ಇಂದು ಲಾವಾ ಬ್ಲೇಜ್ NXT ಫಸ್ಟ್ ಸೇಲ್!..ಬೆಲೆ ಕೇಳಿ ಗ್ರಾಹಕರು ಫುಲ್ ಖುಷ್!
ಲಾವಾ ಮೊಬೈಲ್ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಮಾಡಿರುವ ಲಾವಾ ಬ್ಲೇಜ್ NXT (Lava Blaze NXT) ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಡಿಸೆಂಬರ್ 2) ರ ಮಧ್ಯಾಹ್ನ 12 ಗಂಟೆಗೆ ಇ ಕಾಮರ್ಸ್ ತಾಣ ಅಮೆಜಾನ್, ಲಾವಾ ಅಧಿಕೃತ ವೆಬ್‌ಸೈಟ್ ಮೂಲಕ ಮೊದಲ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಲಾವಾ ಬ್ಲೇಜ್ NXT ಫೋನ್ ಮೀಡಿಯಾ ಟೆಕ್ ಹಿಲಿಯೋ G37 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ಲಾವಾ ಕಂಪೆನಿ ಹೊಸ ಲಾವಾ ಬ್ಲೇಜ್ NXT (Lava Blaze NXT) ಸ್ಮಾರ್ಟ್‌ಫೋನ್ ಅಮೆಜಾನ್ ವೆಬ್‌ಸೈಟ್, ಲಾವಾ ಅಧಿಕೃತ ವೆಬ್‌ಸೈಟ್ ಹಾಗೂ ಇತರೆ ಪ್ರಮುಖ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಆರಂಭಿಕ 4GB + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಬೆಲೆಯು 9299 ರೂ. ಆಗಿದೆ. ಇನ್ನುಳಿದಂತೆ ಲಾವಾ ಬ್ಲೇಜ್ NXT (Lava Blaze NXT) ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಲಾವಾ ಬ್ಲೇಜ್ NXT ಸ್ಮಾರ್ಟ್‌ಫೋನ್ 6.5 ಇಂಚಿನ IPS ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಇದು 720 × 1600 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಈ ಫೋನ್ 20:9 ಆಕಾರ ಅನುಪಾತ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ರಚನೆಯ ಡಿಸ್‌ಪ್ಲೇ ಇದಾಗಿದೆ. ಇದರೊಂದಿಗೆ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 269ppi ಆಗಿದೆ.

ಪ್ರೊಸೆಸರ್ ಪವರ್ ಯಾವುದು
ಲಾವಾ ಬ್ಲೇಜ್ NXT ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G37 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಿದ್ದು, ಇದಕ್ಕೆ ಪೂರಕವಾಗಿ ಈ ಫೋನ್ ಅನ್ನು ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ 4GB RAM ಹಾಗೂ 64GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆ ಹೊಂದಿದ್ದು, ಹಾಗೆಯೇ 3GB ವರ್ಚುವಲ್ RAM ಅನ್ನು ಸಹ ಬೆಂಬಲಿಸುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಇಂಟರ್ನಲ್ ಸ್ಟೋರೇಜ್ ಅನ್ನು ವಿಸ್ತರಿಸಲು ಅವಕಾಶ ನೀಡಲಾಗಿದೆ.

ತ್ರಿವಳಿ ಕ್ಯಾಮೆರಾ ರಚನೆ
ಲಾವಾ ಬ್ಲೇಜ್ NXT ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ನ ಸೆನ್ಸರ್ ಹೊಂದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಇದ್ದು, ತೃತೀಯ ಕ್ಯಾಮೆರಾವು VGA ಆಗಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ನ ಸೆಲ್ಫಿ ಕ್ಯಾಮೆರಾದ ಆಯ್ಕೆ ಪಡೆದುಕೊಂಡಿದೆ.

ಬ್ಯಾಟರಿ ಹಾಗೂ ಇತರೆ ಸೌಲಭ್ಯಗಳು
ಲಾವಾ ಬ್ಲೇಜ್ NXT ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಟೈಪ್-ಸಿ ಪೋರ್ಟ್ ಅನ್ನು ಆಯ್ಕೆ ನೀಡಲಾಗಿದೆ. ಇನ್ನು ಈ ಫೋನ್ 3.5mm ಆಡಿಯೋ ಜಾಕ್ ಆಯ್ಕೆ ಪಡೆದುಕೊಂಡಿದ್ದು, ರಿಯರ್ ಪ್ಯಾನಲ್‌ನಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಫೀಚರ್ಸ್ ಹೊಂದಿದೆ. ಇದರ ಜೊತೆಗೆ ಇದು ಫೇಸ್ ಅನ್‌ಲಾಕ್ ಫೀಚರ್ಸ್ ಸಹ ಇದ್ದು, ಹೆಚ್ಚು ಆಕರ್ಷಕವಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G, ವೈ-ಫೈ, ಬ್ಲೂಟೂತ್ 5.0, OTG ಮತ್ತು GPS ಆಯ್ಕೆ ಇದೆ.

ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್ NXT ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದ್ದು, ಇದರ ಬೆಲೆಯು 9299 ರೂ. ಆಗಿದೆ. ಈ ಫೋನ್ ಅನ್ನು ಅಮೆಜಾನ್ ವೆಬ್‌ಸೈಟ್ ಮತ್ತು ಲಾವಾ ಅಧಿಕೃತ ವೆಬ್‌ಸೈಟ್ ಮೂಲಕ ಗ್ರಾಹಕರು ಖರೀದಿಸಬಹುದು.


Click it and Unblock the Notifications








