ಕಡಿಮೆ ಬೆಲೆಗೆ ಸ್ವದೇಶಿ ಬ್ರ್ಯಾಂಡ್ ಮೊಬೈಲ್ ಖರೀದಿಸಲು ಈ ಆಫರ್ ನೋಡಿ!
ಲಾವಾ ಮೊಬೈಲ್ ಕಂಪೆನಿಯು ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯ ಫೋನ್‌ಗಳ ಲಿಸ್ಟ್‌ನಲ್ಲಿ ಲಾವಾ O1 ಸ್ಮಾರ್ಟ್‌ಫೋನ್ ಕೂಡಾ ಆಕರ್ಷಕ ಫೀಚರ್ಸ್ ಪಡೆದಿದ್ದು, ಇದೀಗ ಈ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಈ ಫೋನ್ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಲಾವಾ ಸ್ಮಾರ್ಟ್‌ಫೋನ್ ಕಂಪೆನಿ ತನ್ನ ಲಾವಾ O1 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಶೇ. 17% ರಷ್ಟು ಕಡಿತ ಮಾಡಿದೆ. ಈ ಮೊಬೈಲ್‌ನ 4 GB RAM ಮತ್ತು 64 GB ವೇರಿಯಂಟ್ ಆಫರ್‌ನಲ್ಲಿ 7,498ರೂ. ಗಳ ಬೆಲೆಗೆ ಖರೀದಿಗೆ ಲಭ್ಯ. ಅಮೆಜಾನ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್ ಆಫರ್, ಇಎಮ್‌ಐ ಸೌಲಭ್ಯಗಳನ್ನು ಪಡೆದುಕೊಂಡರೆ ಇನ್ನಷ್ಟು ರಿಯಾಯಿತಿಯಲ್ಲಿ ಫೋನ್ ಖರೀದಿಸಬಹುದು.

ಹಾಗೆಯೇ ಲಾವಾ O1 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಇದ್ದು, ಅದು 13 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದುಕೊಂಡಿದೆ. ಅಲ್ಲದೇ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ಹಾಗಾದರೇ ಲಾವಾ O1 ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಲಾವಾ O1 ಫೋನಿನ ಫೀಚರ್ಸ್ ಹೀಗಿವೆ
ಲಾವಾ O1 ಮೊಬೈಲ್ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, ವಾಟರ್‌ಡ್ರಾಪ್ ನಾಚ್ ಶೈಲಿಯ ವಿನ್ಯಾಸವನ್ನು ಒಳಗೊಂಡಿದೆ.
ಲಾವಾ O1 ಮೊಬೈಲ್ ಯುನಿಸೋಕ್ T606 ಪ್ರೊಸೆಸರ್ ವೇಗವನ್ನು ಹೊಂದಿದೆ. ಜೊತೆಗೆ Mali G57 GPU ಸಪೋರ್ಟ್ ಪಡೆದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು 3GB ವಿಸ್ತೃತ RAM ಅನ್ನು ಸಹ ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಹೊಂದಿದೆ.

ಲಾವಾ O1 ಮೊಬೈಲ್ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪ್ರಾಥಮಿಕ ರಿಯರ್ ಕ್ಯಾಮೆರಾ ಹೊಂದಿದ್ದು, ಜೊತೆಗೆ ಇದು AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಲಾವಾ O1 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದು USB ಟೈಪ್ C ಚಾರ್ಜಿಂಗ್ ಪೋರ್ಟ್ ಮೂಲಕ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 4G, ವೈಫೈ, ಬ್ಲೂಟೂತ್ ಮತ್ತು GPS, ಹಾಟ್‌ಸ್ಪಾಟ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಆಕ್ಸಿಲೆರೋಮೀಟರ್ ಅನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದಿದೆ.
ಭಾರತದಲ್ಲಿ ಲಾವಾ O1 ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಇನ್ನು ಈ ಫೋನ್ ಲೈವ್ಲಿ ಲ್ಯಾವೆಂಡರ್, ಪ್ರಿಸ್ಮ್ ಬ್ಲೂ ಮತ್ತು ಲಕ್ಸ್ ರೆಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಆಸಕ್ತ ಗ್ರಾಹಕರು ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ನಲ್ಲಿ ಖರೀದಿ ಮಾಡಬಹುದಾಗಿದೆ.


Click it and Unblock the Notifications








