ಅಗ್ಗದ ಬೆಲೆಯ ಲಾವಾ Z3 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?

|

ಲಾವಾ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಲಾವಾ Z3 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಎಂಟ್ರಿ ಲೆವೆಲ್‌ ಫೋನ್ ಆಗಿದ್ದು, ಡಿಸ್‌ಪ್ಲೇ ನಾಚ್‌ ವಿನ್ಯಾಸವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ A20 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಲಾವಾ

ಹೌದು, ಲಾವಾ ಕಂಪೆನಿ ಭಾರತದಲ್ಲಿ ಹೊಸ ಲಾವಾ Z3 ಸ್ಮಾರ್ಟ್‌ಫೋನ್ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್ ಸ್ಟ್ರೈಪ್ಡ್ ಸಿಯಾನ್ ಮತ್ತು ಸ್ಟ್ರೈಪ್ಡ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಲಾವಾ Z3 ಸ್ಮಾರ್ಟ್‌ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ಗಳ HD+ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ ಮತ್ತು 263 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಇದ್ದು, ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಮತ್ತು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಲಾವಾ Z3 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ A20 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅಪ್‌ಡೇಟ್ ಭರವಸೆಯೊಂದಿಗೆ ಸ್ಟಾಕ್ ಇಂಟರ್‌ಫೇಸ್‌ನೊಂದಿಗೆ ಫೋನ್ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಹೊಸ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ ವಿವರ ಬಹಿರಂಗವಾಗಿಲ್ಲ. ಇದು LED ಫ್ಲ್ಯಾಷ್‌ಲೈಟ್ ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬ್ಯೂಟಿ ಮೋಡ್, HDR ಮೋಡ್, ನೈಟ್ ಮೋಡ್ ಮತ್ತು ಪೋರ್ಟ್ರೇಟ್ ಮೋಡ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಲಾವಾ Z3 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಆದರೆ ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಕನೆಕ್ಟಿವಿಟಿ ಡ್ಯುಯಲ್ 4G VoLTE, ವೈಫೈ 802.11 b/g/n, ಬ್ಲೂಟೂತ್ 5.0, GPS, USB ಟೈಪ್-C ಪೋರ್ಟ್ ಮತ್ತು 3.5mm ಆಡಿಯೋ ಜ್ಯಾಕ್ ಸೇರಿವೆ. ಈ ಫೋನ್ ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಲಾವಾ Z3 ಸ್ಮಾರ್ಟ್‌ಫೋನ್‌ 7,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಸ್ಟ್ರೈಪ್ಡ್ ಸಿಯಾನ್ ಮತ್ತು ಸ್ಟ್ರೈಪ್ಡ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ. ಇದು ಈಗ ಭಾರತದಲ್ಲಿ ಲಾವಾದ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ನಿಂದ ಖರೀದಿಸಲು ಲಭ್ಯವಿದೆ.

Best Mobiles in India

English summary
Lava has launched the Z3 smartphone in India. The Lava Z3 is a new entry-level phone that will give you modest performance.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X