Home
ಸುದ್ದಿಜಾಲ

ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಸ್ವದೇಶಿ ಬ್ರ್ಯಾಂಡ್‌ ಲಾವಾ; ಹೇಗಿದೆ ಗೊತ್ತಾ ಹೊಸ ಫೋನ್‌!

ಸ್ವದೇಶಿ ಬ್ರ್ಯಾಂಡ್‌ ಲಾವಾ ಕಂಪೆನಿ ತನ್ನ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಲಾವಾ ಅಗ್ನಿ ಸ್ಮಾರ್ಟ್‌ಫೋನ್‌ಗಳ ಮೂಲಕ ರೀ ಎಂಟ್ರಿ ನೀಡಿರುವ ಲಾವಾ ಕಂಪೆನಿ ಸಖತ್‌ ಸೌಂಡ್‌ ಮಾಡ್ತಿದೆ. ಅದರಂತೆ ಇದೀಗ ಹೊಸ ಲಾವಾ ಯುವ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.

ಹೌದು, ಲಾವಾ ಯುವ 2 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯನ್ನು ಹೊಂದಿದ್ದರೂ ಕೂಡ ಬಳಕೆದಾರರಿಗೆ ಅಗತ್ಯವಾದ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಮತ್ತು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇನ್ನುಳಿದಂತೆ ಲಾವಾ ಯುವ 2 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಸಂಚಲನ ಸೃಷ್ಟಿಸಿದ ಸ್ವದೇಶಿ ಬ್ರ್ಯಾಂಡ್‌ ಲಾವಾ; ಹೇಗಿದೆ ಗೊತ್ತಾ ಫೋನ್‌

ಲಾವಾ ಯುವ 2 ಡಿಸ್‌ಪ್ಲೇ ರಚನೆ ಹೇಗಿದೆ?
ಲಾವಾ ಯುವ 2 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಇದು 'ಸಿಂಕ್' ಸ್ಕ್ರೀನ್ ಡಿಸ್‌ಪ್ಲೇ ಆಗಿದ್ದು, "ಹೈ ಸ್ಕ್ರೀನ್-ಟು-ಬಾಡಿ ಅನುಪಾತ" ಮತ್ತು "ಕಡಿಮೆ ಬೆಜೆಲ್‌ಗಳನ್ನು" ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಲಾವಾ ಯುವ 2 ಪ್ರೊಸೆಸರ್‌ ಯಾವುದು?
ಲಾವಾ ಯುವ 2 ಸ್ಮಾರ್ಟ್‌ಫೋನ್‌ ಯುನಿಸೋಕ್‌ T606 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು 512GB ವರೆಗೆ ವಿಸ್ತರಿಸಬಹುದಾಗಿದೆ.

ಭಾರತದಲ್ಲಿ ಸಂಚಲನ ಸೃಷ್ಟಿಸಿದ ಸ್ವದೇಶಿ ಬ್ರ್ಯಾಂಡ್‌ ಲಾವಾ; ಹೇಗಿದೆ ಗೊತ್ತಾ ಫೋನ್‌

ಲಾವಾ ಯುವ 2 ಕ್ಯಾಮೆರಾ ಸೆಟ್‌ಅಪ್‌
ಲಾವಾ ಯುವ 2 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಸೆಕೆಂಡರಿ VGA ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇನ್ನು ಹಿಂಬಾಗದ ಕ್ಯಾಮೆರಾ ಮಾಡ್ಯೂಲ್‌ನಲ್ಲಿ LED ಫ್ಲ್ಯಾಷ್‌ ಅನ್ನು ಸಹ ಅಳವಡಿಸಲಾಗಿದೆ.

ಲಾವಾ ಯುವ 2 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಲಾವಾ ಯುವ 2 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಎಫ್‌ಎಂ ರೇಡಿಯೋ, 4 ಜಿ VoLTE, ವೈ-ಫೈ 802.11 ಎಸಿ ಮತ್ತು ಬ್ಲೂಟೂತ್ 5.0 ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಸಂಚಲನ ಸೃಷ್ಟಿಸಿದ ಸ್ವದೇಶಿ ಬ್ರ್ಯಾಂಡ್‌ ಲಾವಾ; ಹೇಗಿದೆ ಗೊತ್ತಾ ಫೋನ್‌

ಲಾವಾ ಯುವ 2 ಬೆಲೆ ಮತ್ತು ಲಭ್ಯತೆ
ಲಾವಾ ಯುವ 2 ಸ್ಮಾರ್ಟ್‌ಫೋನ್‌ ಭಾರತದಲ್ಲಿ 6,999ರೂ. ಬೆಲೆಯಲ್ಲಿ ಲಭ್ಯವಿದೆ. ಇದನ್ನು ನೀವು ಲಾವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಿಂದ ಅಥವಾ ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳನ್ನು ಖರೀದಿಸಬಹುದಾಗಿದೆ.

ಇನ್ನು ಲಾವಾ ಕಂಪೆನಿ ಕೆಲ ತಿಂಗಳ ಹಿಂದೆ ಲಾವಾ ಅಗ್ನಿ 2 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್‌ 6.78-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಪಡೆದುಕೊಂಡಿದೆ. ಈ ಡಿಸ್‌ಪ್ಲೇ ಡಬಲ್-ರೀನ್‌ಫೋರ್ಸ್ಡ್ ಗ್ಲಾಸ್ ಪ್ರೊಟೆಕ್ಷನ್‌ ಪಡೆದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 1.0-ಮೈಕ್ರಾನ್ ಕ್ಯಾಮೆರಾ ಸೆನ್ಸಾರ್‌ ಹೊಂದಿದೆ.

Best Mobiles in India

English summary
Lava Yuva 2 with 5,000mAh battery Launched in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+