ಭಾರತದಲ್ಲಿ ಬಜೆಟ್ ಬೆಲೆಯ ಲಾವಾ X2 ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ಎಷ್ಟು?
ಟೆಕ್ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಲಾವಾ ಕಂಪೆನಿ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್ ಬೆಲೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ಬಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ಲಾವಾ X2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಎಕ್ಸ್-ಸರಣಿಯ ಈ ಸ್ಮಾರ್ಟ್‌ಫೋನ್ ಕಂಪನಿಯಿಂದ ಆನ್‌ಲೈನ್-ಎಕ್ಷ ಕ್ಲ್ಯೂಸಿವ್ ಆಫರ್ ಆಗಿದೆ. ಇದು ಈ ಸರಣಿಯ ಮೊದಲ ಸ್ಮಾರ್ಟ್‌ಫೋನ್ ಆಗಿದ್ದು, ಬಜೆಟ್ ಖರೀದಿದಾರರ ಅಗತ್ಯಗಳನ್ನು ಪೂರೈಸಲು ಇದನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಹೌದು, ಲಾವಾ ಕಂಪೆನಿ ಭಾರತದಲ್ಲಿ ಹೊಸ ಲಾವಾ X2 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.5-ಇಂಚಿನ HD+ IPS ಡಿಸ್‌ಪ್ಲೇ ಹೊಂದಿದೆ. ಇದು ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫೇಸ್ ಅನ್‌ಲಾಕ್ ಅನ್ನು ಕೂಡ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಮತ್ತು ರಚನೆ
ಲಾವಾ X2 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 81.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.

ಕ್ಯಾಮೆರಾ ವಿಶೇಷ
ಲಾವಾ X2 ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ f/2.0 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇನ್ನು ರಿಯರ್ ಕ್ಯಾಮೆರಾ ಎಲ್ಇಡಿ ಫ್ಲ್ಯಾಶ್ ಅನ್ನು ಕೂಡ ಹೊಂದಿದ್ದು, ವೀಡಿಯೊ 30fps ನಲ್ಲಿ 1080p ರೆಕಾರ್ಡ್ ಮಾಡಲು ಅನುಮತಿಸಲಿದೆ.

ಬ್ಯಾಟರಿ ಮತ್ತು ಇತರೆ
ಲಾವಾ X2 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ರಿಯರ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ v5.0, 3.5 ಎಂಎಂ ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಒಟಿಜಿ ಬೆಂಬಲ ಸೇರಿವೆ. ಇದಲ್ಲದೆ ಫಿಂಗರ್ ಪ್ರಿಂಟ್ ಸೆನ್ಸಾರ್, ಅಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಲಾವಾ X2 ಸ್ಮಾರ್ಟ್‌ಫೋನ್ ಬೆಲೆ 6,999ರೂ.ಆಗಿದೆ. ಇದು ಮಾರ್ಚ್ 11 ರವರೆಗೆ ಅಮೆಜಾನ್ ನಲ್ಲಿ ಮುಂಗಡ ಬುಕ್ಕಿಂಗ್‌ಗಳಿಗೆ ರಿಯಾಯಿತಿ ದರದಲ್ಲಿ 6,599ರೂ.ಬೆಲೆಗೆ ಲಭ್ಯವಾಗಲಿದೆ. ಅಮೆಜಾನ್ ಪೇಜ್ ಪ್ರಕಾರ ಈ ಸ್ಮಾರ್ಟ್‌ಫೋನ್ ನೀಲಿ ಮತ್ತು ಸಯಾನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಗ್ರಾಹಕರ ಖರೀದಿ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅಮೆಜಾನ್ ವಿಶೇಷ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಲಾವಾ ಕಂಪೆನಿ ಹೇಳಿಕೊಂಡಿದೆ. ಲಾವಾ ಇ-ಸ್ಟೋರ್‌ನಲ್ಲಿಯೂ ಫೋನ್ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








