Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಮೇಡ್‌ ಇನ್‌ ಇಂಡಿಯಾ ಸ್ಮಾರ್ಟ್‌ಫೋನ್‌!.ಬೆಲೆ 5,499ರೂ.!

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಲಾವಾ ಕಂಪೆನಿ ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳ ಬಿಡುಗಡೆ ಮಾಡಿದೆ. ಲಾವಾ Z1, ಲಾವಾ Z2, ಲಾವಾ Z4 ಮತ್ತು ಲಾವಾ Z 6 ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ನಾಲ್ಕು ಸ್ಮಾರ್ಟ್‌ಫೋನ್‌ಗಳು ಮೇಡ್‌ ಇನ್‌ ಇಂಡಿಯಾ ಸ್ಮಾರ್ಟ್‌ಫೋನ್‌ಗಳಾಗಿವೆ. ಬ್ಯಾಟರಿ ಮತ್ತು ಚಾರ್ಜರ್‌ಗಳು ಸೇರಿದಂತೆ 60% ಹೆಚ್ಚಿನ ಘಟಕಗಳನ್ನು ದೇಶೀಯ ಸೌಲಭ್ಯದಲ್ಲಿ ಉತ್ಪಾದಿಸಲಾಗಿದೆ ಎಂದು ಹೇಳಲಾಗಿದೆ.

ಲಾವಾ

ಹೌದು, ದೇಶಿ ಕಂಪೆನಿ ಲಾವಾ ಭಾರತದಲ್ಲಿ ನಾಲ್ಕು ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಲಾವಾ ಫೋನ್ ಅನ್ನು ಒಂದು ವರ್ಷದೊಳಗೆ ಅಪ್‌ಗ್ರೇಡ್ ಮಾಡಲು ಲಾವಾ ಜುಪ್ ಪ್ರೋಗ್ರಾಂ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇನ್ನು ಈ ಎಲ್ಲಾ ಸ್ಮಾರ್ಟ್‌ಫೋನ್‌ಗಳು ದೇಶಿ ತಂತ್ರಜ್ಞಾನವನ್ನು ಹೊಂದಿವೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಲಾವಾ Z1 ಸ್ಮಾರ್ಟ್‌ಫೋನ್‌

ಲಾವಾ Z1 ಸ್ಮಾರ್ಟ್‌ಫೋನ್‌

ಲಾವಾ Z1 ಸ್ಮಾರ್ಟ್‌ಫೋನ್‌ ಲಾವಾ ಕಂಪನಿಯ ಮೊದಲ ಡಿಸೈನ್-ಇನ್ ಇಂಡಿಯಾ ಸ್ಮಾರ್ಟ್‌ಫೋನ್‌ ಎಂದು ಹೇಳಲಾಗಿದೆ. ಇದು 5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೊ A20SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 2GB RAM ಮತ್ತು 16GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಹೊಂದಿದೆ. ಇದು 3,100mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.

ಲಾವಾ Z2 ಸ್ಮಾರ್ಟ್‌ಫೋನ್‌

ಲಾವಾ Z2 ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 2.5 ಡಿ ಬಾಗಿದ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 (ಗೋ ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಇದು 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದು 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಲಾವಾ Z4 ಸ್ಮಾರ್ಟ್‌ಫೋನ್‌

ಲಾವಾ Z4 ಸ್ಮಾರ್ಟ್‌ಫೋನ್‌

ಲಾವಾ Z4 ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಒಳಗೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ.ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದಲ್ಲದೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ಲಾವಾ Z6 ಸ್ಮಾರ್ಟ್‌ಫೋನ್‌

ಲಾವಾ Z6 ಸ್ಮಾರ್ಟ್‌ಫೋನ್‌

ಇದು 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಸಹ ಹೊಂದಿದೆ. ಇದಲ್ಲದೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಲಾವಾ Z 1 ಬೆಲೆ 5,499 ರೂ. ಆಗಿದೆ. ಇನ್ನು ಲಾವಾ Z2 ಸ್ಮಾರ್ಟ್‌ಫೋನ್‌ ಬೆಲೆ 6,999 ರೂ.ಗೆ ಲಭ್ಯವಾಗಲಿದೆ. ಲಾವಾ Z4 ಸ್ಮಾರ್ಟ್‌ಫೋನ್‌ ಬೆಲೆ 8,999 ರೂ. ಆಗಿದ್ದರೆ, ಟಾಪ್-ಆಫ್-ಲೈನ್ ಲಾವಾ Z 6 ಸ್ಮಾರ್ಟ್‌ಫೋನ್‌ ಬೆಲೆ 9,999 ರೂ.ಆಗಿದೆ. ಇನ್ನು ಲಾವಾ Z2, ಲಾವಾ Z 4, ಮತ್ತು ಲಾವಾ Z6 ಸ್ಮಾರ್ಟ್‌ಫೋನ್‌ಗಳು ಇದೇ ಜನವರಿ 11 ರಿಂದ ಲಭ್ಯವಾಗಲಿವೆ. ಹಾಗೆಯೇ ಲಾವಾ Z1 ಜನವರಿ 26 ರಿಂದ ಮಾರಾಟವಾಗಲಿದೆ. ಅಮೆಜಾನ್, ಲಾವಾ ಮೂಲಕ ಫೋನ್‌ಗಳು ಖರೀದಿಗೆ ಲಭ್ಯವಿರುತ್ತವೆ.

Best Mobiles in India

English summary
Lava Z1, Lava Z2, Lava Z4, and Lava Z6 have been launched by Lava International as its four new smartphones.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+