒಳಗೊಂಡಿದ್ದು, ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಡಿಸ್‌ಪ್ಲೇಯನ್ನು ಪಡೆದಿದೆ.

ಲಾವಾ ಬ್ಲೇಜ್‌ 5G

ಹೌದು, ಲಾವಾ ಕಂಪೆನಿಯ ಹೊಸ ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಇನ್‌ಬಿಲ್ಟ್‌ RAM ಅನ್ನು ವಾಸ್ತವಿಕವಾಗಿ 3GB ವರೆಗೆ ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 269ppi ಪಿಕ್ಸೆಲ್ ಸಾಂದ್ರತೆಯನ್ನು ಬೆಂಬಲಿಸಲಿದೆ. ಇದಲ್ಲದೆ ಈ ಡಿಸ್‌ಪ್ಲೇ ವೈಡ್‌ವೈನ್‌ L1 ಬೆಂಬಲವನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 3GB ವರಗೆಎ ವಿಸ್ತರಿಸಬಹುದಾಗಿದ್ದು, ಒಟ್ಟು 7GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ಮತ್ತು UHD ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು?

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 128GB ಸ್ಟೋರೇಜ್ ಮಾದರಿಗೆ 9,999ರೂ. ಬೆಲೆಯನ್ನು ಹೊಂದಿದೆ. ಇದು ಲಾಂಚ್‌ ಆಫರ್‌ ಬೆಲೆಯಾಗಿದ್ದು, ಇದು ಎಷ್ಟು ಅವಧಿಯವರೆಗೆ ಅನ್ವಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಇದನ್ನು ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್ ಮೂಲಕ ಸೇಲ್‌ ಆಗಲಿದ್ದು, ಸೇಲ್‌ ಡೇಟ್‌ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Lava Blaze 5G With 5,000mAh Battery Launched in India: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+