ಭಾರತದಲ್ಲಿ ಲಾವಾ ಕಂಪೆನಿ ಮೂರು ಹೊಸ ಟ್ಯಾಬ್ಲೆಟ್ ಬಿಡುಗಡೆ!
ಜನಪ್ರಿಯ ಕಂಪೆನಿ ಲಾವಾ ಸ್ಮಾರ್ಟ್‌ಫೋನ್ ಮಾತ್ರವಲ್ಲದೆ ಟ್ಯಾಬ್ಲೆಟ್ ವಲಯದಲ್ಲೂ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಟ್ಯಾಬ್ಲೆಟ್‌ಗಳನ್ನು ಪರಿಚಯಿಸಿರುವ ಲಾವಾ ಸಂಸ್ಥೆ ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಹೊಸ ಟ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನ ಮ್ಯಾಗ್ನಮ್ XL, ಔರಾ ಮತ್ತು ಐವರಿ ಎಂದು ಹೆಸರಿಸಲಾಗಿದೆ. ಇನ್ನು ಈ ಡಿವೈಸ್‌ಗಳು ದೊಡ್ಡ ಪರದೆ, ಶಕ್ತಿಯುತ ಬ್ಯಾಟರಿ ಮತ್ತು ಉತ್ತಮ ಆಡಿಯೊ ಗುಣಮಟ್ಟವನ್ನು ಹೊಂದಿವೆ ಎಂದು ಕಂಪನಿಯು ಹೇಳಿದ್ದು, ಇದು ವಿದ್ಯಾರ್ಥಿಗಳಿಗೆ ಸೂಕ್ತವಾಗಿದೆ.

ಹೌದು, ಲಾವಾ ಕಂಪೆನಿ ಮ್ಯಾಗ್ನಮ್ XL, ಔರಾ ಮತ್ತು ಐವರಿ ಎಂಬ ಮೂರು ಹೊಸ ಟ್ಯಾಬ್ಲೆಟ್‌ಗಳನ್ನು ಲಾಂಚ್ ಮಾಡಿದೆ. ಇದರಲ್ಲಿ ಲಾವಾ ಮ್ಯಾಗ್ನಾಲ್ XL ಟ್ಯಾಬ್ಲೆಟ್ 10,0 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಲಾವಾ ಔರಾ ಟ್ಯಾಬ್ಲೆಟ್ 8 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದ್ದರೆ, ಲಾವಾ ಐವರಿ 7 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಟ್ಯಾಬ್ಲೆಟ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಲಾವಾ ಮ್ಯಾಗ್ನಮ್ XL
ಲಾವಾ ಮ್ಯಾಗ್ನಮ್ XL ಟ್ಯಾಬ್ಲೆಟ್ 800x1280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 10.1 ಇಂಚಿನ ಹೆಚ್‌ಡಿ IPS ಡಿಸ್‌ಪ್ಲೇಯೊಂದಿಗೆ ಹೊಂದಿದೆ. ಇದು ಮೀಡಿಯಾ ಟೆಕ್ 2GHz ಕ್ವಾಡ್-ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 2GB RAM ಮತ್ತು 32GB ಇಂಟರ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಬೆಂಬಲದೊಂದಿಗೆ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಟ್ಯಾಬ್ಲೆಟ್ 5ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ರಿಯರ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಇದು 6,100 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಇದರ ಬೆಲೆ 15,499 ರೂ ಆಗಿದ್ದು, ಲಾಂಚ್ ಆಫರ್ ನಲ್ಲಿ 11,999 ರೂ ಗೆ ಲಭ್ಯವಾಗಲಿದೆ.

ಲಾವಾ ಔರಾ
ಇನ್ನು ಲಾವಾ ಔರಾ 800x1280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 8 ಇಂಚಿನ ಹೆಚ್‌ಡಿ ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇದು 390 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ಅಲ್ಲದೆ ಇದು 2GHz ಕ್ವಾಡ್-ಕೋರ್ ಪ್ರೊಸೆಸರ್ ಹೊಂದಿದ್ದು, 2 GB RAM ಮತ್ತು 32 GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿವೈಸ್ 8 ಮೆಗಾಪಿಕ್ಸೆಲ್ ಸೆನ್ಸಾರ್ ರಿಯರ್ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಡಿವೈಸ್ 5,100 mAh ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಲಾವಾ ಔರಾ ಟ್ಯಾಬ್ಲೆಟ್ ಬೆಲೆ 12,999 ರೂ.ಆಗಿದ್ದು, ಲಾಂಚ್ ಆಫರ್‌ನಲ್ಲಿ 9,999 ರೂ.ಗಳಿಗೆ ಲಭ್ಯವಾಗಲಿದೆ.

ಲಾವಾ ಐವರಿ
ಲಾವಾ ಐವರಿ 800x1280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 7 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1.3GHz ಕ್ವಾಡ್-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 166Gb ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವಿಸ್ತರಿಸಬಹುದಾದ ಬೆಂಬಲವನ್ನು ಹೊಂದಿದೆ. ಇನ್ನು ಈ ಡಿವೈಸ್ 5 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,100 mAh ಬ್ಯಾಟರಿಯನ್ನು ಹೊಂದಿದೆ. ಲಾವಾ ಐವರಿ ಟ್ಯಾಬ್ಲೆಟ್ 9,499 ರೂ ಬೆಲೆಯನ್ನು ಹೊಂದಿದ್ದು, ಲಾಂಚ್ ಆಫರ್‌ನಲ್ಲಿ 7,399 ರೂ ಬೆಲೆಗೆ ಲಭ್ಯವಾಗಲಿದೆ.


Click it and Unblock the Notifications