ಲಾವಾದಿಂದ ಹೊಸ ಸ್ಮಾರ್ಟ್‌ಫೋನ್ ಲಾಂಚ್‌; 6,999ರೂ. ಫೋನ್‌ ಜೊತೆ 2,999 ರೂ. ಮೌಲ್ಯದ ಉಡುಗೊರೆ!

|

ಚೀನಾಗೆ ಸೆಡ್ಡು ಹೊಡೆಯುತ್ತಿರುವ ಭಾರತದ ಪ್ರಮುಖ ಗ್ಯಾಜೆಟ್‌ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ಲಾವಾ ಭಾರತೀಯರಿಗೆ ಕೈಗೆಟಕುವ ದರದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬರುತ್ತಿದೆ. ಇದರ ನಡುವೆ ಈಗ ಹೊಸದೊಂದು ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲಾಗಿದ್ದು, ಈ ಫೋನ್‌ ಟ್ರೆಂಡಿಂಗ್‌ನಲ್ಲಿ ಇರುವ ಇತರೆ ಸ್ಮಾರ್ಟ್‌ಫೋನ್‌ಗಳಿಗೆ ಪೈಪೋಟಿ ನೀಡುತ್ತದೆ. ಅದರಲ್ಲೂ ಈ ಹೊಸ ಲಾವಾ ಸ್ಮಾರ್ಟ್‌ಫೋನ್ ರೆಡ್ಮಿ A1 ಪ್ಲಸ್‌ ಮತ್ತು ರಿಯಲ್‌ಮಿ C ಸರಣಿಯಲ್ಲಿ ಮಾರುಕಟ್ಟೆಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸ್ಮಾರ್ಟ್‌ಫೋನ್‌ಗಳೊಂದಿಗೆ ಸ್ಪರ್ಧಿಸುತ್ತದೆ ಎನ್ನಲಾಗಿದೆ.

ಗ್ರಾಹಕ

ಹೌದು, ಭಾರತದ ಗ್ರಾಹಕ ಎಲೆಕ್ಟ್ರಾನಿಕ್‌ ತಯಾರಿಕಾ ಕಂಪೆನಿಗಳಲ್ಲಿ ಒಂದಾದ ಲಾವಾ ತನ್ನ ಲಾವಾ X3 (Lava X3) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ A22 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಅಂತೆಯೇ 32 GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಪ್ಯಾಕ್‌ ಆಗಿದ್ದು, ಈ ಫೋನ್‌ ಇನ್ನಿತರೆ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ಬಗ್ಗೆ ಈ ಲೇಖನದಲ್ಲಿ ವಿವರಿಸಲಾಗಿದೆ ಓದಿರಿ.

ಡಿಸ್‌ಪ್ಲೇ ವಿವರ

ಡಿಸ್‌ಪ್ಲೇ ವಿವರ

ಲಾವಾ X3 ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಇದು 1600x720 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ HD+ ರೆಸಲ್ಯೂಶನ್ ನೀಡಲಿದೆ. ಹಾಗೆಯೇ 60 Hz ನ ರಿಫ್ರೆಶ್ ರೇಟ್‌ ಆಯ್ಕೆ ಇದರಲ್ಲಿದೆ. ಇನ್ನು ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಲಾವಾ X3 ಮೀಡಿಯಾ ಟೆಕ್ ಹಿಲಿಯೊ A22 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಲಿದ್ದು, ಆಂಡ್ರಾಯ್ಡ್ 12 ಗೋ ಆವೃತ್ತಿಯಲ್ಲಿ ರನ್‌ ಆಗಲಿದೆ. ಹಾಗೆಯೇ ಈ ಫೋನ್‌ 3GB RAM ಮತ್ತು 32GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದುಕೊಂಡಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ಇಂಟರ್ನಲ್‌ ಸ್ಟೋರೇಜ್‌ ಅನ್ನು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ಈ ಹೊಸ ಸ್ಮಾರ್ಟ್‌ಫೋನ್‌ ಲಾವಾ X3 ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಪ್ರಮುಖ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸರ್‌ ಹೊಂದಿದ್ದು, ಸೆಲ್ಫಿಗಾಗಿ 5 ಮೆಗಾಪಿಕ್ಸೆಪ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ರಿಯರ್‌ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್ ನೊಂದಿಗೆ ಪ್ಯಾಕ್‌ ಆಗಿದ್ದು, ಇದು AI ಮೋಡ್, ಬ್ಯೂಟಿ ಮೋಡ್, HDR ಮೋಡ್ ಮತ್ತು ಇನ್ನಿತರೆ ಹೆಚ್ಚಿನ ಫೀಚರ್ಸ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 1080p ವಿಡಿಯೋ ರೆಕಾರ್ಡಿಂಗ್ ಅನ್ನು ಇದು ಬೆಂಬಲಿಸುತ್ತದೆ.

ಬ್ಯಾಟರಿ ಹಾಗೂ ಇತರೆ

ಬ್ಯಾಟರಿ ಹಾಗೂ ಇತರೆ

ಲಾವಾ X3 ಸ್ಮಾರ್ಟ್‌ಫೋನ್‌ 10W ಚಾರ್ಜಿಂಗ್ ಅನ್ನು ಬೆಂಬಲಿಸುವ 4,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು ಸಂಪೂರ್ಣ ಚಾರ್ಜ್‌ ಆಗಲು 165 ನಿಮಿಷ ಸಮಯ ಬೇಕಿದೆ. ಇದರೊಂದಿಗೆ ವೈ-ಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಜಿಪಿಎಸ್, ಬ್ಲೂಟೂತ್ ಸೇರಿದಂತೆ ಬ್ಯಾಕ್‌ ಪ್ಯಾನಲ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದುಕೊಂಡಿದೆ.

ಬೆಲೆ ಹಾಗೂ ಲಭ್ಯತೆ

ಬೆಲೆ ಹಾಗೂ ಲಭ್ಯತೆ

ಈ ಫೋನ್‌ ಗೆ 6,999 ಗಳ ಅಗ್ಗದ ಬೆಲೆ ನಿಗದಿ ಮಾಡಲಾಗಿದ್ದು, ಮುಂಗಡವಾಗಿ ಆರ್ಡರ್ ಮಾಡುವ ಗ್ರಾಹಕರಿಗೆ ಕಂಪೆನಿಯಿಂದ 2,999 ರೂಪಾಯಿ ಮೌಲ್ಯದ ಉಚಿತ ಲಾವಾ ಪ್ರೊಬಡ್ಸ್‌ N11 ನೆಕ್‌ಬ್ಯಾಂಡ್ ಅನ್ನು ನೀಡಲಾಗುತ್ತದೆ ಎಂದು ಕಂಪೆನಿ ತಿಳಿಸಿದೆ. ಹಾಗೆಯೇ ಈ ಫೋನ್‌ ಆರ್ಕ್ಟಿಕ್ ಬ್ಲೂ, ಚಾರ್ಕೋಲ್ ಬ್ಲಾಕ್ ಮತ್ತು ಲುಸ್ಟರ್ ಬ್ಲೂ ಎಂಬ ಮೂರು ಬಣ್ಣದಲ್ಲಿ ಲಭ್ಯವಿದೆ. ಈ ಫೋನ್‌ ಅಧಿಕೃತ ಮಾರಾಟ ಡಿಸೆಂಬರ್ 20 ರಿಂದ ಪ್ರಾರಂಭವಾಗುತ್ತದೆ.

Best Mobiles in India

English summary
Lava X3 officially launched in India: Price, specifications and availability.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X