Home
ಸುದ್ದಿಜಾಲ

8GB ವರ್ಚುವಲ್‌ RAM ಇರುವ ಈ ಫೋನಿನ ಬೆಲೆಯಲ್ಲಿ ಈಗ ಸಖತ್ ಇಳಿಕೆ!

ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ದೊಡ್ಡಣ್ಣನಾಗಿ ಗುರುತಿಸಿಕೊಂಡಿದ್ದು, ಎಲ್ಲ ಉತ್ಪನ್ನ್ಗಳಿಗೂ ರಿಯಾಯಿತಿ ನೀಡುತ್ತಾ ಸಾಗಿದೆ. ಅದರಲ್ಲಿ ಸ್ಮಾರ್ಟ್‌ಫೋನ್‌ಗಳಿಗೂ ಸಹ ಆಕರ್ಷಕ ಡಿಸ್ಕೌಂಟ್‌ ಲಭ್ಯ ಮಾಡಿರುತ್ತದೆ. ಸದ್ಯ ಲಾವಾ ಸ್ಟಾರ್ಮ್‌ 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಗ್ರಾಹಕರು ಹಿಂತಿರುಗಿ ನೋಡುವಂತಹ ರಿಯಾಯಿತಿ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಲಾವಾ ಸ್ಟಾರ್ಮ್‌ 5G ಫೋನ್‌ ಶೇ. 20% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 128GB ಸ್ಟೋರೇಜ್‌ ವೇರಿಯಂಟ್‌ 11,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇನ್ನು ಅಮೆಜಾನ್‌ ತಾಣದಲ್ಲಿ ಸಿಗುವ ಇತರೆ ಬ್ಯಾಂಕ್‌ ಆಫರ್‌ಗಳನ್ನು ಪಡೆದರೆ, ಮತ್ತಷ್ಟು ರಿಯಾಯಿತಿ ಬೆಲೆಗೆ ಖರೀದಿಸಲು ಅವಕಾಶ ಲಭ್ಯ.

8GB ವರ್ಚುವಲ್‌ RAM ಇರುವ ಈ ಫೋನಿನ ಬೆಲೆಯಲ್ಲಿ ಈಗ ಸಖತ್ ಇಳಿಕೆ!

ಇನ್ನು ಲಾವಾ ಸ್ಟಾರ್ಮ್‌ 5G ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G35 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಇದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಲಾವಾ ಸ್ಟಾರ್ಮ್‌ 5G ಮೊಬೈಲ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಸ್ಟಾರ್ಮ್‌ 5G - ಫೀಚರ್ಸ್‌ ಹೀಗಿವೆ

ಲಾವಾ ಸ್ಟಾರ್ಮ್‌ 5G ಫೋನ್‌ 6.78 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಇದ್ದು, 396ppi ಪಿಕ್ಸೆಲ್ ಸಾಂದ್ರತೆ ಬೆಂಬಲಿಸುತ್ತದೆ.

ಲಾವಾ ಸ್ಟಾರ್ಮ್ 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ. ಇದು 2.4GHz ನಲ್ಲಿ ಎರಡು ಕಾರ್ಟೆಕ್ಸ್ A76 ಕೋರ್‌ಗಳನ್ನು ಹೊಂದಿದ್ದು, 2.0GHz ನಲ್ಲಿ ಆರು ಕಾರ್ಟೆಕ್ಸ್ A55 ಕೋರ್‌ಗಳು ಮತ್ತು ಮಾಲಿ G57 MP2 GPU ಪಡೆದಿದೆ.

ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್ 13 ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಇದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಲಾವಾ ಸ್ಟಾರ್ಮ್ 5G ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸಪೋರ್ಟ್‌ ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸಲ್ ಅಲ್ಟ್ರಾವೈಡ್ ಲೆನ್ಸ್ ಜೊತೆಗೆ LED ಫ್ಲ್ಯಾಶ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಮೊಬೈಲ್ ಸ್ಕ್ರೀನ್ ಫ್ಲ್ಯಾಶ್ಡ್ಯುಯಲ್ ವೈಯಕ್ತಿಕ ಕ್ಯಾಮೆರಾ ರಿಂಗ್‌ಗಳನ್ನು ಮತ್ತು ಹಿಂಭಾಗದಲ್ಲಿ ಎಲ್‌ಇಡಿ ಫ್ಲ್ಯಾಷ್‌ಗಾಗಿ ಪ್ರತ್ಯೇಕ ರಿಂಗ್ ಅನ್ನು ಹೊಂದಿದೆ.

ಲಾವಾ ಸ್ಟಾರ್ಮ್ 5G ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಒಟಿಜಿ ಸಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.0, ಸಪೋರ್ಟ್‌ ಆಯ್ಕೆ ಇವೆ. ಇನ್ನು ಈ ಫೋನ್ ಲಾವಾ ಥಂಡರ್ ಬ್ಲಾಕ್ ಮತ್ತು ಗೇಲ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ.

Best Mobiles in India

English summary
Lava Storm 5G received attractive price drop in india. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+