Home
ಸುದ್ದಿಜಾಲ

ದೇಶಿ ಮಾರುಕಟ್ಟೆಗೆ ಬಂತು ಲಾವಾ ಬ್ಲೇಜ್ ಕರ್ವ್ 5G ಫೋನ್‌: ಬೆಲೆ ಎಷ್ಟು

ದೇಶಿ ಬ್ರ್ಯಾಂಡ್‌ ಲಾವಾ ಕಂಪೆನಿ ಹೊಸ ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬ್ಲೇಜ್ ಸರಣಿಯ ಹೊಸ 5G ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಮ್ಯಾಟ್ ಫಿನಿಶ್ ವಿರಿಡಿಯನ್ ಬಣ್ಣದ ಡಬಲ್ ಬಲವರ್ಧಿತ ಗಾಜಿನ ರಕ್ಷಣೆಯನ್ನು ಹೊಂದಿದೆ. ಇನ್ನುಳಿದಂತೆ ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ದೇಶಿ ಮಾರುಕಟ್ಟೆಗೆ ಬಂತು ಲಾವಾ ಬ್ಲೇಜ್ ಕರ್ವ್ 5G ಫೋನ್‌: ಬೆಲೆ ಎಷ್ಟು

ಲಾವಾ ಬ್ಲೇಜ್ ಕರ್ವ್ 5G ಫೀಚರ್ಸ್‌ ಹೇಗಿದೆ?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2400×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿರಲಿದೆ. ಇನ್ನು ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದ್ದು, 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ನಲ್ಲಿರಲಿದೆ.

ಲಾವಾ ಬ್ಲೇಜ್ ಕರ್ವ್ 5G ಪ್ರೊಸೆಸರ್‌ ಯಾವುದು?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಮಾಲಿ-G68 MC4 GPU ಸಪೋರ್ಟ್‌ ಪಡೆದಿದೆ. ಇದು 8GB RAM ಮತ್ತು 128GB / 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ.

ಲಾವಾ ಬ್ಲೇಜ್ ಕರ್ವ್ 5G ಕ್ಯಾಮೆರಾ ಸೆಟಪ್‌ ಏನಿದೆ
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ದೇಶಿ ಮಾರುಕಟ್ಟೆಗೆ ಬಂತು ಲಾವಾ ಬ್ಲೇಜ್ ಕರ್ವ್ 5G ಫೋನ್‌: ಬೆಲೆ ಎಷ್ಟು

ಲಾವಾ ಬ್ಲೇಜ್ ಕರ್ವ್ 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ನೊಂದಿಗೆ ಬರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಆಡಿಯೋ, ಎಫ್‌ಎಂ ರೇಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, 5G, ಡ್ಯುಯಲ್ 4G VoLTE, Wi-Fi 6, ಬ್ಲೂಟೂತ್ 5.2, ಡ್ಯುಯಲ್ -ಫ್ರೀಕ್ವೆನ್ಸಿ GPS/ GLONASS ಬೀಡೌ, ಯುಎಸ್‌ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
Lava Blaze Curve 5G ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಮಾದರಿಗೆ 17,999ರೂ ಬೆಲೆಯನ್ನು ಹೊಂದಿದೆ. ಇದರ 8GB + 256GB ಮಾದರಿಯ ಬೆಲೆ 18,999ರೂ ಬೆಲೆಯಲ್ಲಿ ಬರಲಿದೆ. ಇದು Amazon.in, Lava India ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಮಾರ್ಚ್ 11 ರಿಂದ ಖರೀದಿಗೆ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಐರನ್ ಗ್ಲಾಸ್ ಮತ್ತು ವಿರಿಡಿಯನ್ ಗ್ಲಾಸ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Lava Blaze Curve 5G With Dimensity 7050 Launched in India: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+