ಐಫೋನ್‌ನಂತೆ ಕಾಣುವ ಈ ಫೋನಿನ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ಸ್ವದೇಶಿ ಮೂಲದ ಲಾವಾ ಮೊಬೈಲ್ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅವುಗಳಲ್ಲಿ ಲಾವಾ ಯುವ 2 ಪ್ರೊ ಸ್ಮಾರ್ಟ್‌ಫೋನ್ ಒಂದಾಗಿದೆ. ಈ ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ನಲ್ಲಿ ಇದೀಗ ಬಿಗ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರನ್ನು ಹೆಚ್ಚಾಗಿ ಆಕರ್ಷಿಸುವಂತೆ ಆಗಿದೆ.
ಹೌದು, ಅಮೆಜಾನ್ ಇ ಕಾಮರ್ಸ್‌ನಲ್ಲಿ ಲಾವಾ ಸಂಸ್ಥೆಯ ಲಾವಾ ಯುವ 2 ಪ್ರೊ ಮೊಬೈಲ್ ಶೇ. 22% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4GB RAM + 64GB ವೇರಿಯಂಟ್ ಫೋನ್ 9,999 ರೂ. ದರ ಹೊಂದಿದ್ದು, ಆದ್ರೆ, ಕೊಡುಗೆಯಲ್ಲಿ ಈಗ 7,797ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಅದಲ್ಲದೇ ಕೆಲವು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.

ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಪಡೆದಿದೆ. ಹಾಗೆಯೇ ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್ ಆಯ್ಕೆ ಪಡೆದುಕೊಂಡಿದೆ. ಹಾಗದರೇ ಲಾವಾ ಯುವ 2 ಪ್ರೊ ಮೊಬೈಲ್‌ನ ಇತರೆ ಫೀಚರ್ಸ್ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಹಾಗೂ ವಿನ್ಯಾಸ ಹೇಗಿದೆ
ಲಾವಾ ಯುವ 2 ಪ್ರೊ ಮೊಬೈಲ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 269 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 60Hz ರಿಫ್ರೆಶ್ ರೇಟ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯ ವಿನ್ಯಾಸವನ್ನು ಪಡೆದಿದೆ.

ಉತ್ತಮ ಪ್ರೊಸೆಸರ್ ಸೌಲಭ್ಯ
ಲಾವಾ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್ ಸ್ಪೀಡ್ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್ ಅನ್ನು ಒಳಗೊಂಡಿದ್ದು, ಇದಲ್ಲದೆ 3 GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.
ಟ್ರಿಪಲ್ ಕ್ಯಾಮೆರಾ ರಚನೆ ಸೌಲಭ್ಯ
ಲಾವಾ ಯುವ 2 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ, HDR, ನೈಟ್‌ಮೋಡ್, ಫೋರ್ಟ್ರೆಟ್ ಮೋಡ್, AI, ಪ್ರೊ, ಪನೋರಮಾ, ಸ್ಲೋ ಮೋಷನ್, ಫಿಲ್ಟರ್‌ಗಳು, GIF, ಟೈಮ್‌ಲ್ಯಾಪ್ಸ್ ನಂತಹ ಫೀಚರ್ಸ್ ಗಳನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ
ಲಾವಾ ಯುವ 2 ಪ್ರೊ ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, USB-C ಪೋರ್ಟ್ ಮೂಲಕ 10W ಚಾರ್ಜಿಂಗ್ ಅನ್ನು ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ ಸಿಮ್ ಬೆಂಬಲ, 4G VoLTE, Wi-Fi 802.11ac, ಬ್ಲೂಟೂತ್ 5.1, GPS, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಆಯ್ಕೆ ಇವೆ.
ಕಲರ್ ಹಾಗೂ ಮೆಮೊರಿ ಆಯ್ಕೆ ಹೀಗಿದೆ
ಲಾವಾ ಕಂಪನಿಯ ಈ ಫೋನ್ 4 GB RAM ಮತ್ತು 64 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








