ಈ ಫೋನಿನ ಬೆಲೆಯಲ್ಲಿ ದಿಢೀರ್ ಇಳಿಕೆ; 128GB ಸ್ಟೋರೇಜ್..5000mAh ಬ್ಯಾಟರಿ!
ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಎಲ್ಲ ಬಗೆಯ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ನೀಡುವ ಮೂಲಕ ಗ್ರಾಹಕರಿಗೆ ಖುಷಿ ನೀಡಿದೆ. ಈ ತಾಣವು ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ಒದಗಿಸುವ ಮೂಲಕ ಆನ್‌ಲೈನ್ ಖರೀದಿದಾರರನ್ನು ತನ್ನತ್ತ ಸೆಳೆದಿದೆ. ಸದ್ಯ ಈ ಪ್ಲಾಟ್‌ಫಾರ್ಮ್ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ಡಿಸ್ಕೌಂಟ್ ಲಭ್ಯ ಮಾಡಿದ್ದು, ಆ ಪೈಕಿ ಎಂಟ್ರಿ ಲೆವೆಲ್ ಮಾದರಿಯ ಲಾವಾ O2 ಸ್ಮಾರ್ಟ್‌ಫೋನ್ ಸಹ ಗಮನಾರ್ಹ ಆಫರ್ ಪಡೆದಿದೆ. ಈ ಮೊಬೈಲ್ ಯೂನಿಸೋಕ್ T616 ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್ ಲಾವಾ O2 ( Lava O2 ) ಮೊಬೈಲ್ ಶೇ. 20% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 7,999ರೂ. ಗಳ ಕೊಡುಗೆಯ ದರದಲ್ಲಿ ಖರೀದಿಗೆ ದೊರೆಯುತ್ತದೆ. ಹಾಗೆಯೇ ಇತರೆ ಕೆಲವು ಆಯ್ದ ಬ್ಯಾಂಕ್ ಕೊಡುಗೆಗಳು ಕೂಡಾ ಗ್ರಾಹಕರಿಗೆ ಲಭ್ಯ ಆಗಲಿವೆ.

ಅಂದಹಾಗೆ ಲಾವಾ O2 ( Lava O2 ) ಮೊಬೈಲ್ ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗೆಯೇ ಇದು ಯೂನಿಸೋಕ್ T616 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಹೊಂದಿದೆ. ಇನ್ನುಳಿದಂತೆ ಲಾವಾ O2 ಫೋನ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ O2 - ಫೀಚರ್ಸ್ ಹೀಗಿವೆ
ಲಾವಾ O2 ಮೊಬೈಲ್ 6.5 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಸೌಲಭ್ಯ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರ ಜೊತೆಗೆ ಈ ಡಿಸ್‌ಪ್ಲೇಯು 269ppi ಪಿಕ್ಸೆಲ್ ಸಾಂದ್ರತೆ, 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ ಪಂಚ್ ಹೋಲ್ ನಾಚ್ ಡಿಸ್‌ಪ್ಲೇ ಶೈಲಿ ಹೊಂದಿದೆ.
ಲಾವಾ O2 ಮೊಬೈಲ್ ಯೂನಿಸೋಕ್ T616 ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಮಾಲಿ G57 ಜಿಪಿಯು ಪವರ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದ್ದು, ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8GB RAM ಮತ್ತು 8GB ವರ್ಚುವಲ್ RAM ಆಯ್ಕೆಯೊಂದಿಗೆ 128GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಕಾಣಬಹುದಾಗಿದೆ.
ಲಾವಾ O2 ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಯ್ಕೆ ಪಡೆದಿದ್ದು, ಎರಡನೇ ಕ್ಯಾಮೆರಾ ಎಐ ಲೆನ್ಸ್ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಆಯ್ಕೆ ಒದಗಿಸಲಾಗಿದೆ.
ಲಾವಾ O2 ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5mm ಆಡಿಯೋ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಫೇಸ್ ಅನ್‌ಲಾಕ್ ಆಯ್ಕೆ, ಡ್ಯುಯಲ್-ಸಿಮ್, 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಆಯ್ಕೆ ಕಾಣಬಹುದಾಗಿದೆ.


Click it and Unblock the Notifications








