ಕೈಗೆಟಕುವ ಬೆಲೆಯಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಲಾವಾ ಬ್ಲೇಜ್ ಪ್ರೊ ಫೋನ್!
ಸ್ವದೇಶಿ ಬ್ರ್ಯಾಂಡ್ ಲಾವಾ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಗಮನಸೆಳೆದಿದೆ. ಕೈ ಗೆಟಕುವ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಮೀಡಿಯಾಟೆಕ್ ಹೆಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.

ಹೌದು, ಲಾವಾ ಕಂಪೆನಿ ಭಾರತದಲ್ಲಿ ಹೊಸ ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸಿಮ್ (ನ್ಯಾನೋ) ಸ್ಮಾರ್ಟ್‌ಫೋನ್ ಆಗಿದ್ದು 4G ನೆಟ್‌ವರ್ಕ್ ಬೆಂಬಲಿಸಲಿದೆ. ಜೊತೆಗೆ 5,00mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಚಾರ್ಜಿಂಗ್‌ಗಾಗಿ USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ 2.5D ಕರ್ವ್ಡ್ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 81.15 % ಹೊಂದಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ವಿನ್ಯಾಸವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹೆಲಿಯೋ G37 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 3GB ವರ್ಚುವಲ್ RAM ಅನ್ನು ಸಹ ನೀಡಲಿದೆ. ಇದರೊಂದಿಗೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು 256GB ವರೆಗೆ ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ಅವಕಾಶ ನೀಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ AI ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಸೆಟ್‌ಅಪ್ LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ ಮೋಡ್, HDR ಮೋಡ್, ನೈಟ್ ಮೋಡ್, ಪನೋರಮಾ ಮೋಡ್ ಅನ್ನು ನೀಡಲಾಗಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ 5,00mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಚಾರ್ಜಿಂಗ್‌ಗಾಗಿ USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಬ್ಲೂಟೂತ್ v5.0, ವೈಫೈ, OTG, 3.5mm ಆಡಿಯೊ ಜ್ಯಾಕ್ ಮತ್ತು GPS ಬೆಂಬಲವನ್ನು ಹೊಂದಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಫೀಚರ್ಸ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಲಾವಾ ಬ್ಲೇಜ್ ಪ್ರೊ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 10,499ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಲಭ್ಯವಾಗಲಿದೆ. ಇದು ಗ್ಲಾಸ್ ಬ್ಲೂ, ಗ್ಲಾಸ್ ಗ್ರೀನ್ ಗೋಲ್ಡ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ನ ಫಸ್ಟ್ ಸೇಲ್ ಡೇಟ್ ಇನ್ನು ಬಹಿರಂಗವಾಗಿಲ್ಲ.


Click it and Unblock the Notifications








