Home
ಸುದ್ದಿಜಾಲ

ಭಾರತದಲ್ಲಿ ಲಾವಾ ಬ್ಲೇಜ್ X 5G ಫೋನ್‌ ಬಿಡುಗಡೆ; ವಾವ್‌ ಎನಿಸುವ ಫೀಚರ್ಸ್‌!

ಸ್ವದೇಶಿ ಮೊಬೈಲ್‌ ಬ್ರ್ಯಾಂಡ್‌ ಲಾವಾ ಸಂಸ್ಥೆಯು ತನ್ನ ಬಹುನಿರೀಕ್ಷಿತ ಲಾವಾ ಬ್ಲೇಜ್ X 5G (Lava Blaze X 5G) ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬ್ಲೇಜ್ ಸರಣಿಯ ಹೊಸ 5G ಸ್ಮಾರ್ಟ್‌ಫೋನ್ ಆಗಿದ್ದು, ಕೆಲವು ಅಪ್‌ಡೇಟ್‌ ಫೀಚರ್ಸ್‌ಗಳೊಂದಿಗೆ ಲಗ್ಗೆ ಇಟ್ಟಿದೆ. ಇನ್ನು ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಪಡೆದಿದ್ದು, ಅಲ್ಲದೇ ಕರ್ವ್ಡ್‌ ಮಾದರಿಯ ಡಿಸ್‌ಪ್ಲೇ ರಚನೆ ಅನ್ನು ಪಡೆದುಕೊಂಡಿದೆ.

ಹೌದು, ಲಾವಾ ಸಂಸ್ಥೆಯು ಹೊಸದಾಗಿ ಲಾವಾ ಬ್ಲೇಜ್ X 5G (Lava Blaze X 5G) ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಇದರ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಸಹ ಹೊಂದಿದೆ. ಇನ್ನುಳಿದಂತೆ ಲಾವಾ ಬ್ಲೇಜ್ X 5G ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಭಾರತದಲ್ಲಿ ಲಾವಾ ಬ್ಲೇಜ್ X 5G ಫೋನ್‌ ಬಿಡುಗಡೆ; ವಾವ್‌ ಎನಿಸುವ ಫೀಚರ್ಸ್‌!

ಲಾವಾ ಬ್ಲೇಜ್ X 5G ಫೀಚರ್ಸ್‌

ಲಾವಾ ಬ್ಲೇಜ್ X 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಪಡೆದಿದ್ದು, 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಪಡೆದಿದೆ.

ಲಾವಾ ಬ್ಲೇಜ್ X 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 14 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G68 MC4 GPU ಸಪೋರ್ಟ್‌ ಪಡೆದಿದೆ. ಇದರೊಂದಿಗೆ 4GB + 128GB, 6GB + 256GB ಹಾಗೂ 8GB + 256GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿದೆ.

ಲಾವಾ ಬ್ಲೇಜ್ X 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಲಾವಾ ಬ್ಲೇಜ್ X 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಆಡಿಯೋ, ಎಫ್‌ಎಂ ರೇಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, 5G, ಡ್ಯುಯಲ್ 4G VoLTE, Wi-Fi 6, ಬ್ಲೂಟೂತ್ 5.2, ಇನ್‌-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ನ್ಯಾನರ್‌, ಯುಎಸ್‌ಬಿ ಟೈಪ್-ಸಿ ಅನ್ನು ಸಪೋರ್ಟ್‌ ಮಾಡುತ್ತದೆ.

ಬೆಲೆ ಮತ್ತು ಲಭ್ಯತೆ

4GB + 128GB ಬೆಲೆ 14999ರೂ. ಆಗಿದೆ.
6GB + 256GB ಬೆಲೆ 15999ರೂ. ಆಗಿದೆ.
8GB + 256GB ಬೆಲೆ 16999ರೂ. ಆಗಿದೆ.
ಇನ್ನು ಈ ಫೋನ್‌ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿ ಜುಲೈ 20 ರಿಂದ ಖರೀದಿಗೆ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಟೈಟಾನಿಯಂ ಗ್ರೇ ಮತ್ತು ಸ್ಟಾರ್‌ಲೈಟ್ ಪರ್ಪಲ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇರಲಿದೆ.

Best Mobiles in India

English summary
Lava Blaze X 5G With 64MP dual rear camera Launched in India. Check Price, offer, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+