Home
ಸುದ್ದಿಜಾಲ

ಸ್ವದೇಶೀ ಬ್ರ್ಯಾಂಡ್‌ನಿಂದ ಅತಿ ಕಡಿಮೆ ಬೆಲೆಯಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಲಾಂಚ್‌!

ಭಾರತದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಎಂಟ್ರಿ ನೀಡಿದೆ. ಇದು ಭಾರತದಲ್ಲಿ ಕೈಗೆಟಕುವ ಬೆಲೆಯ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಪೊಕೊ M6 ಪ್ರೊ 5G, ರಿಯಲ್‌ಮಿ 11x 5G ಮತ್ತು ರಿಯಲ್‌ಮಿ ನಾರ್ಜೊ 60x 5Gಗೆ ಪೈಪೋಟಿ ನೀಡಲಿದೆ ಎನ್ನಲಾಗಿದೆ.

ಹೌದು, ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 6020 ಚಿಪ್‌ಸೆಟ್ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ವದೇಶೀ ಬ್ರ್ಯಾಂಡ್‌ನಿಂದ ಅತಿ ಕಡಿಮೆ ಬೆಲೆಯಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಲಾಂಚ್

ಲಾವಾ ಬ್ಲೇಜ್‌ ಪ್ರೊ 5G ಡಿಸ್‌ಪ್ಲೇ ರಚನೆ
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ 6.78 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 2.50:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ.

ಲಾವಾ ಬ್ಲೇಜ್‌ ಪ್ರೊ 5G ಪ್ರೊಸೆಸರ್‌
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6020SoC ಚಿಪ್‌ಸೆಟ್ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌13 ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 8GB ವರ್ಚುವಲ್ RAM ಅನ್ನು ಸಹ ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಿದೆ.

ಲಾವಾ ಬ್ಲೇಜ್‌ ಪ್ರೊ 5G ಕ್ಯಾಮೆರಾ ಸೆಟ್‌ಅಪ್‌
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಹಿಂಭಾಗದಲ್ಲಿ LED ಫ್ಲ್ಯಾಷ್ ಅನ್ನು ಸಹ ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಿಂಭಾಗದ ಕ್ಯಾಮೆರಾ ಮೂಲಕ 2K ವೀಡಿಯೊಗಳನ್ನು ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ.

ಲಾವಾ ಬ್ಲೇಜ್‌ ಪ್ರೊ 5G ಬ್ಯಾಟರಿ ಮತ್ತು ಇತರೆ
ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲದೊಂದಿಗೆ ಡ್ಯುಯಲ್ ಸಿಮ್, Wi-Fi 802.11ac ಬ್ಲೂಟೂತ್ 5.1, GPS, USB-C ಪೋರ್ಟ್, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, 2D ಫೇಸ್ ಅನ್‌ಲಾಕ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನಂತಹ ಫೀಚರ್ಸ್‌ಗಳನ್ನು ಹೊಂದಿದೆ.

ಭಾರತದಲ್ಲಿ ಲಾವಾ ಬ್ಲೇಜ್‌ ಪ್ರೊ 5G ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಲಾವಾ ಬ್ಲೇಜ್‌ ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ 12,499ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಸ್ಟಾರಿ ನೈಟ್ ಮತ್ತು ರೇಡಿಯಂಟ್ ಪರ್ಲ್‌ನಂತಹ ಶೇಡ್‌ ಕಲರ್‌ಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಇಂಡಿಯಾ, ಲಾವಾ ವೆಬ್‌ಸೈಟ್‌ ಮತ್ತು ಆಫ್‌ಲೈನ್‌ ರಿಟೇಲ್‌ ಸ್ಟೋರ್‌ಗಳ ಮೂಲಕ ಅಕ್ಟೋಬರ್ 3 ರಂದು ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Lava Blaze Pro 5G With 50MP dual cameras launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+