ಭಾರತದಲ್ಲಿ ಲಾವಾ ಬ್ಲೇಜ್‌ NXT ಲಾಂಚ್; ಆಕರ್ಷಕ ಫೀಚರ್ಸ್‌, ಬೆಲೆಯೂ ಅಗ್ಗ!

|

ಸ್ಮಾರ್ಟ್‌ಫೋನ್‌ ವಿಭಾಗದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿಗಳಲ್ಲಿ ಪ್ರಮುಖವಾಗಿರುವ ಲಾವಾ ಬ್ಲೇಜ್ (Blaze) ಸರಣಿಯ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಇದರ ನಡುವೆ ಈಗ ಇದೇ ಸರಣಿಯ ಹೊಸ ಸ್ಮಾರ್ಟ್‌ಫೋನ್‌ ಆಗಿರುವ ಲಾವಾ ಬ್ಲೇಜ್‌ NXT (Lava Blaze NXT) ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇಂದು ಅನಾವರಣಗೊಳಿಸಲಾಗಿದೆ.

ಬ್ಲೇಜ್

ಹೌದು, ಲಾವಾ ಹೊಸ ಬ್ಲೇಜ್ ಸರಣಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ ಜಿ 37 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ದೊಡ್ಡ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದೆ. ಇದರೊಂದಿಗೆ ಟ್ರಿಪಲ್‌ ಕ್ಯಾಮೆರಾ ರಚನೆಯಿಂದ ಕೂಡಿದೆ. ಹಾಗಿದ್ರೆ ಇದರ ಪ್ರಮುಖ ಫೀಚರ್ಸ್‌ ಏನು? ಭಾರತದಲ್ಲಿ ಇದರ ಬೆಲೆ ಎಷ್ಟು ಎಂಬೆಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಿದ್ದೇವೆ ಓದಿರಿ.

ಡಿಸ್‌ಪ್ಲೇ ವಿವರ

ಡಿಸ್‌ಪ್ಲೇ ವಿವರ

ಈ ಸ್ಮಾರ್ಟ್‌ಫೋನ್ 6.5 ಇಂಚಿನ IPS ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, ಇದು 720 × 1600 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದೆ. ಹಾಗೆಯೇ 20:9 ಆಕಾರ ಅನುಪಾತ ಹೊಂದಿದ್ದು ವಾಟರ್‌ಡ್ರಾಪ್ ನಾಚ್‌ ರಚನೆಯ ಡಿಸ್‌ಪ್ಲೇ ಇದಾಗಿದೆ.

ಪ್ರೊಸೆಸರ್‌ ವಿವರ

ಪ್ರೊಸೆಸರ್‌ ವಿವರ

ಲಾವಾ ಬ್ಲೇಜ್‌ NXT ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G37 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಿದ್ದು, IMG ಪವರ್‌VR GPU ಬಲ ಪಡೆದುಕೊಂಡಿದೆ. ಇನ್ನು ಈ ಫೋನ್‌ ಅನ್ನು ಆಂಡ್ರಾಯ್ಡ್‌ 12 ಓಎಸ್‌ ರನ್‌ ಮಾಡಲಿದ್ದು, 4GB RAM ಹಾಗೂ 64GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯಂಟ್‌ನಲ್ಲಿ ಲಭ್ಯವಿದೆ. ಹಾಗೆಯೇ 3GB ವರ್ಚುವಲ್ RAM ಅನ್ನು ಸಹ ಬೆಂಬಲಿಸುತ್ತದೆ. ಇದೆಲ್ಲಕ್ಕೂ ಮಿಗಿಲಾಗಿ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಇಂಟರ್ನಲ್‌ ಸ್ಟೋರೇಜ್‌ ಅನ್ನು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.

ಕ್ಯಾಮೆರಾ ರಚನೆ ಹಾಗೂ ಇತರೆ

ಕ್ಯಾಮೆರಾ ರಚನೆ ಹಾಗೂ ಇತರೆ

ಲಾವಾ ಬ್ಲೇಜ್‌ NXT ಸ್ಮಾರ್ಟ್‌ಫೋನ್‌ ಎಲ್‌ಇಡಿ ಫ್ಲ್ಯಾಶ್‌‌ನೊಂದಿಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರಲ್ಲಿ ಪ್ರಮುಖ ಕ್ಯಾಮೆರಾ 13 ಮೆಗಾಪಿಕ್ಸೆಲ್‌ನ ಸೆನ್ಸರ್‌ ಹೊಂದಿದೆ. ಹಾಗೆಯೇ 8 ಮೆಗಾಪಿಕ್ಸೆಲ್‌ನ ಸೆಲ್ಫಿ ಕ್ಯಾಮೆರಾದ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಫೋನ್‌ ತನ್ನ ಕಾರ್ಯಕ್ಷಮತೆ ಹಾಗೂ ಶೈಲಿಯಲ್ಲಿ ಮೋಟೋ G22, ಟೆಕ್ನೋ ಸ್ಪಾರ್ಕ್‌ 9 ಹಾಗೂ ಇನ್ಫಿನಿಕ್ಸ್ ಹಾಟ್‌ 12 ಗಳ ವಿರುದ್ಧ ಸ್ಪರ್ಧಿಸಲಿದೆ.

ಬ್ಯಾಟರಿ ಹಾಗೂ ಇತರೆ ಫೀಚರ್ಸ್‌

ಬ್ಯಾಟರಿ ಹಾಗೂ ಇತರೆ ಫೀಚರ್ಸ್‌

ಲಾವಾ ಬ್ಲೇಜ್‌ NXT 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದಕ್ಕಾಗಿ ಟೈಪ್-ಸಿ ಪೋರ್ಟ್ ಅನ್ನು ಆಯ್ಕೆ ನೀಡಲಾಗಿದೆ. ಇನ್ನು ಈ ಫೋನ್‌ 3.5mm ಆಡಿಯೋ ಜಾಕ್ ಆಯ್ಕೆ ಪಡೆದುಕೊಂಡಿದ್ದು, ರಿಯರ್‌ ಪ್ಯಾನಲ್‌ನಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಫೀಚರ್ಸ್‌ ಹೊಂದಿದೆ. ಇದರ ಜೊತೆಗೆ ಇದು ಫೇಸ್ ಅನ್‌ಲಾಕ್ ಫೀಚರ್ಸ್‌ ಸಹ ಇದ್ದು, ಹೆಚ್ಚು ಆಕರ್ಷಕವಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G, ವೈ-ಫೈ, ಬ್ಲೂಟೂತ್ 5.0, OTG ಮತ್ತು GPS ಆಯ್ಕೆ ಇದೆ.

ಬೆಲೆ ಹಾಗೂ ಲಭ್ಯತೆ

ಬೆಲೆ ಹಾಗೂ ಲಭ್ಯತೆ

ಈ ಫೋನ್‌ ಕೆಂಪು, ನೀಲಿ ಮತ್ತು ಹಸಿರಿನ ಮೂರು ಬಣ್ಣಗಳಲ್ಲಿ ಲಭ್ಯವಿದ್ದು, 4GB + 64GB ವೇರಿಯಂಟ್‌ನ ಫೋನ್‌ಗೆ ಭಾರತದಲ್ಲಿ 9,299 ರೂ. ಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಅಮೆಜಾನ್ ನಲ್ಲಿ ಡಿಸೆಂಬರ್ 2 ರಿಂದ ಖರೀದಿಗೆ ಲಭ್ಯವಿರುತ್ತದೆ.

Best Mobiles in India

Read more about:
English summary
Lava Blaze NXT Launched in India with MediaTek Helio G37.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X