ಡಿಸೆಂಬರ್‌ 27ಕ್ಕೆ ಸೇಲ್‌ ಆಗಲಿದೆ 'ಮೇಡ್‌ ಇನ್‌ ಇಂಡಿಯಾ' ಸ್ಮಾರ್ಟ್‌ಫೋನ್‌!

|

ಸ್ವದೇಶಿ ಸ್ಮಾರ್ಟ್‌ಫೋನ್‌ ತಯಾರಕ ಲಾವಾ ಕಂಪೆನಿ ಇತ್ತೀಚಿಗೆ ಹೊಸ ಲಾವಾ X3 ಸ್ಮಾರ್ಟ್‌ಫೋನ್‌ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ ತನ್ನ ವಿಶೇಷ ಫೀಚರ್ಸ್‌ ಹಾಗೂ ಬೆಲೆಯ ಕಾರಣಕ್ಕೆ ಸಾಕಷ್ಟು ಗಮನಸೆಳೆದಿದೆ. ಮೇಡ್‌ ಇನ್‌ ಇಂಡಿಯಾದ ಈ ಫೋನ್‌ ಇದೇ ಡಿಸೆಂಬರ್‌ 27 ರಂದು ಸೇಲ್‌ ಆರಂಭಿಸಲಿದೆ. ಈ ಮೂಲಕ ಸ್ವದೇಶಿ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಕೈಗೆಟಕುವ ಬೆಲೆಯಲ್ಲಿ ಕೈ ಸೇರಲಿದೆ. ಅತಿ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೀಚರ್ಸ್‌ ಒಳಗೊಂಡ ಸ್ಮಾರ್ಟ್‌ಫೋನ್‌ ಎಂಬ ಖ್ಯಾತಿ ಕೂಡ ಹೊಂದಿದೆ.

ಸ್ಮಾರ್ಟ್‌ಫೋನ್‌

ಹೌದು, ಲಾವಾ ಕಂಪೆನಿಯ ಮೇಡ್‌ ಇನ್‌ ಇಂಡಿಯಾ ಸ್ಮಾರ್ಟ್‌ಫೋನ್‌ ಲಾವಾ X3 ಡಿಸೆಂಬರ್‌ 27ರಿಂದ ಸೇಲ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಕ್ವಾಡ್-ಕೋರ್ ಹಿಲಿಯೋ A22 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದ್ದು, ಸ್ಟ್ಯಾಂಡರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ X3 ಸ್ಮಾರ್ಟ್‌ಫೋನ್‌ 6.53 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1600x720 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 60 Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 81.76% ಸ್ಕ್ರೀನ್‌ ಟು ಬಾಡಿ ವಿನ್ಯಾಸವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 270ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದ್ದು, ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಲಾವಾ X3 ಸ್ಮಾರ್ಟ್‌ಫೋನ್‌ ಕ್ವಾಡ್-ಕೋರ್ ಹಿಲಿಯೋ A22 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಗೋ ಎಡಿಷನ್ ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇನ್‌ಬಿಲ್ಟ್‌ ಸ್ಟೋರೇಜ್‌ ಬೆಂಬಲಿಸಲಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಲಾವಾ X3 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8ಮೆಗಾಪಿಕ್ಸೆಲ್‌ ಸೆನ್ಸಾರ್‌ ಜೊತೆಗೆ VGA ಸೆಕೆಂಡರಿ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ವೀಡಿಯೊ ಕರೆಗಳು ಮತ್ತು ಸೆಲ್ಫಿಗಾಗಿ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಲಾವಾ X3 ಸ್ಮಾರ್ಟ್‌ಫೋನ್ 10W ಚಾರ್ಜಿಂಗ್ ಅನ್ನು ಬೆಂಬಲಿಸುವ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಂಪೂರ್ಣ ಚಾರ್ಜ್‌ ಆಗಲು 165 ನಿಮಿಷ ಸಮಯ ಬೇಕಿದೆ. ಇದರೊಂದಿಗೆ ವೈ-ಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಜಿಪಿಎಸ್, ಬ್ಲೂಟೂತ್ ಸೇರಿದಂತೆ ಬ್ಯಾಕ್‌ ಪ್ಯಾನಲ್‌ನಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ X3 ಸ್ಮಾರ್ಟ್‌ಫೋನ್‌ 6,999ರೂ.ಬೆಲೆಯಲ್ಲಿ ಬರಲಿದೆ. ಇದು ಅಮೆಜಾನ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ಮೂಲಕ ಡಿಸೆಂಬರ್‌ 27ಕ್ಕೆ ಸೇಲ್‌ ಆಗಲಿದೆ. ಇನ್ನು ಫೋನ್ ಆರ್ಕ್ಟಿಕ್ ಬ್ಲೂ, ಚಾರ್ಕೋಲ್ ಬ್ಲ್ಯಾಕ್ ಮತ್ತು ಲುಸ್ಟರ್ ಬ್ಲೂ ಸೇರಿದಂತೆ ಮೂರು ವಿಭಿನ್ನ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಈಗಾಗಲೇ ಫ್ರೀ ಆರ್ಡರ್‌ಗೆ ಲಭ್ಯವಿದ್ದು, ಮುಂಗಡವಾಗಿ ಆರ್ಡರ್ ಮಾಡುವ ಗ್ರಾಹಕರಿಗೆ ಕಂಪನಿಯು 2,999ರೂ. ಮೌಲ್ಯದ Lava Probuds N11 ಅನ್ನು ಉಚಿತವಾಗಿ ನೀಡುತ್ತಿದೆ.

Best Mobiles in India

English summary
Lava X3 phone may go on sale starting December 27 in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X