ಮೊಬೈಲ್ ಮಾರುಕಟ್ಟೆಯಲ್ಲಿ ಮತ್ತೆ ಶುರುವಾಯ್ತು ಸ್ವದೇಶಿ ಬ್ರ್ಯಾಂಡ್ ಸಂಚಲನ!
ಇತ್ತೀಚಿನ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಸ್ವದೇಶಿ ಬ್ರ್ಯಾಂಡ್‌ಗಳ ಆರ್ಭಟ ಜೋರಾಗಿದೆ. ಕಳೆದು ಹೋಗಿದ್ದ ತಮ್ಮ ಪ್ರಾಬಲ್ಯವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಹೊಸ ಮಾದರಿಯೊಂದಿಗೆ ರೀ ಎಂಟ್ರಿ ನೀಡುತ್ತಿವೆ. ಈ ನಿಟ್ಟಿನಲ್ಲಿ ಸ್ವದೇಶಿ ಮೊಬೈಲ್ ಬ್ರ್ಯಾಂಡ್ ಲಾವಾ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮೊಬೈಲ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಹೌದು, ಲಾವಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಇತ್ತೀಚಿಗೆ ಭಾರಿ ಸದ್ದು ಮಾಡ್ತಿವೆ. ಅದಕ್ಕೆ ಅನುಗುಣವಾಗಿ ಇದೀಗ ಹೊಸ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಲಭ್ಯವಾಗುವ 5G ಫೋನ್ ಆಗಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದು ಬಹಿರಂಗವಾಗಿದೆ. ಹಾಗಾದ್ರೆ ಹೊಸ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ ಬ್ಲೇಜ್ ಪ್ರೊ 5G ಡಿಸ್‌ಪ್ಲೇ ರಚನೆ ಹೇಗಿದೆ?
ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಇದು 1920 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರುವ ನಿರೀಕ್ಷೆಯಿದೆ. ಇನ್ನು ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದ್ದು, ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸದೊಂದಿಗೆ ಬರಲಿದೆ.
ಲಾವಾ ಬ್ಲೇಜ್ ಪ್ರೊ 5G ಪ್ರೊಸೆಸರ್ ಯಾವುದು?
ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಈ ಚಿಪ್‌ಸೆಟ್ ಅನ್ನು 7nm ಪ್ರಕ್ರಿಯೆಯಲ್ಲಿ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಮಾಲಿ-G57 MC2 GPU ಸಪೋರ್ಟ್ ಪಡೆದಿದೆ. ಇದು ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಹೆಚ್ಚುವರಿ ಸ್ಟೋರೇಜ್ ಬಳಸಿಕೊಂಡು RAM ಅನ್ನು 3GB RAM ವರೆಗೆ ವಿಸ್ತರಿಸಬಹುದಾಗಿದೆ.
ಲಾವಾ ಬ್ಲೇಜ್ ಪ್ರೊ 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾದಲ್ಲಿ 1080p ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಮಾಡಬಹುದಾಗಿದೆ.
ಲಾವಾ ಬ್ಲೇಜ್ ಪ್ರೊ 5G ಬ್ಯಾಟರಿ ಸಾಮರ್ಥ್ಯ ಎಷ್ಟಿದೆ?
ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಅಕ್ಸಿಲೆರೋಮೀಟರ್ ಅನ್ನು ಸಹ ಹೊಂದಿರಲಿದೆ.
ಲಾವಾ ಬ್ಲೇಜ್ ಪ್ರೊ 5G ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್ ಇದೇ ತಿಂಗಳು ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 15,000ರೂ ಒಳಗಿನ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ. ಇನ್ನು ಇದರ ಕಲರ್ ಆಯ್ಕೆಗಳ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








