ಸ್ವದೇಶಿ ಕಂಪೆನಿ ಲಾವಾ ಸಂಸ್ಥೆಯಿಂದ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ ಲಾಂಚ್‌!

|

ಭಾರತೀಯ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ ಲಾವಾ ಇಂಟರ್ನ್ಯಾಷನಲ್ ಲಿಮಿಟೆಡ್‌ ಈಗಾಗಲೇ ಹಲವು ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದೀಗ ಭಾರತೀಯ ಮಾರುಕಟ್ಟೆಗೆ ಹೊಸ ಲಾವಾ Z2 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಮೂಲಕ ಸ್ವದೇಶಿ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಗ್ಗದ ಪ್ರೈಸ್‌ ಟ್ಯಾಗ್‌ ಅನ್ನು ಪಡೆದುಕೊಂಡಿದೆ.

ಲಾವಾ Z2 ಮ್ಯಾಕ್ಸ್‌

ಹೌದು, ಲಾವಾ ಕಂಪೆನಿ ಹೊಸ ಲಾವಾ Z2 ಮ್ಯಾಕ್ಸ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಇದು 7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳ ಸಮಯದಲ್ಲಿ ಸಹಾಯ ಮಾಡಲು ಇ-ಲರ್ನಿಂಗ್ ಅನ್ನು ಗುರಿಯಾಗಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಲಾವಾ Z2 ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 25 ಇಂಚಿನ ಪಿಕ್ಸೆಲ್ ಸಾಂದ್ರತೆ, 20.5:9 ರಚನೆಯ ಅನುಪಾತವನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಲಾವಾ Z2 ಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 9 ಗಂಟೆಗಳ 8 ನಿಮಿಷಗಳ ಯೂಟ್ಯೂಬ್ ವೀಡಿಯೊ ಪ್ಲೇಬ್ಯಾಕ್ ಅನ್ನು ತಲುಪಿಸುತ್ತದೆ. ಇದನ್ನು 3 ಗಂಟೆ 47 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 4 ಜಿ ವೋಲ್ಟಿಇ, ಬ್ಲೂಟೂತ್ ವಿ 5, ಜಿಪಿಎಸ್, 3.5 ಎಂಎಂ ಹೆಡ್‌ಫೋನ್‌ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ Z2 ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಸಾಮರ್ಥ್ಯದ ಸಿಂಗಲ್‌ ಕಾನ್ಫಿಗರೇಶನ್‌ನಲ್ಲಿ ಬರುತ್ತದೆ. ಇದರ ಬೆಲೆ 7,799.ರೂ ಆಗಿದೆ. ಇದನ್ನು ಸ್ಟ್ರೋಕ್ಡ್ ಬ್ಲೂ ಮತ್ತು ಸ್ಟ್ರೋಕ್ಡ್ ಸಯಾನ್ ಕಲರ್ ಆಯ್ಕೆಯಲ್ಲಿ ನೀಡಲಾಗುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅನ್ನು ಲಾವಾ ವೆಬ್‌ಸೈಟ್, ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿದೆ.

Best Mobiles in India

English summary
Lava Z2 Max is powered by an unspecified MediaTek Helio quad core SoC.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X