ಅಗ್ಗದ ದರದ ಈ ಲಾವಾ ಮೊಬೈಲ್‌ಗೆ ಈಗ ಮತ್ತಷ್ಟು ಡಿಸ್ಕೌಂಟ್!..ಗ್ರಾಹಕರಿಗೆ ಖುಷಿ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡುವ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯ ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಈ ಪ್ಲಾಟ್‌ಫಾರ್ಮ್ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ಡಿಸ್ಕೌಂಟ್ ಲಭ್ಯ ಮಾಡಿದ್ದು, ಆ ಪೈಕಿ ಎಂಟ್ರಿ ಲೆವೆಲ್ ಮಾದರಿಯ ಲಾವಾ O2 ಸ್ಮಾರ್ಟ್‌ಫೋನ್ ಸಹ ಗಮನಾರ್ಹ ಆಫರ್ ಪಡೆದಿದೆ. ಈ ಮೊಬೈಲ್ ಯೂನಿಸೋಕ್ T616 ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಲಾವಾ O2 ( Lava O2 ) ಸ್ಮಾರ್ಟ್‌ಫೋನ್ ಶೇ. 20% ರಷ್ಟು ನೇರ ಡಿಸ್ಕೌಂಟ್ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನಿನ 8 GB RAM + 128 GB ಸ್ಟೋರೇಜ್ ವೇರಿಯಂಟ್ 7,999ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್ ಕೊಡುಗೆಗಳು ಸಹ ಖರೀದಿದಾರರಿಗೆ ಲಭ್ಯ ಆಗಲಿವೆ.

ಅಂದಹಾಗೆ ಈ ಫೋನ್ ಯೂನಿಸೋಕ್ T616 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ಮಾಡಲಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಹೊಂದಿದೆ. ಹಾಗೆಯೇ ಈ ಫೋನ್ ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಲಾವಾ O2 ಫೋನ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಲಾವಾ O2 ಫೋನ್ - ಫೀಚರ್ಸ್
ಲಾವಾ O2 ಸ್ಮಾರ್ಟ್‌ಫೋನ್ 6.5 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ ಈ ಡಿಸ್‌ಪ್ಲೇಯು 269ppi ಪಿಕ್ಸೆಲ್ ಸಾಂದ್ರತೆ, 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ ಪಂಚ್ ಹೋಲ್ ನಾಚ್ ಡಿಸ್‌ಪ್ಲೇ ಶೈಲಿ ಪಡೆದುಕೊಂಡಿದೆ.
ಲಾವಾ O2 ಸ್ಮಾರ್ಟ್‌ಫೋನ್ ಯೂನಿಸೋಕ್ T616 ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಮಾಲಿ G57 ಜಿಪಿಯು ಪವರ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13 ಓಎಸ್ ಅನ್ನು ರನ್ ಮಾಡಲಿದ್ದು, ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಆಯ್ಕೆ ಒಳಗೊಂಡಿದೆ. ಹಾಗೆಯೇ 8GB RAM ಮತ್ತು 8GB ವರ್ಚುವಲ್ RAM ಆಯ್ಕೆಯೊಂದಿಗೆ 128GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆ ಕಾಣಬಹುದಾಗಿದೆ.
ಲಾವಾ O2 ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಯ್ಕೆ ಪಡೆದಿದ್ದು, ದ್ವಿತೀಯ ಕ್ಯಾಮೆರಾ ಎಐ ಲೆನ್ಸ್ ಅನ್ನು ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್ ಆಯ್ಕೆ ಒದಗಿಸಲಾಗಿದೆ.
ಲಾವಾ O2 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಸಪೋರ್ಟಿವ ಆಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಆಡಿಯೋ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಫೇಸ್ ಅನ್‌ಲಾಕ್ ಆಯ್ಕೆ, ಡ್ಯುಯಲ್-ಸಿಮ್, 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಆಯ್ಕೆ ಕಾಣಬಹುದಾಗಿದೆ.


Click it and Unblock the Notifications








