Home
ಸುದ್ದಿಜಾಲ

ಬಜೆಟ್‌ ದರದ ಈ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಉಳಿತಾಯ!

ಲಾವಾ ಕಂಪನಿಯು ತನ್ನ ಯುವ ಫೋನ್‌ ಸರಣಿಯಲ್ಲಿ ಕೆಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಅವುಗಳಲ್ಲಿ ಒಂದಾದ ಲಾವಾ ಯುವ 2 ಪ್ರೊ ಮೊಬೈಲ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಫೋನ್‌ ಗಮನ ಸೆಳೆದಿದೆ. ಇದೀಗ ಅಮೆಜಾನ್‌ ಈ ಕಾಮರ್ಸ್‌ ತಾಣದಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ.

ಹೌದು, ಲಾವಾ ಸಂಸ್ಥೆಯ ಲಾವಾ ಯುವ 2 ಪ್ರೊ ಫೋನ್ ಅಮೆಜಾನ್‌ನಲ್ಲಿ ಶೇ. 22% ರಷ್ಟು ಡಿಸ್ಕೌಂಟ್‌ ಹೊಂದಿದೆ. 4GB RAM + 64GB ವೇರಿಯಂಟ್‌ ಫೋನ್ 9,999 ರೂ. ದರ ಹೊಂದಿದ್ದು, ಆದ್ರೆ, ಆಫರ್‌ನಲ್ಲಿ ಗ್ರಾಹಕರು 7,799ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್‌ ಸಹ ದೊರೆಯುತ್ತದೆ.

ಬಜೆಟ್‌ ದರದ ಈ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಉಳಿತಾಯ!

ಇನ್ನು ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದು ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್‌ ಆಯ್ಕೆ ಪಡೆದಿದೆ. ಇನ್ನುಳಿದಂತೆ ಲಾವಾ ಯುವ 2 ಪ್ರೊ ಫೋನಿನ ಇತರೆ ಫೀಚರ್ಸ್‌ ಮುಂದೆ ತಿಳಿಯೋಣ ಬನ್ನಿರಿ.

ಬಜೆಟ್‌ ದರದ ಈ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಉಳಿತಾಯ!

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ಲಾವಾ ಯುವ 2 ಪ್ರೊ ಮೊಬೈಲ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 269 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದ್ದು, 60Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯ ವಿನ್ಯಾಸವನ್ನು ಪಡೆದಿದೆ.

ಪ್ರೊಸೆಸರ್‌ ಸಾಮರ್ಥ್ಯ ಯಾವುದು

ಲಾವಾ ಯುವ 2 ಪ್ರೊ ಮೊಬೈಲ್‌ ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ 3 GB ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶವಿದೆ.

ಬಜೆಟ್‌ ದರದ ಈ ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಭಾರೀ ಉಳಿತಾಯ!

ಮೂರು ಕ್ಯಾಮೆರಾ ಸೆನ್ಸಾರ್‌ ರಚನೆ

ಲಾವಾ ಯುವ 2 ಪ್ರೊ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ, HDR, ನೈಟ್‌ಮೋಡ್‌, ಫೋರ್ಟ್ರೆಟ್‌ ಮೋಡ್, AI, ಪ್ರೊ, ಪನೋರಮಾ, ಸ್ಲೋ ಮೋಷನ್, ಫಿಲ್ಟರ್‌ಗಳು, GIF, ಟೈಮ್‌ಲ್ಯಾಪ್ಸ್‌ ನಂತಹ ಫೀಚರ್ಸ್‌ ಗಳನ್ನು ಒಳಗೊಂಡಿದೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ

ಲಾವಾ ಯುವ 2 ಪ್ರೊ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. ಇದು USB-C ಪೋರ್ಟ್ ಮೂಲಕ 10W ಚಾರ್ಜಿಂಗ್ ಅನ್ನು ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ ಬೆಂಬಲ, 4G VoLTE, Wi-Fi 802.11ac, ಬ್ಲೂಟೂತ್ 5.1, GPS, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಕಲರ್ ಆಯ್ಕೆ ಹಾಗೂ ಮೆಮೊರಿ ಆಯ್ಕೆ

ಲಾವಾ ಯುವ 2 ಪ್ರೊ ಮೊಬೈಲ್‌ 4 GB RAM ಮತ್ತು 64 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Lava Yuva 2 Pro price drop by 22% in amazon website. check offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+