Home
ಸುದ್ದಿಜಾಲ

ಸೆಪ್ಟೆಂಬರ್ 26 ಕ್ಕೆ ಲಾಂಚ್‌ ಆಗಲಿದೆ ಸ್ವದೇಶಿ ಬ್ರ್ಯಾಂಡ್‌ನ ಹೊಸ 5G ಸ್ಮಾರ್ಟ್‌ಫೋನ್‌!

ಸ್ವದೇಶಿ ಬ್ರ್ಯಾಂಡ್‌ ಲಾವಾ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಅದರಂತೆ ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗತವಾಗಿದ್ದು, ಇದೇ ಸೆಪ್ಟೆಂಬರ್ 26 ರಂದು ಲಾಂಚ್‌ ಆಗಲಿದೆ ಎಂದು ಹೇಳಲಾಗಿದೆ.

ಹೌದು, ಲಾವಾ ಕಂಪನಿಯು ಯೂಟ್ಯೂಬ್ ಟೀಸರ್ ಮೂಲಕ ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಜೊತೆಗೆ ಸ್ಮಾರ್ಟ್‌ಫೋನ್‌ನ ವಿನ್ಯಾಸ ಹಾಗೂ ಫೀಚರ್ಸ್‌ಗಳ ಒಂದು ಲುಕ್‌ ಅನ್ನು ಶೇರ್‌ ಮಾಡಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಎಲ್ಇಡಿ ಫ್ಲ್ಯಾಶ್ ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೆಪ್ಟೆಂಬರ್ 26 ಕ್ಕೆ ಲಾಂಚ್‌ ಆಗಲಿದೆ ಸ್ವದೇಶಿ ಬ್ರ್ಯಾಂಡ್‌ನ ಹೊಸ 5G ಫೋನ್‌!

ಲಾವಾ ಲಾವಾ ಬ್ಲೇಜ್ ಪ್ರೊ 5G ಡಿಸ್‌ಪ್ಲೇ ರಚನೆ
ಲಾವಾ ಲಾವಾ ಬ್ಲೇಜ್ ಪ್ರೊ 5G ಸ್ಮಾರ್ಟ್‌ಫೋನ್‌ 6.5 ಇಂಚಿನ 2.5D ಬಾಗಿದ IPS ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 720x1,600  ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 90 Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗಿದೆ.

ಲಾವಾ ಬ್ಲೇಜ್‌ ಪ್ರೊ 5G ಪ್ರೊಸೆಸರ್‌ ಯಾವುದು?
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ-G57 MC2 GPU ಸಪೋರ್ಟ್‌ ಪಡೆದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಹೆಚ್ಚುವರಿ ಸ್ಟೋರೇಜ್‌ ಬಳಸಿಕೊಂಡು RAM ಅನ್ನು 3GB RAM ವರೆಗೆ ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಲಿದೆ.

ಲಾವಾ ಬ್ಲೇಜ್‌ ಪ್ರೊ 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ನೊಂದಿಗೆ ಬರಲಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಕಾಣಬಹುದಾಗಿದೆ. ಇನ್ನು ಹಿಂಭಾಗದ ಕ್ಯಾಮೆರಾ ಬಳಸಿಕೊಂಡು 1080p ಫುಲ್‌ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್‌ ಮಾಡಬಹುದಾಗಿದೆ.

ಲಾವಾ ಬ್ಲೇಜ್‌ ಪ್ರೊ 5G ಬ್ಯಾಟರಿ ಸಾಮರ್ಥ್ಯ ಎಷ್ಟಿದೆ?
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಅಕ್ಸಿಲೆರೋಮೀಟರ್‌ ಅನ್ನು ಸಹ ಹೊಂದಿರಲಿದೆ.

ಲಾವಾ ಬ್ಲೇಜ್‌ ಪ್ರೊ 5G ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 26 ರಂದು ಲಾಂಚ್‌ ಆಗಲಿದೆ ಎಂದು ಹೇಳಲಾಗಿದೆ. ಇದರ ಬೆಲೆ ವಿವರಗಳು ಬಹಿರಂಗವಾಗಿಲ್ಲ, ಆದರೆ ಇದು ಬಜೆಟ್‌ ಸ್ನೇಹಿ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯನ್ನು ಇಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಆಫ್-ವೈಟ್ ಶೇಡ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Lava Blaze Pro 5G smartphone set to Launch in India on September 26
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+