ಇಂದು ಲಾವಾ O2 ಫಸ್ಟ್ ಸೇಲ್!..ಈ ಸ್ಮಾರ್ಟ್‌ಫೋನ್ ಅಗ್ಗದ ಬೆಲೆಗೆ ಲಭ್ಯ!
ಲಾವಾ ಮೊಬೈಲ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ ಲಾವಾ O2 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು (ಮಾರ್ಚ್ 27 ರಂದು) ಅಮೆಜಾನ್ ಇ ಕಾಮರ್ಸ್ ತಾಣ ಹಾಗೂ ಲಾವಾ ವೆಬ್‌ಸೈಟ್ ಮೂಲಕ ಮೂಲಕ ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭ ಆಗಲಿದೆ.
ಹೌದು, ಲಾವಾ O2 ಫೋನ್ ಫಸ್ಟ್ ಸೇಲ್ ಇಂದು ಶುರು ಆಗಲಿದೆ. ಈ ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಅಂದಹಾಗೆ ಈ ಫೋನಿನ ಬೆಲೆಯು 7,999 ರೂ. ಆಗಿದೆ.

ಅಗ್ಗದ ಬೆಲೆಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಯೂನಿಸೋಕ್ T616 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಗ್ಲಾಸ್ ಗ್ರೀನ್ ಹಾಗೂ ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಲಾವಾ O2 ಫೋನ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ O2 ಫೋನ್ - ಫೀಚರ್ಸ್
ಲಾವಾ ಸಂಸ್ಥೆಯ ಈ ಫೋನ್ 6.5 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ ಈ ಡಿಸ್‌ಪ್ಲೇಯು 269ppi ಪಿಕ್ಸೆಲ್ ಸಾಂದ್ರತೆ, 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ ಪಂಚ್ ಹೋಲ್ ನಾಚ್ ಡಿಸ್‌ಪ್ಲೇ ಶೈಲಿ ಪಡೆದುಕೊಂಡಿದೆ.

ಲಾವಾ O2 ಮೊಬೈಲ್ ಯೂನಿಸೋಕ್ T616 ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಮಾಲಿ G57 ಜಿಪಿಯು ಪವರ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದ್ದು, ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8GB RAM ಮತ್ತು 8GB ವರ್ಚುವಲ್ RAM ಆಯ್ಕೆಯೊಂದಿಗೆ 128GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಕಾಣಬಹುದಾಗಿದೆ.
ಲಾವಾ O2 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಯ್ಕೆ ಪಡೆದಿದ್ದು, ಸೆಕೆಂಡರಿ ಕ್ಯಾಮೆರಾ ಎಐ ಲೆನ್ಸ್ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಹಾಗೆಯೇ ಎಲ್‌ಇಡಿ ಫ್ಲ್ಯಾಶ್ ಆಯ್ಕೆ ನೀಡಲಾಗಿದೆ.
ಲಾವಾ O2 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಸಪೋರ್ಟಿವ ಆಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಆಡಿಯೋ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಫೇಸ್ ಅನ್‌ಲಾಕ್ ಆಯ್ಕೆ, ಡ್ಯುಯಲ್-ಸಿಮ್, 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಆಯ್ಕೆ ಇವೆ.
ಲಾವಾ O2 ಮೊಬೈಲ್ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್ 7,999 ರೂ. ಬೆಲೆಯಲ್ಲಿ ಲಭ್ಯವಿದೆ. ಇದೇ ಮಾರ್ಚ್ 27 ರಿಂದ ಅಮೆಜಾನ್ ಹಾಗೂ ಲಾವಾ ವೆಬ್‌ಸೈಟ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್ ಫೋನ್ ಮೆಜೆಸ್ಟಿಕ್ ಪರ್ಪಲ್, ಇಂಪೀರಿಯಲ್ ಗ್ರೀನ್ ಮತ್ತು ರಾಯಲ್ ಗೋಲ್ಡ್ ಕಲರ್‌ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.


Click it and Unblock the Notifications








