Home
ಸುದ್ದಿಜಾಲ

ಭಾರತದಲ್ಲಿ ಲಾವಾ ಬ್ಲೇಜ್ ಕರ್ವ್ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌! ಏನೆಲ್ಲಾ ನಿರೀಕ್ಷೆ

ಸ್ವದೇಶಿ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಲಾವಾ ಕಂಪೆನಿ ತನ್ನ ವಿಭಿನ್ನ ಸ್ಮಾರ್ಟ್‌ಫೋನ್‌ಗಳಿಂದ ಗಮನಸೆಳೆದಿದೆ. ಇದೀಗ ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 5 ರಂದು ಬಿಡುಗಡೆಯಾಗಲಿದ್ದು, ಈ ಫೋನ್‌ ಬಾಗಿದ ಡಿಸ್‌ಪ್ಲೇ ಪ್ಯಾನೆಲ್ ಅನ್ನು ಹೊಂದಿರುತ್ತದೆ.

ಹೌದು, ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಕಂಪನಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಇದರ ಲಾಂಚ್‌ ಟೀಸರ್‌ ಪ್ರಕಾರ ಸ್ಮಾರ್ಟ್‌ಫೋನ್‌ ಪವರ್ ಬಟನ್ ಮತ್ತು ವಾಲ್ಯೂಮ್ ರಾಕರ್‌ಗಳು ಹ್ಯಾಂಡ್‌ಸೆಟ್‌ನ ಬಲ ಅಂಚಿನಲ್ಲಿರುತ್ತವೆ ಎಂದು ಹೇಳಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ ಬ್ಲೇಜ್ ಕರ್ವ್ 5G ಎಂಟ್ರಿಗೆ ಮುಹೂರ್ತ ಫಿಕ್ಸ್‌! ಏನೆಲ್ಲಾ ನಿರೀಕ್ಷೆ

ಲಾವಾ ಬ್ಲೇಜ್ ಕರ್ವ್ 5G ಫೀಚರ್ಸ್‌ ಹೇಗಿದೆ?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಡಿಸ್‌ಪ್ಲೇಯು 388 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದ್ದು, 120Hz ರಿಫ್ರೆಶ್‌ ರೆಟ್‌ ಬೆಂಬಲದೊಂದಿಗೆ ಬರಲಿದೆ ಎನ್ನಲಾಗಿದೆ.

ಲಾವಾ ಬ್ಲೇಜ್ ಕರ್ವ್ 5G ಪ್ರೊಸೆಸರ್‌ ಯಾವುದು?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ಲಾವಾ ಬ್ಲೇಜ್ ಕರ್ವ್ 5G ಕ್ಯಾಮೆರಾ ರಚನೆ ಏನು?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಲಾವಾ ಬ್ಲೇಜ್ ಕರ್ವ್ 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಹೊಂದಿದೆ. ಇದಲ್ಲದೆ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್ ಹೊಂದಿರಲಿದೆ ಎನ್ನಲಾಗಿದೆ.

ಲಾವಾ ಬ್ಲೇಜ್ ಕರ್ವ್ 5G ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ 16,000-19,000 ರೂ.ಬೆಲೆಯಲ್ಲಿ ಬರಲಿದೆ ಎಂದು ವರದಿಯಾಗಿದೆ ಇದು ಎರಡು ವಿಭಿನ್ನ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ಮೂಲಕ ಖರೀದಿಗೆ ಬರಲಿದೆ ಎನ್ನಲಾಗಿದೆ. ಈಗಾಗಲೇ ಇದರ ಲಾಂಚ್‌ ಸೈಟ್‌ ಅಮೆಜಾನ್‌ನಲ್ಲಿ ಕಾಣಿಸಿಕೊಂಡಿದೆ.

ವಿಶೇಷತೆ ಏನು?
ಲಾವಾ ಬ್ಲೇಜ್ ಕರ್ವ್ 5G ಸ್ಮಾರ್ಟ್‌ಫೋನ್‌ AnTuTu ಬೆಂಚ್‌ಮಾರ್ಕ್ ಪರೀಕ್ಷೆಯಲ್ಲಿ ಹ್ಯಾಂಡ್‌ಸೆಟ್ 5,50,000 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.

Best Mobiles in India

English summary
Lava has announced the Lava Blaze Curve 5G India launch date
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+