Home
ಸುದ್ದಿಜಾಲ

ಭಾರತದಲ್ಲಿ ಅಗ್ಗದ ಬೆಲೆಯ ಲಾವಾ Z2s ಸ್ಮಾರ್ಟ್‌ಫೋನ್‌ ಬಿಡುಗಡೆ!

ದೇಶಿ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿ ಲಾವಾ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಲಾವಾ Z2s ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಕೂಡ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಆಗಿದ್ದು, 6.5 ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಪಡೆದುಕೊಂಡಿದೆ.

ಲಾವಾ

ಹೌದು, ಲಾವಾ ಕಂಪೆನಿ ಹೊಸ ಲಾವಾ Z2s ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಪ್ರೊಸೆಸರ್‌ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ 2GB RAM + 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಲಾವಾ Z2s ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಇನ್ನು ಈ ಡಿಸ್‌ಪ್ಲೇ ಯೊಂದಿಗೆ ವಾಟರ್‌ಡ್ರಾಪ್ ಶೈಲಿಯ ನಾಚ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ. ಇದು 2.5 ಡಿ ಬಾಗಿದ ಪರದೆಯೊಂದಿಗೆ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಲಾವಾ Z2s ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾವು ಬ್ಯೂಟಿ ಮೋಡ್, ಹೆಚ್‌ಡಿಆರ್ ಮೋಡ್, ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಲಾವಾ Z2s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ವಿ 5, ಮತ್ತು ಯುಎಸ್ಬಿ ಒಟಿಜಿ ಬೆಂಬಲದೊಂದಿಗೆ ಯುಎಸ್ಬಿ ಟೈಪ್-ಸಿ ಸೇರಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ Z2s ಸ್ಮಾರ್ಟ್‌ಫೋನ್‌ ಏಕೈಕ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ರೂಪಾಂತರದ ಆಯ್ಕೆಯ ಬೆಲೆ 7,299.ರೂ ಆಗಿದೆ. ಆದಾಗ್ಯೂ, ಲಾಂಚ್‌ ಆಫರ್‌ನಲ್ಲಿ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ 7,099 ರೂ.ಗೆ ಈ ಸ್ಮಾರ್ಟ್‌ಫೋನ್‌ ಅನ್ನು ಖರೀದಿಸಬಹುದಾಗಿದೆ. ಇದು ಸ್ಟ್ರೈಪ್ಡ್ ಬ್ಲೂ ಕಲರ್ ಆಯ್ಕೆಯಲ್ಲಿ ನೀಡುತ್ತಿದೆ. ಕಂಪನಿಯು ಸ್ಮಾರ್ಟ್‌ಫೋನ್‌ನಲ್ಲಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಖಾತರಿಯನ್ನು ಸಹ ನೀಡುತ್ತಿದೆ.

Best Mobiles in India

English summary
Lava Z2s has been launched in India. The budget-friendly smartphone comes with a 6.5-inch HD+ IPS display with a waterdrop-style notch and Corning Gorilla Glass 3 protection.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+