Lava Yuva 4: ಅತೀ ಕಡಿಮೆ ಬೆಲೆಗೆ ಹೊಸ ಫೋನ್ ಲಾಂಚ್; ಭರ್ಜರಿ ಫೀಚರ್ಸ್!
ಜನಪ್ರಿಯ ಸ್ವದೇಶಿ ಮೊಬೈಲ್ ಬ್ರ್ಯಾಂಡ್ ಲಾವಾ (Lava) ಕಂಪೆನಿಯು ಬಜೆಟ್ ಬೆಲೆಯ ಹಾಗೂ ಅಗ್ಗದ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಸಂಸ್ಥೆಯು ತನ್ನ ಯುವ (Yuva) ಸ್ಮಾರ್ಟ್‌ಫೋನ್ ಸರಣಿಯ ಮುಂದುವರಿದ ಭಾಗವಾಗಿ ಇದೀಗ ಹೊಸದಾಗಿ ಲಾವಾ ಯುವ 4 (Lava Yuva 4) ಮೊಬೈಲ್ ಅನ್ನು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಮೊಬೈಲ್ ಅಗ್ಗದ ಪ್ರೈಸ್‌ಟ್ಯಾಗ್ ಪಡೆದಿರುವುದು ಹೈಲೈಟ್ ಎನಿಸಿದೆ.
ಹೌದು, ಲಾವಾ ಸಂಸ್ಥೆಯು ದೇಶಿಯ ಮಾರುಕಟ್ಟೆಗೆ ನೂತನವಾಗಿ ಲಾವಾ ಯುವ 4 (Lava Yuva 4) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಅತೀ ಕಡಿಮೆ ಬೆಲೆಯನ್ನು ಹೊಂದಿದ್ದರೂ, ಕೆಲವು ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಸೆಳೆಯುವಂತಿದೆ. ಇದು 4GB RAM + 64GB ಹಾಗೂ 4GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಹಾಗೆಯೇ ಈ ನೂತನ ಮೊಬೈಲ್ UNISOC T606 chip ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು 8GB ವರ್ಚುವಲ್ RAM ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಹಾಗೂ 50MP ಪ್ರಾಥಮಿಕ ಕ್ಯಾಮೆರಾ ವ್ಯವಸ್ಥೆಯನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಇನ್ನುಳಿದಂತೆ ಲಾವಾ ಯುವ 4 (Lava Yuva 4) ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೊಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ಲಾವಾ ಯುವ 4 ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಪಂಚ್ ಹೋಲ್ ಡಿಸೈನ್ ಒಳಗೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ ಯಾವುದು
ಲಾವಾ ಯುವ 4 ಮೊಬೈಲ್ UNISOC T606 chip ಪ್ರೊಸೆಸರ್ ಪವರ್ ನಲ್ಲಿ ಕೆಲಸ ಮಾಡುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಇನ್ನು ಈ ಫೋನ್ 4GB RAM + 64GB ಹಾಗೂ 4GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಅಲ್ಲದೇ 8GB ವರ್ಚುವಲ್ RAM ಸೌಲಭ್ಯ ಪಡೆದುಕೊಂಡಿದೆ
ಕ್ಯಾಮೆರಾ ಸೆಟ್‌ಅಪ್
ಲಾವಾ ಯುವ 4 ಮೊಬೈಲ್ ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 8 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಜೊತೆಗೆ LED ಫ್ಲ್ಯಾಷ್ ಅನ್ನು ಸಹ ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯ
ಲಾವಾ ಯುವ 4 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಎಫ್‌ಎಂ ರೇಡಿಯೋ, ವೈ-ಫೈ 802.11 ಎಸಿ ಹಾಗೂ ಬ್ಲೂಟೂತ್ 5.0 ಹೊಂದಿದೆ. ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಪೋರ್ಟ್ ಮಾಡುತ್ತದೆ.
ಬೆಲೆ ಹಾಗೂ ಲಭ್ಯತೆ
ಲಾವಾ ಯುವ 4 ಮೊಬೈಲ್ ಆರಮಭಿಕ ವೇರಿಯಂಟ್ ಬೆಲೆಯು 6,999ರೂ. ಗಳು ಆಗಿದೆ. ಇನ್ನು ಈ ಫೋನ್ ವೈಟ್, ಗ್ಲೋಸಿ ಪರ್ಪಲ್ ಮತ್ತು ಗ್ಲೋಸಿ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಲಾವಾ ಪಾಲುದಾರ ಸ್ಟೋರ್‌ಗಳಲ್ಲಿ ಹಾಗೂ ರೀಟೇಲ್ ಔಟ್‌ಲೇಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








